thekarnatakatoday.com
National

ಬೆಂಗಳೂರಿನಿಂದ ಶಬರಿಮಲೆಗೆ ಕೆಎಸ್ಆರ್‌ಟಿಸಿ ವೋಲ್ವೋ ಬಸ್ ಪ್ರಾರಂಭ

“ಕರ್ನಾಟಕದ ಅಯ್ಯಪ್ಪಸ್ವಾಮಿ ಭಕ್ತರಿಗೆ KSRTC ಸಿಹಿಸುದ್ದಿ ನೀಡಿದ್ದು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಶಬರಿಮಲೆಗೆ ವೋಲ್ವೋ ಬಸ್ ಸೇವೆ ಆರಂಭಿಸುತ್ತಿದೆ.

. ಕರ್ನಾಟಕದ ಅಯ್ಯಪ್ಪಸ್ವಾಮಿ ಭಕ್ತರ ಬಹುದಿನಗಳ ಕನಸು ಕೊನೆಗೂ ನನಸಾಗಿದ್ದು, ಬೆಂಗಳೂರಿನಿಂದ ಶಬರಿಮಲೆ ಯಾತ್ರೆ ಕೈಗೊಳ್ಳುವ ಅಯ್ಯಪ್ಪ ಭಕ್ತರಿಗೆ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ಹೊಸದಾಗಿ ವೋಲ್ವೋ ಬಸ್ ಸೇವೆ ಆರಂಭಿಸಿದೆ

ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು, ಇದೇ ನವೆಂಬರ್ 29ರಿಂದ ಹೊಸ ವೋಲ್ವೋ ಬಸ್ ಸಂಚಾರ ಆರಂಭವಾಗಲಿದೆ ಎಂದು ಹೇಳಿದೆ.

ಪ್ರಕಟಣೆಯಲ್ಲಿರುವಂತೆ ಬೆಂಗಳೂರಿನಿಂದ-ನೀಲಕ್ಕಲ್ (ಪಂಪಾ-ಶಬರಿಮಲೈ) ವರೆಗೆ ಓಡಾಟ ನಡೆಸಲಿದೆ ಎಂದು ಕೆಎಸ್ಆರ್ಟಿಸಿ ತಿಳಿಸಿದೆ. ನವೆಂಬರ್ 29 ರಿಂದ ಬೆಂಗಳೂರು-ನೀಲಕ್ಕಲ್ (ಪಂಪಾ-ಶಬರಿಮಲೈ) ಮಾರ್ಗದಲ್ಲಿ ವೋಲ್ವೋ ಬಸ್ ಸೇವೆ ಆರಂಭವಾಗಲಿದೆ.

ಅಂದು ಶಾಂತಿನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1.50ಕ್ಕೆ ಬಸ್ ಹೊರಟು, ಮರುದಿನ ಬೆಳಗ್ಗೆ 6.45ಕ್ಕೆ ನೀಲಕ್ಕಲ್ ತಲುಪುತ್ತದೆ. ನೀಲಕ್ಕಲ್‌ನಿಂದ ಸಂಜೆ 6 ಗಂಟೆಗೆ ಹೊರಡುವ ಬಸ್ ಮರುದಿನ ಬೆಳಗ್ಗೆ 10 ಗಂಟೆಗೆ ಬೆಂಗಳೂರು ತಲುಪಲಿದೆ. ಇನ್ನು ಪ್ರಯಾಣ ದರ ವಯಸ್ಕರಿಗೆ 1,750 ರೂ. ನಿಗದಿಪಡಿಸಲಾಗಿದೆ ಎಂದು ಕೆಎಸ್ಆರ್ ಟಿಸಿ ಮಾಹಿತಿ ನೀಡಿದೆ.

Related posts

ದೇಶಾದ್ಯಂತ ಸಂಚಲನ ಮೂಡಿಸಿದ್ದ ಟೆಕ್ಕಿ ಅತುಲ್ ಆತ್ಮಹತ್ಯೆ ಪ್ರಕರಣ ಪತ್ನಿಸಹಿತ ಮೂವರ ಬಂಧನ

The Karnataka Today

ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಪ್ರತಿಭಟನೆ ಸದನದ ಬಾವಿಗಿಳಿದ ಸದಸ್ಯರನ್ನು ಸದನದಿಂದ ಹೊರ ಹಾಕಿದ ಕೋರ್ಟ್ ಮಾರ್ಷಲ್

The Karnataka Today

ಕಾಂಗ್ರೆಸ್ ಪಕ್ಷ ಗೋಮಾಂಸ  ನಿಷೇಧಿಸುವಂತೆ ಪತ್ರ ಬರೆದರೆ ತಕ್ಷಣದಿಂದಲೇ ರಾಜ್ಯದಲ್ಲಿ ಗೋಮಾಂಸ ನಿಷೇಧಕ್ಕೆ ಆದೇಶ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ

The Karnataka Today

Leave a Comment