ವಕ್ಫ್ ಆಸ್ತಿ ವಿವಾದ ರೈತರಿಗೆ, ಇತರರಿಗೆ ನೀಡಲಾಗಿರುವ ನೋಟಿಸ್‌ ವಾಪಸ್‌ಗೆ ಅಧಿಕಾರಿಗಳಿಗೆ ಅಧಿಕೃತ ಆದೇಶ ಮುಖ್ಯಮಂತ್ರಿ ಸಿದ್ದರಾಮಯ್ಯ

4

“ಕರ್ನಾಟಕದಲ್ಲಿ ವಕ್ಫ್ ಆಸ್ತಿ ವಿವಾದ ಭುಗಿಲೆದ್ದ ಬೆನ್ನಲ್ಲೇ ರೈತರಿಗೆ ಮತ್ತು ಇತರರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದು ಸರ್ಕಾರದ ಅಧಿಕೃತ ಆದೇಶ ಹೊರಬಿದ್ದಿದೆ.
ಹಲವಾರು ರೈತರು ಮತ್ತು ಇತರ ಜನರು ತಮ್ಮ ಆಸ್ತಿಗಳನ್ನು ವಕ್ಫ್ ಮಂಡಳಿ ಹೆಸರಿಗೆ ದಾಖಲೆ ಮಾಡಲಾಗಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರೈತರಿಗೆ ನೀಡಿರುವ ಪರಿವರ್ತನೆ ಪ್ರಕ್ರಿಯೆ ಮತ್ತು ನೋಟಿಸ್‌ಗಳನ್ನು ಹಿಂಪಡೆಯಲು ಸೂಚಿಸಿದ್ದಾರೆ.

ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಬೇಕು, ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು. ಕಾನೂನು ಬಾಹಿರವಾಗಿ ಹಾಗೂ ನೋಟಿಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು ಎಂದು ಕೆಲಸ ದಿನಗಳ ಹಿಂದೆ ಸಿಎಂ ಸೂಚನೆ ನೀಡಿದ್ದರು. ಇದೀಗ ಅಧಿಕೃತ ಆದೇಶ ಹೊರಬಿದ್ದಿದೆ.

ರೈತರ ಜಮೀನಿನಿಂದ ಆರಂಭವಾದ ಈ ವಕ್ಫ್ ಆಸ್ತಿ ವಿವಾದ ಕೊನೆಗೆ ಮಠ ಹಾಗೂ ಹಿಂದೂ ದೇವಾಲಯಗಳಿಗೂ ನೋಟಿಸ್ ನೀಡುವವರೆಗೆ ಬಂದಿತ್ತು. ಬಳಿಕ ರಾಜ್ಯದಲ್ಲಿ ರೈತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಆಡಳಿತ ಮತ್ತು ವಿಪಕ್ಷಗಳ ವಿರುದ್ಧ ತೀವ್ರ ವಿವಾದಕ್ಕೆ ಕಾರಣವಾಗಿತ್ತು.

ಹೀಗಾಗಿ ಸರ್ಕಾರ ರೈತರಿಗೆ ನೀಡಿದ್ದ ನೋಟಿಸ್ನ್ನು ಅಧಿಕೃತವಾಗಿ ವಾಪಾಸ್ ಪಡೆದುಕೊಂಡಿದೆ. ಮ್ಯುಟೇಷನ್ ಪ್ರಕ್ರಿಯೆ ಸ್ಥಗಿತಗೊಳಿಸಬೇಕು. ಈ ಕುರಿತು ನೀಡಲಾದ ನೋಟೀಸ್‌ಗಳನ್ನು ಹಿಂಪಡೆಯುವುದು, ಸದರಿ ಜಮೀನುಗಳಲ್ಲಿ ವ್ಯವಸಾಯ ಮಾಡುವ ರೈತರ ವಿರುದ್ಧ ಯಾವುದೇ ಕ್ರಮ ಜರುಗಿಸುವಂತಿಲ್ಲ ಎಂದು ಅದೇಶ ಹೊರಡಿಸಿದೆ.

ಮುಖ್ಯಮಂತ್ರಿಗಳ ನಿರ್ದೇಶನದ ನಂತರವೂ ಯಾವುದೇ ಅಧಿಕಾರಿಗಳು ರೈತರಿಗೆ ನೋಟಿಸ್ ನೀಡುವುದು ಕಂಡುಬಂದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು”

Leave a comment

Leave a Reply

Your email address will not be published. Required fields are marked *

Related Articles

ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ಅಂತಿಮ ಸೋಮವಾರ ಘೋಷಣೆ ಸಾಧ್ಯತೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ...

ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಬೆಂಗಾವಲು ವಾಹನ ಅಪಘಾತ ನಾಲ್ವರಿಗೆ ಗಾಯ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಮೈಸೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ ಮುಗಿಸಿ ವಾಪಸ್‌...

ರಾಜ್ಯದಲ್ಲಿ ‘ಪರಮಾಣು ವಿದ್ಯುತ್ ಸ್ಥಾವರ’ ಸ್ಥಾಪನೆಗೆ ತಾತ್ವಿಕ ಒಪ್ಪಿಗೆ   :: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್

ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರವನ್ನು ಸ್ಥಾಪಿಸಲು ತಾತ್ವಿಕ ಅನುಮೋದನೆ ಸಿಕ್ಕಿದೆ. ಜೊತೆಗೆ ರಾಷ್ಟ್ರೀಯ ಉಷ್ಣ ವಿದ್ಯುತ್...