ಮಹಾರಾಷ್ಟ್ರಚುನಾವಣೆ ನಂತರ ಮಹಾಯುತಿ ಪಾಲುದಾರ ರಿಂದ ಮುಖ್ಯಮಂತ್ರಿ ಆಯ್ಕೆ

81

“ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಮಹಾಯುತಿ ಪೂರ್ಣ ಬಹುಮತದೊಂದಿಗೆ ಅಧಿಕಾರವನ್ನು ಉಳಿಸಿಕೊಳ್ಳಲಿದ್ದು, ರಾಜ್ಯ ಚುನಾವಣೆಯ ನಂತರ ಮೈತ್ರಿ ಪಾಲುದಾರರು ಮುಖ್ಯಮಂತ್ರಿ ಯಾರೆಂಬುದನ್ನು ನಿರ್ಧರಿಸುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.

ನವೆಂಬರ್ 20 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾ, ಚುನಾವಣೆಯಲ್ಲಿ ಮಹಾಯುತಿ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಎಲ್ಲಾ ಮೂರು ಮೈತ್ರಿ ಪಾಲುದಾರರಾದ ಬಿಜೆಪಿ, ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷಗಳು ತಮ್ಮ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಚುನಾವಣೆಯ ನಂತರ ನೀಡಿದ ಆಶ್ವಾಸನೆಗಳಿಗೆ ಆದ್ಯತೆ ನೀಡಿ ಮೂರು ಪಕ್ಷಗಳ ಸಚಿವರ ಸಮಿತಿಯನ್ನು ರಚಿಸಲಾಗುವುದು ಎಂದು ಶಾ ಹೇಳಿದರು.

ಸದ್ಯ ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿದ್ದಾರೆ. ಚುನಾವಣೆಯ ನಂತರ ಎಲ್ಲಾ ಮೂರು ಮೈತ್ರಿ ಪಾಲುದಾರರು ಮುಖ್ಯಮಂತ್ರಿಯನ್ನು ನಿರ್ಧರಿಸುತ್ತಾರೆ. ಉದ್ಧವ್ ಠಾಕ್ರೆ ಏಕನಾಥ್ ಶಿಂಧೆಗಿಂತ ತಮ್ಮ ಮಗನಿಗೆ ಆದ್ಯತೆ ನೀಡಿದ್ದರಿಂದ ಶಿವಸೇನೆ ವಿಭಜನೆಯಾಯಿತು

ಮತ್ತು ಶರದ್ ಪವಾರ್ ಅಜಿತ್ ಪವಾರ್‌ಗಿಂತ ತಮ್ಮ ಮಗಳಿಗೆ ಆದ್ಯತೆ ನೀಡಿದ್ದರಿಂದ ಎನ್ ಸಿಪಿ ವಿಭಜನೆಯಾಯಿತು. ಈ ಪಕ್ಷಗಳು ತಮ್ಮ ಕುಟುಂಬದ ಸದಸ್ಯರಿಗೆ ಆದ್ಯತೆ ನೀಡಿ ಪಕ್ಷಗಳು ಬೇರ್ಪಟ್ಟವು. ಆದರೆ ವಿನಾಕಾರಣ ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ.

ಬಿಜೆಪಿ ಕುಟುಂಬ ಆಧಾರಿತ ರಾಜಕಾರಣದ ವಿರುದ್ಧವಾಗಿದೆ ಎಂದು ಹೇಳಿದರು. ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: ಬಿಜೆಪಿ ಪ್ರಣಾಳಿಕೆ ‘ಸಂಕಲ್ಪ ಪತ್ರ’ ಬಿಡುಗಡೆ ಮಾಡಿದ ಅಮಿತ್ ಶಾ ಬಿಜೆಪಿ ಮೀಸಲಾತಿ ವಿರೋಧಿ ಎಂಬ ಕಾಂಗ್ರೆಸ್ ಆರೋಪವನ್ನು ತಳ್ಳಿಹಾಕಿದ ಅಮಿತ್ ಶಾ, ಒಬಿಸಿಗಳಿಗೆ ಮೀಸಲಾತಿ ನೀಡಿದ್ದು ಮೋದಿ ಸರ್ಕಾರವಾಗಿದ್ದು, ಮೀಸಲಾತಿಯನ್ನು ಬಲಪಡಿಸುತ್ತೇವೆ ಎಂದರು

Leave a comment

Leave a Reply

Your email address will not be published. Required fields are marked *

Related Articles

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ಡೂಮ್ಸ್ ಡೇ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್

ನವದೆಹಲಿ: ಬ್ರಿಕ್ಸ್ ಶೃಂಗಸಭೆಗೆ ರಾಷ್ಟ್ರ ರಾಜಧಾನಿ ಸಜ್ಜಾಗಿದೆ. ನಾಳೆಯಿಂದ ಭಾರತ ಮಂಟಪದಲ್ಲಿ ಎರಡು ದಿನ ಭಾರತದ...

ವಿಮಾನದಲ್ಲಿ ಬಾಂಬ್ ಬೆದರಿಕೆ ತುರ್ತುಭೂ ಸ್ಪರ್ಶ ಮಾಡಿದ ಇಂಡಿಗೋ ವಿಮಾನ

“ಅಹಮದಾಬಾದ್: ಲಕ್ನೋದಿಂದ ಸೌದಿ ಅರೇಬಿಯಾದ ದಮ್ಮಾಮ್‌ಗೆ  ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ...

370ನೇ ವಿಧಿಯನ್ನು ರದ್ದುಗೊಳಿಸಿದ ನಂತರಬದಲಾದ ಜಮ್ಮು ಮತ್ತು ಕಾಶ್ಮೀರ ವಂದೇ ಮಾತರಂ’ ಸಂಪೂರ್ಣ ರಾಷ್ಟ್ರಗೀತೆ ಗಾಯನ,

ಶ್ರೀನಗರ: 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಬದಲಾಗಿದೆ. ಮುಸ್ಲಿಂ ಬಹುಸಂಖ್ಯಾತ...

ಡ್ರಗ್ಸ್ ಸೇವನೆ ದೃಢಪಟ್ಟ ಹಿನ್ನೆಲೆ ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ

ನವದೆಹಲಿ: ಕಳೆದ ತಿಂಗಳು ಫುಕೆಟ್ ನಿಂದ ದೆಹಲಿಗೆ ಆಗಮಿಸುತ್ತಿದ್ದಾಗ ಏಕಾಏಕಿ ಎತ್ತರವನ್ನು ಕಳೆದುಕೊಂಡು ಪ್ರಯಾಣಿಕರಿಗೆ ಜೀವಭೀತಿ...