ಬಿಜೆಪಿ ಸರಕಾರದ ಅವಧಿಯ  ಕೋವಿಡ್ ಹಗರಣ ಎಸ್ಐಟಿ ತನಿಖೆ ಬಿಜೆಪಿ ಸಂಸದ ಡಾ ಸಿ ಎನ್ ಮಂಜುನಾಥ್ ರಿಗೂ ಸಂಕಷ್ಟ

73

“ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ ಸಾವಿರಾರು ಕೋಟಿ ರೂಪಾಯಿ ಕೋವಿಡ್ ಹಗರಣದ ತನಿಖೆಗೆ ವಿಶೇಷ ತನಿಖಾ ತಂಡ ಎಸ್ ಐ ಟಿ ರಚನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ ಬೆನ್ನಲ್ಲೇ ಇದೀಗ ಬಿಜೆಪಿ ಸಂಸದ ಡಾ. ಸಿಎನ್ ಮಂಜುನಾಥ್ ಅವರಿಗೆ ಸಂಕಷ್ಟ ಎದುರಾಗಿದೆ.

ಕೋವಿಡ್ ಹಗರಣ ಕುರಿತಂತೆ ನ್ಯಾ. ಮೈಕಲ್ ಡಿ ಕುನ್ಹಾ ಆಯೋಗವು ಮಧ್ಯಂತರ ವರದಿ ನೀಡಿದ್ದು, 918 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂದು ಉಲ್ಲೇಖಿಸಿದೆ.

ಈ ಹಿನ್ನೆಲೆಯಲ್ಲಿ ಎಸ್ಐಟಿ ರಚನೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಿಎನ್ ಮಂಜುನಾಥ್ ಕೋವಿಡ್ ಸಂದರ್ಭದಲ್ಲಿ ಟಾಸ್ಕ್ ಫೋರ್ಸ್ ಕಮಿಟಿ ಮುಖ್ಯಸ್ಥರಾಗಿದ್ದರು. ಟಾಸ್ಕ್ ಫೋರ್ಸ್ ನಿರ್ಣಯದಂತೆ ಕೆಲ ಉಪಕರಣಗಳ ಖರೀದಿ ಆಗಿದೆ

. ಈ ಹಿನ್ನೆಲೆ ಟಾಸ್ಕ್ ಫೋರ್ಸ್ ಬಗ್ಗೆಯೂ ಕುನ್ಹಾ ವರದಿಯಲ್ಲಿ ಪ್ರಸ್ತಾಪವಾಗಿದೆ. ಇದು ಮಂಜುನಾಥ್ ಅವರಿಗೆ ಸಂಕಷ್ಟ ತಂದಿಟ್ಟಿದೆ.

ಕೊವಿಡ್ ವೇಳೆ ಕಿಟ್, ಔಷಧಿ ಖರೀದಿ ವೇಳೆ ಅಕ್ರಮ ನಡೆದಿದೆ. ಕೊವಿಡ್ ಹಗರಣ ಸಂಬಂಧ ಹಲವು ದೂರುಗಳು ದಾಖಲಾಗಿದ್ದವು. ಈ ಕುರಿತು ಸಮಗ್ರ ತನಿಖೆಗೆ ಎಸ್ಐಟಿ ರಚನೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಅಗತ್ಯ ಬಿದ್ದರೆ ಎಫ್ ಐ ಆರ್  ದಾಖಲಾಗುತ್ತೆ, ಚಾರ್ಜ್ ಶೀಟ್ ಕೂಡ ಹಾಕುತ್ತೇವೆ. ಯಾರ ವಿರುದ್ಧ ಎಫ್ ಐ ಆರ್ ದಾಖಲಿಸಬೇಕೆಂದು ಎಸ್ ಐ ಟಿ  ನಿರ್ಧರಿಸುತ್ತದೆ ಎಂದು ಸಚಿವ ಎಚ್ ಕೆ ಪಾಟೀಲ್ ಸ್ಪಷ್ಟಪಡಿಸಿದರು.

Leave a comment

Leave a Reply

Your email address will not be published. Required fields are marked *

Related Articles

ಚೀನಾ ಪಾಕಿಸ್ತಾನ ಬಾಂಗ್ಲಾ ದೇಶದ ಗಡಿ ಪ್ರದೇಶದ ರಾಜ್ಯಗಳ ರೈಲ್ವೆ ಮೂಲಭೂತ ಸೌಲಭ್ಯ ಹೆಚ್ಚಳಕ್ಕೆ ಆದ್ಯತೆ ನೀಡಿದ ಕೇಂದ್ರ ಸರಕಾರ

“ನವದೆಹಲಿ: ಚೀನಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದೊಂದಿಗಿನ ತನ್ನ ಗಡಿಗಳಲ್ಲಿ ರೈಲ್ವೆ ಮೂಲಸೌಕರ್ಯವನ್ನು ನವೀಕರಿಸಲು ಭಾರತ 45,000...

ಮೋದಿ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಬಿಜೆಪಿ ನಾಯಕರೂ ಪ್ರಧಾನಿ ಹೇಳಿದಂತೆ ವಿಪಕ್ಷೀಯರ ಮೇಲೆ ಅಶ್ಲೀಲ ಪದ ಬಳಕೆ ನಿಲ್ಲಿಸಲಿ; ರಾಜ್ ಠಾಕ್ರೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಸದಸ್ಯರಿಗೆ ತಮ್ಮ ವಿರೋಧಿಗಳ ವಿರುದ್ಧ ಕೀಳು ಭಾಷೆ ಬಳಸದಂತೆ...

ಮೇಕೆದಾಟು ಯೋಜನೆಗೆ ಕರ್ನಾಟಕಕ್ಕೆ ಕಾನೂನುಬದ್ಧ ಹಕ್ಕಿದೆ, ತಮಿಳುನಾಡಿನ ಸಮ್ಮತಿ ಅಗತ್ಯವೇ ಇಲ್ಲ ಕೇಂದ್ರ ಜಲಶಕ್ತಿ ಸಚಿವಾಲಯ

ಬೆಂಗಳೂರು: ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕದ ಪರವಾಗಿ ಕೇಂದ್ರ ಸರ್ಕಾರ ಮಹತ್ವದ ಸ್ಪಷ್ಟನೆ...

ಕಾಕ್ರೋಚ್ ಜನತಾ ಪಕ್ಷಕ್ಕೆ 1 ಕೋಟಿ ದೇಣಿಗೆ ನೀಡಿ ಕಾನೂನು ನೆರವು ಉಚಿತ ಎಂದ ಕಪಿಲ್ ಸಿಬಲ್

“ನವದೆಹಲಿ: ನೀಟ್ ಅಕ್ರಮ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗೆ ಕಾನೂನು ಬೆಂಬಲ ನೀಡುತ್ತೇನೆ ಮತ್ತು...