thekarnatakatoday.com
State

ಮತ್ತೆ ಅಲ್ಪ ಸಂಖ್ಯಾತರ ಓಲೈಕೆ ಯತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ತ ವಿಪಕ್ಷಗಳ ಆಕ್ರೋಶ

ಕರ್ನಾಟಕ ರಾಜ್ಯ ಸರಕಾರ ಮತ್ತೆ ಅಲ್ಪಸಂಖ್ಯಾತರು ತುಷ್ಟಿಕರಣಕ್ಕೆ ಮುಂದಾದ ವಿಚಾರಕ್ಕೆಬಾರಿ ವಿರೋಧ ವ್ಯಕ್ತವಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಲ್ಪಸಂಖ್ಯಾತರ ಓಲೈಕೆ ನೀತಿ ಮುಖ್ಯಮಂತ್ರಿಗಳ ವಿರುದ್ಧ ಪ್ರತಿಪಕ್ಷ ಬಿಜೆಪಿಗೆ ರಾಜ್ಯ ವ್ಯಾಪಿ ಹೋರಾಟಕ್ಕೆ ಮುನ್ನುಡಿ ಬರೆಯಲು ದಾರಿಯಾಗಿದೆ.

ಕರ್ನಾಟಕ ಸರ್ಕಾರವು ಸರ್ಕಾರಿ ಸಿವಿಲ್ ಕಾಮಗಾರಿಗಳ ಒಂದು ಕೋಟಿ ರೂ.ವರೆಗಿನ ಗುತ್ತಿಗೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇಕಡಾ 4ರಷ್ಟು ಮೀಸಲಾತಿ ನೀಡಲು ಮುಂದಾಗಿದೆ.

ಮುಖ್ಯಮಂತ್ರಿಗಳು ಈ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದು, ಕಾಯ್ದೆಗೆ ತಿದ್ದುಪಡಿಗೆ ಸೂಚನೆ ನೀಡಿದ್ದಾರೆ. ಶಾಸಕ ಬಸನಗೌಡ ಯತ್ನಾಳ್ ಸರ್ಕಾರದ ಈ ನಿರ್ಧಾರವನ್ನು ವಿರೋಧಿಸಿದ್ದಾರೆ.

ಮಹತ್ವದ ಬೆಳವಣಿಗೆಯೊಂದರಲ್ಲಿ, ಸರ್ಕಾರದ ಸಿವಿಲ್ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸುವ ಪ್ರಸ್ತಾವನೆಗೆ ಸಿಎಂ ಸಿದ್ದರಾಮಯ್ಯ ಸಮ್ಮತಿಸಿದ್ದಾರೆ ಎಂದು ತಿಳಿದುಬಂದಿದೆ.

ಮುಸ್ಲಿಂ ಸಮುದಾಯಕ್ಕೆ ಸರ್ಕಾರದ ಗುತ್ತಿಗೆಯಲ್ಲಿ ಮೀಸಲಾತಿ ತರಲು ಸಲ್ಲಿಕೆಯಾಗಿರುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ ಎನ್ನಲಾಗಿದ್ದು, ಕಾಯ್ದೆಯಲ್ಲಿ ಸಂಬಂಧಿತ ತಿದ್ದುಪಡಿ ಮಾಡುವಂತೆ ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಒಂದು ಕೋಟಿ ರೂ.ವರೆಗಿನ ಕಟ್ಟಡ ನಿರ್ಮಾಣ ಕಾಮಗಾರಿಗಳ ಸಾರ್ವಜನಿಕ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯವರಿಗೆ ಶೇ. 4 ಮೀಸಲಾತಿ ನೀಡುವ ಬಗ್ಗೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಪ್ರಸ್ತಾವನೆ ಸಲ್ಲಿಸಿತ್ತು. ಇದಕ್ಕೆ ಅನುಮೋದನೆ ನೀಡಿರುವ ಸಿಎಂ, ತಿದ್ದುಪಡಿಗೆ ಸೂಚನೆ ನೀಡಿದ್ದಾರೆ.

ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ವೇಳೆ ಕಾಯ್ದೆಗೆ ತಿದ್ದುಪಡಿ ತಂದು ಮಂಡನೆ ಮಾಡಲು ಸರ್ಕಾರ ಮುಂದಾಗಿದೆ. ಈಗಾಗಲೇ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಗುತ್ತಿಗೆಯಲ್ಲಿ ಶೇ.24ರ ಮೀಸಲಾತಿ ನೀಡಿರುವ ಸರ್ಕಾರ, ಒಬಿಸಿ ಸಮುದಾಯಕ್ಕೆ ಶೇ 4 ಮೀಸಲಾತಿ ನೀಡಿದೆ.2A ಅಡಿ ಗುತ್ತಿಗೆಯಲ್ಲಿ ಶೇ 15 ಮೀಸಲಾತಿ ನೀಡಲಾಗಿದೆ. ಒಟ್ಟು ಸರ್ಕಾರದ ಕಾಮಗಾರಿಗಳಲ್ಲಿ ಶೇ.43ರಷ್ಟು ಮೀಸಲಾತಿ ನೀಡಲಾಗಿದೆ. ಈಗ ಮುಸ್ಲಿಂ ಸಮುದಾಯಕ್ಕೂ ಸರ್ಕಾರದ ಕಾಮಗಾರಿಗಳಲ್ಲಿ ಶೇ.4 ರಷ್ಟು ಮೀಸಲಾತಿ ನೀಡಲು ಮುಂದಾಗಿದೆ

ಪ್ರವರ್ಗ 2ಬಿ ಅಡಿ 1 ಕೋಟಿ ರೂ. ವರೆಗಿನ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಮುಸ್ಲಿಂ ಸಚಿವರು ಮತ್ತು ಶಾಸಕರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಸಚಿವ ಜಮೀರ್ ಅಹ್ಮದ್ ಖಾನ್, ರಹೀಂ ಖಾನ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಪತ್ರ ಬರೆದಿದ್ದರು. ಈ ಪತ್ರಕ್ಕೆ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ತಸ್ವೀ‌ರ್ ಸೇರ್, ಅಬ್ದುಲ್ ಜಬ್ಬಾರ್, ಎನ್ ಎ ಹ್ಯಾರಿಸ್, ರಿಜ್ವಾನ್‌ ಅರ್ಷದ್, ಆಸೀಫ್‌ ಸೇರ್, ಖನೀಜಾ ಫಾತಿಮಾ, ಇಟ್ಬಾಲ್ ಹುಸೇನ್, ಬಲ್ಕಿಸ್ ಬಾನು ಸಹಿ ಮಾಡಿದ್ದರು. ಇದೀಗ ಕಾಯ್ದೆಗೆ ತಿದ್ದುಪಡಿ ಮಾಡಿ ಕಡತ ಮಂಡಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

Related posts

ಕಲಬುರಗಿ ದಕ್ಷ ಪ್ರಾಮಾಣಿಕ ಕೇಂದ್ರ ಕಾರಾಗೃಹ ಅಧೀಕ್ಷಕಿ ವಿರುದ್ಧ ಷಡ್ಯಂತ್ರ ವಿರೋಧಿಸಿ ನಾಳೆ ಹಿಂದೂ ಜಾಗೃತಿ ಸೇನೆ ಪ್ರತಿಭಟನೆ

The Karnataka Today

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಸಚಿವ ಆರ್ ಬಿ ತಿಮ್ಮಾಪುರ್ ರಾಜೀನಾಮೆ ????

The Karnataka Today

ಅಂಬೇಡ್ಕರ್ ಕುರಿತು ಹೇಳಿಕೆ ನೀಡಿ ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದ ಅಮಿತ್ ಶಾ:: ಡಿ ಕೆ ಶಿವಕುಮಾರ್

The Karnataka Today

Leave a Comment