ಶ್ರೀರಂಗಪಟ್ಟಣ ಸುರಕ್ಷಿತ ಸ್ಮಾರಕ ಜಾಮ ಮಸೀದಿಯಲ್ಲಿ ಅಕ್ರಮ ಮದರಸಾ ತೆರವಿಗೆ ರಾಜ್ಯ ಸರಕಾರಕ್ಕೆ ನಿರ್ದೇಶಿಸುವಂತೆ ಹೈಕೋರ್ಟಿಗೆ ಮನವಿ ಸಲ್ಲಿಸಿದ ಕೇಂದ್ರ ಸರ್ಕಾರ

2

“ಶ್ರೀರಂಗಪಟ್ಟಣದ ಐತಿಹಾಸಿಕ ಜಾಮಾ ಮಸೀದಿ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಮದರಸಾವನ್ನು ತೆರವುಗೊಳಿಸುವಂತೆ ಮಂಡ್ಯ ಜಿಲ್ಲಾಡಳಿತ ಮತ್ತು ರಾಜ್ಯ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೇಂದ್ರ ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ ಮನವಿ ಮಾಡಿದೆ.

ವಕ್ಫ್ ಬೋರ್ಡ್ ಈ ಕ್ರಮವನ್ನು ವಿರೋಧಿಸಿದ್ದು, ಮಸೀದಿಯನ್ನು ತನ್ನ ಆಸ್ತಿ ಎಂದು ಹೇಳಿಕೊಂಡಿದೆ ಮತ್ತು ಅಲ್ಲಿ ಮದರಸಾ ನಡೆಸುವ ಹಕ್ಕನ್ನು ಸಮರ್ಥಿಸಿಕೊಂಡಿದೆ.

ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದ ಅಭಿಷೇಕ್ ಗೌಡ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಅವರಿದ್ದ ವಿಭಾಗೀಯ ಪೀಠ ಈ ಪ್ರಕರಣದ ವಿಚಾರಣೆ ನಡೆಸಿತು.

ಮಸೀದಿಯೊಳಗೆ ಅನಧಿಕೃತ ಮದರಸಾ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. 1951 ರಲ್ಲಿ ಜಾಮಾ ಮಸೀದಿಯನ್ನು ಸಂರಕ್ಷಿತ ಸ್ಮಾರಕವಾಗಿ ಘೋಷಿಸಲಾಯಿತು.

ಆದರೂ ಅನಧಿಕೃತ ಮದರಸಾ ಚಟುವಟಿಕೆಗಳು ಅಲ್ಲಿ ಮುಂದುವರೆದಿವೆ ಎಂದು ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುತ್ತಿರುವ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ ಅರವಿಂದ್ ಕಾಮತ್ ವಾದಿಸಿದರು

. ಕಾಮತ್ ಅವರು, ಮಸೀದಿಯಿಂದ ಮದರಸಾವನ್ನು ತೆರವುಗೊಳಿಸುವಂತೆ ಮಂಡ್ಯ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು. ಪ್ರತಿವಾದದಲ್ಲಿ, ರಾಜ್ಯ ಸರ್ಕಾರ ಮತ್ತು ವಕ್ಫ್ ಮಂಡಳಿಯ ವಕೀಲರು ಈ ಮನವಿಯನ್ನು ವಿರೋಧಿಸಿದರು.

ವಕ್ಫ್ ಬೋರ್ಡ್ 1963 ರಿಂದ ಈ ಆಸ್ತಿಯ ಮಾಲೀಕ ಎಂದು ಗುರುತಿಸಲಾಗಿದೆ ಮತ್ತು ಆದ್ದರಿಂದ ಅಲ್ಲಿ ಮದರಸಾ ಚಟುವಟಿಕೆಗಳನ್ನು ನಡೆಸುವುದು ಕಾನೂನುಬದ್ಧವಾಗಿದೆ ಎಂದು ಹೇಳಿದರು. ಎರಡೂ ಕಡೆಯ ವಾದ ಆಲಿಸಿದ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಅವರು, ವಿಚಾರಣೆಯನ್ನು ನವೆಂಬರ್ 20ಕ್ಕೆ ಮುಂದೂಡಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ವಿಧಾನಸಭೆ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲ್ ನಲ್ಲಿ ರಮ್ಮಿ ಅಡಿ ಕೃಷಿ ಖಾತೆಯನ್ನು ಕಳೆದುಕೊಂಡ ಸಚಿವ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲಿನಲ್ಲಿ ರಮ್ಮಿ ಆಡುತ್ತಿದ್ದ ಮಾಣಿಕ್ರಾವ್ ಕೊಕಾಟೆ ಕೃಷಿ...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ತೀರ್ಪು ವಿಶೇಷ ನ್ಯಾಯಾಲಯದಿಂದ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್...

ಅವಧೇಶಾನಂದ ಮಹಾರಾಜ್ ಕೊಲೆ ಪ್ರಕರಣ: ಆರ್ ಎಸ್ಎಸ್ ಮಾಜಿ ಪ್ರಚಾರಕ ಉತ್ತಮ್ ಗಿರಿಗೆ ಜೀವಾವಧಿ ಶಿಕ್ಷೆ

ಸಿರೋಹಿ: 2018 ರಲ್ಲಿ ಏಕಲ್ ವಿದ್ಯಾಲಯದ ಪೋಷಕ ಅವಧೇಶಾನಂದ ಮಹಾರಾಜ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

2008 ಮಾಲೆಗಾಂವ್ ಸ್ಫೋಟ ಪ್ರಕರಣ: ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಸೇರಿ 7 ಆರೋಪಿಗಳು ಖುಲಾಸೆ

ಮುಂಬೈ: 2008 ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್,...