ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧ್ಯಕ್ಷತೆಯ ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕಿನಲ್ಲಿ ನಡೆದಿರುವ ಭಾರಿ ಅವ್ಯವಹಾರದ ಹಿನ್ನೆಲೆಯಲ್ಲಿ ಗ್ರಾಹಕರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಸರಕಾರ ಮಧ್ಯಪ್ರವೇಶಿಸಬೇಕು
ಮತ್ತು ಹಿಂದೆ ಈ ಬ್ಯಾಂಕ್ ನಲ್ಲಿ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಅವರಿಗೆ ಕಿರುಕುಳ ನೀಡಿ ಆತ್ಮಹತ್ಯೆ ಮಾಡಿಕೊಳ್ಳಲು ಒತ್ತಡದ ಹೇರಿದವರ ಬಗ್ಗೆ ಕೂಡ ಸಮಗ್ರ ತನಿಖೆ ನಡೆಯಬೇಕು ಎಂದು ಮೀನುಗಾರಿಕಾ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ನವೀನ್ ಸಾಲ್ಯಾನ್ ಆಗ್ರಹಿಸಿದ್ದಾರೆ.
ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ನಿಂದ ಸಾಲ ಪಡೆದವರಿಗೆ ರಿಕವರಿ ಏಜೆಂಟ್ ಗಳ ಮುಖಾಂತರ ಮತ್ತು ಪೊಲೀಸರ ಮುಖಾಂತರ ಬೆದರಿಕೆ ಒಡ್ಡಿದ ಪ್ರಕರಣ ಕೂಡ ಬೆಳಕಿಗೆ ಬರುತ್ತಿದೆ ಸಾಲ ಕಟ್ಟುವಂತೆ ಪೊಲೀಸ್ ಠಾಣೆಗೆ ಕರೆಸಿ ಒತ್ತಡ ಹಾಕಿರುವ ಪ್ರಕರಣ ಕೂಡ ಬೆಳಕಿಗೆ ಬಂದಿದೆ
ಮುಂದಿನ ದಿನಗಳಲ್ಲಿ ಯಾರಿಗೆ ಕಿರುಕುಳ ನೀಡಿದ್ದಾರೆ ಅಂತವರನ್ನು ಕರೆತಂದು ಮಾಧ್ಯಮಗಳ ಮುಂದೆ ವಿವರಿಸುವ ಕೆಲಸವನ್ನು ಮಾಡುತ್ತೇವೆ ಅದರ ಜೊತೆಗೆ ಕಾನೂನಾತ್ಮಕ ಹೋರಾಟ ಮಾಡಲು ಸಮನಮನಸ್ಕರೊಂದಿಗೆ ಸೇರಿ ಉಚ್ಚ ನ್ಯಾಯಾಲಯದ ನ್ಯಾಯವಾದಿಗಳೊಂದಿಗೆ ಈ ಬಗ್ಗೆ ವಿಸ್ಕೃತ ಚರ್ಚೆ ಮಾಡಿ ಕಾನೂನು ಹೋರಾಟ ಪ್ರಾರಂಭ ಮಾಡಲಿದ್ದೇವೆ.
ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕಿನಲ್ಲಿ ಈ ಹಿಂದೆಯೂ ಹಲವು ಆರೋಪಗಳು ಕೇಳಿ ಬಂದಿದ್ದು,ಕಳೆದ ವರ್ಷ ಬ್ಯಾಂಕಿನ ಮ್ಯಾನೇಜರ್ ಕೂಡ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು ಸುಬ್ಬಣ್ಣ ಅವರ ಮೇಲೆ , ಒತ್ತಡ ಹೇರಿ ಅವರು ಉಳಿದುಕೊಂಡಿದ್ದ ಹೋಟೆಲ್ ನ ಕೋಣೆಗೆ ಯಾರೆಲ್ಲ ಬಂದು ಹೋಗಿದ್ದರು ಮತ್ತು ಅಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನ ಪ್ರಕರಣದಲ್ಲಿ ಸಾಕ್ಷಿಯಾಗಿ ದಾಖಲಿಸದೆ ಸರಿಯಾದ ರೀತಿಯಲ್ಲಿ ತನಿಖೆ ನಡೆಸಿದೆ ಇರುವುದು ಸಾರ್ವಜನಿಕ ವಲಯದಲ್ಲಿ ಆರೋಪ ಕೇಳಿ ಬಂದಿದ್ದು ಹಲವು ಪ್ರಭಾವಿಗಳ ಕೈವಾಡ ಇರುವುದು ಸ್ಪಷ್ಟವಾಗಿದೆ.
ಈ ವಿಷಯದಲ್ಲಿ ಸರ್ಕಾರ ತಕ್ಷಣ ಮದ್ಯ ಪ್ರವೇಶಿಸಿ ಈ ಅಕ್ರಮದ ಬಗ್ಗೆ ವಿಶೇಷ ತನಿಖಾ ತಂಡ ರಚಿಸಿ ಸೂಕ್ತ ತನಿಖೆ ನಡೆಸಿ ರೂ. 20 ಸಾವಿರ ಸಾಲ ನೀಡಿರುವುದನ್ನು ರೂ. 2.00 ಲಕ್ಷ ಎಂದು ನಮೂದಾಗಿರುವ ವ್ಯತ್ಯಾಸದ ಮೊತ್ತ ಯಾರಿಗೆ ಸೇರಿದೆ ಎಂಬೂದನ್ನು ಪತ್ತೆ ಹಚ್ಚಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಆ ಮೊತ್ತವನ್ನು ವಸೂಲು ಮಾಡಿ ಬ್ಯಾಂಕ್‌ನಿಂದ ಅನ್ಯಾಯಕ್ಕೆ ಒಳಗಾದ ಸಂತ್ರಸ್ತ ಗ್ರಾಹಕರನ್ನು ಸಾಲ ಮುಕ್ತರನ್ನಾಗಿಸಬೇಕು ಎಂದು ಆಗ್ರಹಿಸಿ. ಮಾಧ್ಯಮ ಕ್ಕೆ ಹೇಳಿಕೆ ನೀಡಿದ್ದಾರೆ.