ಶಾಸಕಯಶ್ ಪಾಲ್ ಸುವರ್ಣ ಅಧ್ಯಕ್ಷತೆಯ ಬ್ಯಾಂಕ್ ನಿಂದ ಅವ್ಯವಹಾರ ಸರಕಾರದಿಂದ ಉನ್ನತ ಮಟ್ಟದ ತನಿಖೆಗೆ ಅಗ್ರಹ

56

ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧ್ಯಕ್ಷತೆಯ ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕಿನಲ್ಲಿ ನಡೆದಿರುವ ಭಾರಿ ಅವ್ಯವಹಾರದ ಹಿನ್ನೆಲೆಯಲ್ಲಿ ಗ್ರಾಹಕರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಸರಕಾರ ಮಧ್ಯಪ್ರವೇಶಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ.

ಉಡುಪಿ ಮಲ್ಪೆಯ ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕಿನಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಬ್ಯಾಂಕಿನ ಅಮಾಯಕ ಗ್ರಾಹಕರು ಅನ್ಯಾಯಕ್ಕೆ ಒಳಗಾಗಿದ್ದಾರೆ. ಸುಮಾರು 1,413 ಗ್ರಾಹಕರು ತಲಾ 20 ಸಾವಿರ ರೂ.ನಂತೆ ಸಾಲ ಪಡೆದಿದ್ದಾರೆ.

ಆದರೆ ನಕಲಿ ದಾಖಲೆಗಳನ್ನು ಸೃಷ್ಟಿಸಿ 2 ಲಕ್ಷ ರೂ. ಸಾಲ ಪಡೆದಿರುವುದಾಗಿ ದಾಖಲೆಗಳನ್ನು ಸೃಷ್ಟಿಸಿ ಬರೋಬ್ಬರಿ 20 ಕೋಟಿ ರೂ.ಗೂ ಹೆಚ್ಚು ಅವ್ಯವಹಾರ ನಡೆದಿರುವ ಆರೋಪಗಳು ಕೇಳಿ ಬರುತ್ತಿವೆ. ನೂರಾರು ಗ್ರಾಹಕರು ತಾವು ಪಡೆದುಕೊಂಡ ಸಾಲದ ಹಣಕ್ಕಿಂತಲೂ ಹೆಚ್ಚಿನ ಹಣವನ್ನು ಈಗಾಗಲೇ ಪಾವತಿ ಮಾಡಿದ್ದಾರೆ

ಆದರೂ ಬ್ಯಾಂಕಿನ ಸಿಬ್ಬಂದಿ ದಬ್ಬಾಳಿಕೆ ದೌರ್ಜನ್ಯ ನಡೆಸಿ ಗ್ರಾಹಕರಿಂದ ಮತ್ತಷ್ಟು ಹಣ ಕೀಳುತ್ತಿದ್ದಾರೆಂದು ಗ್ರಾಹಕರು ಅಳಲು ತೋಡಿಕೊಳ್ಳುತ್ತಿದ್ದಾರೆ. ನಕಲಿ ದಾಖಲೆಗಳನ್ನು ಸೃಷ್ಡಿಸಿ ಮೋಸ ಮಾಡಿದ್ದಲ್ಲದೆ ಗ್ರಾಹಕರ ಮೇಲೆಯೇ ದಬ್ಬಾಳಿಕೆ ನಡೆಸುತ್ತಿರುವುದು ಅಕ್ಷಮ್ಯ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕಿನಲ್ಲಿ ಈ ಹಿಂದೆಯೂ ಹಲವು ಆರೋಪಗಳು ಕೇಳಿ ಬಂದಿವೆ. ಕಳೆದ ವರ್ಷ ಬ್ಯಾಂಕಿನ ಮ್ಯಾನೇಜರ್ ಕೂಡ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ಹಲವು ಪ್ರಭಾವಿಗಳ ಕೈವಾಡ ಇರುವುದು ಸ್ಪಷ್ಟವಾಗಿದೆ.

ಪ್ರಕರಣವೂ ಗಂಭೀರವಾಗಿದ್ದು ಕೂಡಲೇ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿ, ಅನ್ಯಾಯಕ್ಕೊಳಗಾದ ಗ್ರಾಹಕರಿಗೆ ನ್ಯಾಯ ಒದಗಿಸಿಕೊಡಬೇಕಾಗಿದೆ.ಆದ್ದರಿಂದ ವಿಶೇಷ ಪ್ರಕರಣವೆಂದು ಪರಿಗಣಿಸಿ ಕೂಡಲೇ ಕ್ರಮ ವಹಿಸಬೇಕು ಎಂದು ಬಿ.ಕೆ.ಹರಿಪ್ರಸಾದ್ ಒತ್ತಾಯಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಕಾಂಗ್ರೆಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಕೆಲಸ ಮಾಡುತ್ತಿದೆ ಜನರ ತೀರ್ಪು ಗೌರವಿಸಿ 2 ವರ್ಷ ಶಾಸಕರಾಗಿ ಕೆಲಸ ಮಾಡಲು ಜೀವರಾಜ್ ಅವರಿಗೆ ಅವಕಾಶ ನೀಡಬೇಕು’: ಬಿ ವೈ ವಿಜಯೇಂದ್ರ

ಬೆಂಗಳೂರು: 2023ರಲ್ಲಿ ಪರಾಭವಗೊಂಡಾಗಲೇ ಡಿ ಎನ್ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ವರೆಗೆ...

ಪಂಚ ರಾಜ್ಯ ಚುನಾವಣೋತ್ತರ ಸಮೀಕ್ಷೆ: ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಬಹುಮತ ತಮಿಳುನಾಡು ಡಿ ಎಂ ಕೆ ಕೇರಳ ಯುಡಿಎಫ್ ಮೈತ್ರಿಕೂಟ ಅಧಿಕಾರಕ್ಕೆ??

ನವದೆಹಲಿ: ಬುಧವಾರ ನಡೆದ ಹಲವಾರು ಚುನಾವಣೋತ್ತರ ಸಮೀಕ್ಷೆಗಳು ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಮತ್ತು ಪಶ್ಚಿಮ...

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...