ರಾಜ್ಯ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ: ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ನಿರತರಾಗಿದ್ದಾರೆ.
ಶಿಗ್ಗಾಂವಿಯಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ ಖಾನ್ ಪಠಾಣ್ ಪರ ಪ್ರಚಾರ ಸಭೆ ನಡೆಸಲಿದ್ದಾರೆ. ಬೆಂಗಳೂರು: ರಾಜ್ಯದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪಚುನಾಣೆಯ ಬಹಿರಂಗ ಪ್ರಚಾರ ಇಂದು ಸೋಮವಾರ ಸಂಜೆ 6 ಗಂಟೆಗೆ ಅಂತ್ಯವಾಗಲಿದೆ.
ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಮನೆ ಮನೆಗೆ ತೆರಳಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಅವಕಾಶವಿದೆ. ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ನಿರತರಾಗಿದ್ದಾರೆ. ಶಿಗ್ಗಾಂವಿಯಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ ಖಾನ್ ಪಠಾಣ್ ಪರ ಪ್ರಚಾರ ಸಭೆ ನಡೆಸುತ್ತಿದ್ದಾರೆ.
ಉಪ ಚುನಾವಣೆ: ಮೂರೂ ಪಕ್ಷಗಳಿಗೆ ಪ್ರತಿಷ್ಠೆ ಕಣ, ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ಸವಾಲು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಂಸದ ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್, ಇಂದು ವಿವಿಧೆಡೆ ಪ್ರಚಾರ ನಡೆಸುತ್ತಿದ್ದಾರೆ.
ಈ ನಡುವೆ, ಸಂಡೂರು ಹಾಗೂ ಚನ್ನಪಟ್ಟಣದಲ್ಲೂ ಅಭ್ಯರ್ಥಿಗಳು ಹಾಗೂ ರಾಜಕೀಯ ನಾಯಕರು ಮತಯಾಚಿಸುತ್ತಿದ್ದಾರೆ.ಮೂರೂ ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳು ಬೃಹತ್ ಸಮಾವೇಶ ಹಮ್ಮಿಕೊಂಡು ಶಕ್ತಿ ಪ್ರದರ್ಶನಕ್ಕೆ ಮುಂದಾಗಿವೆ.
ಚನ್ನಪಟ್ಟಣ ಉಪ ಚುನಾವಣೆ: ‘ಇಗ್ಗಲೂರು ಡ್ಯಾಮ್’ ಎಲ್ಲರ ಹಾಟ್ ಫೇವರಿಟ್; ಕ್ರೆಡಿಟ್ ಪಡೆಯಲು ನಾಯಕರ ಫೈಟ್! ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮತದಾರರಲ್ಲದವರು ಇಂದು ಸಂಜೆ 5.30ರ ನಂತರ ಕ್ಷೇತ್ರ ಬಿಟ್ಟುಹೋಗುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆಯಲಿದೆ.
ನವೆಂಬರ್ 23ರಂದು ಫಲಿತಾಂಶ ಹೊರಬೀಳಲಿದೆ, ಅದೇ ದಿನ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆ ಫಲಿತಾಂಶ ಕೂಡ ಪ್ರಕಟವಾಗಲಿದೆ.