thekarnatakatoday.com
National

ಅಂಗನವಾಡಿ ಕಾರ್ಯಕರ್ತೆಯರನ್ನು ಸರಕಾರಿ ನೌಕರರು ಎಂದು ಪರಿಗಣಿಸಿ ಹೈಕೋರ್ಟ್ ಮಹತ್ವದ ತೀರ್ಪು

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಇದು ನಿಜಕ್ಕೂ ಸಿಹಿ ಸುದ್ದಿ. ಅಂಗನವಾಡಿ ನೌಕರರನ್ನು ಖಾಯಂ ಹುದ್ದೆಯಲ್ಲಿ ಇರುವ ಸರ್ಕಾರಿ ನೌಕರರಂತೆ ಪರಿಗಣಿಸಿ ಎಂದು ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ

ಕೇಂದ್ರ ಸರ್ಕಾರದ ಸಮಗ್ರ ಶಿಶು ಅಭಿವೃದ್ಧಿ ಯೋಜನೆ – ಐಸಿಡಿಎಸ್‌ ಅಡಿಯಲ್ಲಿ 1983ರಿಂದ 2010ರ ನಡುವಿನ ಅವಧಿಯಲ್ಲಿ ನೇಮಕವಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಗುಜರಾತ್ ಹೈಕೋರ್ಟ್‌ನ ನ್ಯಾ. ನಿಖಿಲ್ ಎಸ್. ಕರಿಯಲ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಹತ್ವದ ಆದೇಶ ನೀಡಿದೆ.

ಹತ್ತು ವರ್ಷಗಳಿಗೂ ಹೆಚ್ಚಿನ ಅವಧಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ದಿನಕ್ಕೆ ಆರು ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡುತ್ತಿದ್ದಾರೆ. ಆದರೆ, ಅವರಿಗೆ ರಾಜ್ಯ ಸರ್ಕಾರಿ ನೌಕರರಿಗೆ ಸಿಗುವ ಸೌಲಭ್ಯ, ಪ್ರಯೋಜನಗಳು ಸಿಗುತ್ತಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿತ್ತು.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ತಿಂಗಳಿಗೆ ಕೇವಲ ರೂ. 5000/- ಸಿಗುತ್ತಿದೆ. ಸರ್ಕಾರಿ ನೌಕರರ ಜೊತೆಗೆ ಅಂಗನವಾಡಿ ನೌಕರರ ವೇತನವನ್ನು ಹೋಲಿಸಿದರೆ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ತಾರತಮ್ಯ ಆಗುತ್ತಿದೆ ಎಂಬುದು ಸ್ಪಷ್ಟವಾಗಿ ಎದ್ದು ಕಾಣುತ್ತಿದೆ ಎಂದು ನ್ಯಾಯಪೀಠ ಹೇಳಿದೆ.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ನೀಡಲಾಗಿರುವ ಹೊಣೆ ಮತ್ತು ಅವರ ಕರ್ತವ್ಯ ಬಹಳ ದೊಡ್ಡದು. ಸರ್ಕಾರಿ ನೌಕರರ ಹೊಣೆ ಮತ್ತು ಕರ್ತವ್ಯಕ್ಕೆ ಹೋಲಿಸಿದರೂ ತಾರತಮ್ಯ ಗೊತ್ತಾಗುತ್ತದೆ ಎಂದು ನ್ಯಾಯಪೀಠ ಹೇಳಿದೆ.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ತಾತ್ಕಾಲಿಕ ಹುದ್ದೆಯಲ್ಲಿರುವ ನಾಲ್ಕನೇ ದರ್ಜೆಯ ನೌಕರರಿಗಿಂತಲೂ ಕಡಿಮೆ ವೇತನ ನೀಡಲಾಗುತ್ತಿದೆ ಎಂದು ನ್ಯಾಯಪೀಠ ವಿಷಾದ ವ್ಯಕ್ತಪಡಿಸಿದೆ.

ಈ ಎರಡು ಹುದ್ದೆಗಳನ್ನು ಸರ್ಕಾರಿ ಸೇವೆಯಲ್ಲಿ ಸೇರಿಸಲು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ನೀತಿಯೊಂದನ್ನು ರೂಪಿಸಬೇಕು ಎಂದು ನ್ಯಾಯಪೀಠ ಸೂಚನೆ ನೀಡಿದೆ. ಈ ನೀತಿಯ ಪರಿಣಾಮವಾಗಿ ನೌಕರರಿಗೆ ಸರ್ಕಾರಿ ಪ್ರಯೋಜನಗಳು ದೊರೆಯುವಂತಾಗಬೇಕು ಎಂದು ಅದು ತೀರ್ಪಿನಲ್ಲಿ ತಿಳಿಸಿದೆ.

ಆದೇಶ ಪ್ರಕಟವಾದ ಆರು ವಾರಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವೇತನಕ್ಕೆ ಸಂಬಂಧಿಸಿದಂತೆ ನೀತಿಯೊಂದನ್ನು ರೂಪಿಸಬೇಕು ಎಂದು ತೀರ್ಪಿನಲ್ಲಿ ಹೇಳಲಾಗಿದೆ.

ಈ ಆದೇಶ ದೇಶಾದ್ಯಂತ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೌಕರಿಗೆ ನೆರವಾಗಲಿದೆ ಎಂದು ಹೇಳಲಾಗಿದೆ.

Related posts

ರಾಜ್ಯ ವಕ್ಫ್  ಮಂಡಳಿಗೆ 10 ಕೋಟಿ ಮಂಜೂರು ಆದೇಶ ಹಿಂಪಡೆದ ಮಹಾರಾಷ್ಟ್ರ ಸರಕಾರ

The Karnataka Today

ಗಾಂಧಿ ಕುಟುಂಬವನ್ನು ಮೆಚ್ಚಿಸುವ ಸಲುವಾಗಿ ಸಾರ್ವಕರ್ ಅವರನ್ನು ಅವಮಾನಿಸಿದ ಮಣಿಶಂಕರ್ ಅಯ್ಯರ್ ಗೆ ಗಾಂಧಿ ಕುಟುಂಬದಿಂದ ಅವಮಾನ

The Karnataka Today

ಜಾರ್ಖಂಡ್ ನೂತನ ಮುಖ್ಯಮಂತ್ರಿ ಯಾಗಿ ಹೇಮಂತ್ ಸೊರೆನ್ ನ್ ನವೆಂಬರ್ 28ಕ್ಕೆ ಪ್ರಮಾಣವಚನ ಸ್ವೀಕಾರ

The Karnataka Today

Leave a Comment