ನವೆಂಬರ್ 17,18 ಉಡುಪಿ ನ್ಯಾಯಾಲಯ ಮತ್ತು ವಕೀಲರಸಂಘದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮ

2

ನ.17,18 ರಂದು ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮ ಉಡುಪಿ: ನ.17 ಮತ್ತು ನ.18 ರಂದು ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ.

ಎಂದು ಪತ್ರಿಕಾಗೋಷ್ಠಿಯಲ್ಲಿ ಶತಮಾನೋತ್ತರ ರಜತ ಮಹೋತ್ಸವ ಸಮಿತಿಯ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ಈ ಕಾರ್ಯಕ್ರಮದ ಕುರಿತಾದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ನ. 17 ರ ಬೆಳಗ್ಗೆ 10 ಗಂಟೆಗೆ ಉಡುಪಿ ನ್ಯಾಯಾಲಯದ ಆವರಣದಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಸರ್ವೋಚ್ಚ ನ್ಯಾಯಾಲಯದ ನ್ಯಾಯಧೀಶ ನ್ಯಾ| ಅರವಿಂದ್ ಕುಮಾರ್ ಉದ್ಘಾಟಿಸಲಿದ್ದು, ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ನ್ಯಾ| ಎನ್.ವಿ ಅಂಜಾರಿಯಾ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಆಂಧ್ರ ಪ್ರದೇಶದ ರಾಜ್ಯಪಾಲ ನ್ಯಾ| ಎಸ್. ಅಬ್ದುಲ್ ನಜೀರ್ ಸಾಹೇಬ್ ಉಪಸ್ಥಿತರಿರುವರು. ಹೈಕೋರ್ಟ್ ನ್ಯಾಯಾಧೀಶ ಮತ್ತು ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ನ್ಯಾ| ಇ.ಎಸ್. ಇಂದಿರೇಶ್, 125 ರ ಸಂಭ್ರಮದ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಕಾನೂನು ಸಚಿವ ಎಚ್.ಕೆ. ಪಾಟೀಲ್, ಸಾರ್ವಜನಿಕ ಸೇವಾ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ, ಅಡ್ವೋಕೇಟ್ ಜನರಲ್ ಶಶಿಕಿರಣ್ ಎಸ್. ಶೆಟ್ಟಿ, ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್. ಭರತ್ ಕುಮಾರ್, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ ಉಪಸ್ಥಿತರಿರುವರು.

ಇದೇ ವೇದಿಕೆಯಲ್ಲಿ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾ| ಎಂ.ಜಿ. ಉಮಾ, ನ್ಯಾ| ರಾಮಚಂದ್ರ ಡಿ. ಹುದ್ದಾರ್, ನ್ಯಾ| ಟಿ. ವೆಂಕಟೇಶ್ ನಾಯ್ಕ್ ರವರನ್ನು ಸನ್ಮಾನಿಸಲಾಗುವುದು. ನ. 18 ರ ಸಂಜೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಹೈಕೋರ್ಟ್ ನ್ಯಾಯಾಧೀಶ ನ್ಯಾ| ಎಸ್.ವಿಶ್ವಜಿತ್ ಶೆಟ್ಟಿ ವಹಿಸಲಿದ್ದಾರೆ.

ಹೈಕೋರ್ಟ್ ನ್ಯಾಯಾಧೀಶರು ಮತ್ತು ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ನ್ಯಾ| ಇ.ಎಸ್. ಇಂದಿರೇಶ್ ಸಮಾರೋಪ ಭಾಷಣ ಮಾಡಲಿದ್ದಾರೆ. ಹೈಕೋರ್ಟ್ ನ್ಯಾಯಾಧೀಶರಾದ ನ್ಯಾ| ಶಿವಶಂಕರ್ ಬಿ., ನ್ಯಾ| ಅಮರಣ್ಣವರ್, ನ್ಯಾ| ಸಿ.ಎಂ. ಜೋಷಿ, ನ್ಯಾ| ಟಿ.ಜಿ ಶಿವಶಂಕರೇಗೌಡ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ನ್ಯಾ| ಕಿರಣ್.ಎಸ್. ಗಂಗಣ್ಣನವರ್ ಉಪಸ್ಥಿತರಿರುವರು.

ಇದೇ ವೇಳೆ ಉಡುಪಿ ವಕೀಲರ ಸಂಘದ ಸದಸ್ಯರಾಗಿ, ನ್ಯಾಯಾಧೀಶರಾಗಿ ಮತ್ತು ಸರಕಾರಿ ಅಭಿಯೋಜಕರಾಗಿ ಆಯ್ಕೆಯಾಗಿ ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿರುವ ಉಡುಪಿ ವಕೀಲರ ಸಂಘದ ಮಾಜಿ ಸದಸ್ಯರಿಗೆ ಮತ್ತು ವಕೀಲರ ಸಂಘದ ಮಾಜಿ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳನ್ನು ಸನ್ಮಾನಿಸಲಾಗುವುದು.

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಿಂದ ಉಡುಪಿ ವಕೀಲರ ಸಂಘದ ಸದಸ್ಯರಿಗೆ ನೀಡಲಾಗುವ ವಿಶಿಷ್ಟ ಆರೋಗ್ಯ ಕಾರ್ಡನ್ನು ಮಾಹೆಯ ಸಹ ಕುಲಪತಿ ಡಾ. ಎಚ್.ಎಸ್. ಬಲ್ಲಾಳ್ ಇವರ ಸಮ್ಮುಖದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ನ್ಯಾ| ಎಸ್.ವಿ. ಅಂಜಾರಿಯಾ ಬಿಡುಗಡೆ ಮಾಡಲಿರುವರು.

ಹಿರಿಯ ಸಿವಿಲ್ ನ್ಯಾಯಧೀಶ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್.ಯೋಗೇಶ್ ಮಾತನಾಡಿ, ಇದು ಕೇವಲ ವಕೀಲರಿಗೆ ಸಂಬಂಧಿಸಿದ ಕಾರ್ಯಕ್ರಮವಲ್ಲ. ಸಾರ್ವಜನಿಕರು ಮುಕ್ತವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು.

ಸಂವಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಾನೂನಿನ ಬಗ್ಗೆ ಅರಿವನ್ನು ಮೂಡಿಸಿಕೊಳ್ಳಿ ಎಂದು ಕರೆ ನೀಡಿದರು‌. ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಉಡುಪಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಎ.ಆರ್, ಉಪಾಧ್ಯಕ್ಷ ಮಿತ್ರ ಕುಮಾರ್ ಶೆಟ್ಟಿ, ಜಂಟಿ ಕಾರ್ಯದರ್ಶಿ ಬೈಲೂರು ರವೀಂದ್ರ ದೇವಾಡಿಗ, ಖಜಾಂಚಿ ಗಂಗಾಧರ ಹೆಚ್.ಎಂ, ಸಾಂಸ್ಕೃತಿಕ ಕಾರ್ಯದರ್ಶಿ ಸಂತೋಷ್ ಕುಮಾರ್ ಮೂಡುಬೆಳ್ಳೆ,

ವಕೀಲರ ಸಂಘ ವಿವಿಧ ಉಪ ಸಮಿತಿಗಳ ಮುಖ್ಯಸ್ಥರಾದ ಎಂ. ಶಾಂತಾರಾಮ್ ಶೆಟ್ಟಿ, ಅಸದುಲ್ಲಾ ಕಟಪಾಡಿ, ಎನ್.ಕೆ. ಆಚಾರ್ಯ, ಬಿ. ನಾಗರಾಜ್, ಆನಂದ ಮಡಿವಾಳ, ಸತೀಶ್ ಪೂಜಾರಿ, ಅಮೃತಕಲಾ, ಆರೂರು ಸುಕೇಶ್ ಶೆಟ್ಟಿ, ವಕೀಲರಾದ ಶಿವಾನಂದ್ ಆಮೀನ್ ಪಾಂಗಾಳ, ಶಶಿರಾಜ್ ಪೈಯ್ಯಾರ್, ಪ್ರಜ್ವಲ್ ಶೆಟ್ಟಿ, ಆಕಾಶ್ ಅಂಬಾಗಿಲು ಉಪಸ್ಥಿತರಿದ್ದರು.

ಸಂವಾದ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಕಾರ್ಯದ ವಿವರ ಸಂವಾದ – 1: ನ.17 ರ ಮಧ್ಯಾಹ್ನ 2.30 ರಿಂದ 3.30: ವಿಷಯ – ಎವಿಡೆನ್ಸ್ ಆ್ಯಕ್ಟ್ & ಅಪ್ಲಿಕೇಶನ್ ಆಫ್ ಎಲೆಕ್ಟ್ರಾನಿಕ್ ಎವಿಡೆನ್ಸ್ ವಿಚಾರ ಮಂಡನೆ – ಹೈಕೋರ್ಟ್ ನ್ಯಾಯವಾದಿ ಮಧುಕರ್ ದೇಶಪಾಂಡೆ ಸಂವಾದ – 2: 3.45 ರಿಂದ 4.45: ವಿಷಯ – ಡ್ರಾಫ್ಟಿಂಗ್ ಆಫ್ ಪ್ಲೀಡಿಂಗ್ಸ್ & ಅಡ್ವೊಕೆಸಿ ವಿಚಾರ ಮಂಡನೆ – ನ್ಯಾ| ರಾಮಚಂದ್ರ ಡಿ. ಹುದ್ದಾರ್ ನಂತರ ಸಂಜೆ ವೈಕುಂಠ ಬಾಳಿಗ ಕಾನೂನು ಕಾಲೇಜು, ಉಡುಪಿ, ಕಾರ್ಕಳ, ಕುಂದಾಪುರ ಮತ್ತು ಉಡುಪಿ ವಕೀಲರ ಸಂಘದವರು ವಿವಿಧ ಮನೋರಂಜನಾ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ನಂತರ ಕಲಾಮಯಂ ಉಡುಪಿ ತಂಡದಿಂದ ಜಾನಪದ ನೃತ್ಯ ವೈಭವ ನಡೆಯಲಿದೆ. ಸಂವಾದ – 3: ನ. 18 ರ ಬೆಳಗ್ಗೆ 10 ರಿಂದ 11: ವಿಷಯ – ಸೈಬರ್ ಕ್ರೈಮ್ & ಲಾ ರಿಲೇಟಿಂಗ್ ಟು ಇನ್ ಫಾರ್ಮೆಶನ್ ಟೆಕ್ನಾಲಜಿ ವಿಚಾರ ಮಂಡನೆ – ನ್ಯಾ| ಸಿ.ಎಮ್ ಜೋಶಿ ಸಂವಾದ – 4: ಬೆಳಗ್ಗೆ 11.15 ರಿಂದ 12.15: ವಿಷಯ – ಆರ್ಟ್ ಆಫ್ ಕ್ರಾಸ್ ಎಕ್ಸಾಮಿನೇಷನ್ ಅಪ್ರಿಸಿಯೇಶನ್ ಆಫ್ ಎವಿಡೆನ್ಸ್ ವಿಚಾರ ಮಂಡನೆ – ಹೈಕೋರ್ಟ್ ನ್ಯಾಯವಾದಿ ಎಸ್.ಶಂಕರಪ್ಪ ಮಧ್ಯಾಹ್ನ 2.30ರಿಂದ ಪ್ರಾಣೇಶ್ ಗಂಗಾವತಿ ತಂಡದಿಂದ “ನಗೆ ಹಬ್ಬ” ಕಾರ್ಯಕ್ರಮ ನಡೆಯಲಿದೆ.

ಸಮಾರೋಪ ಸಮಾರಂಭದ ನಂತರ ಸಿನೆಮಾ ಹಿನ್ನಲೆ ಗಾಯಕರಾದ ಜಸ್ಮರನ್ ಸಿಂಗ್ ಮತ್ತು ಅನನ್ಯ ಪ್ರಕಾಶ್‌ ರವರನ್ನೊಳಗೊಂಡ ಕರ್ನಾಟಕ ಹಾಗೂ ಕೇರಳದ ಕಲಾವಿದರ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.

Leave a comment

Leave a Reply

Your email address will not be published. Required fields are marked *

Related Articles

ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ರಾಜ್ಯದ 18 ಸ್ಥಳಗಳಲ್ಲಿ ಎನ್ಐಎ ದಾಳಿ

ನವದೆಹಲಿ: ಬಜರಂಗದಳ ಸದಸ್ಯ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶನಿವಾರ...

ಪರಶುರಾಮ್ ಥೀಮ್ ಪಾರ್ಕ್ ವಿಚಾರದಲ್ಲಿ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರ ಗೊಂದಲದ ನಡೆ ಕೂಡಲೆ ಸೃಷ್ಟಿಕರಣ ನೀಡಿ ::ನಿತಿನ್ ಪೂಜಾರಿ ಆಗ್ರಹ

ಧಾರ್ಮಿಕ ನಂಬಿಕೆಯ ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ : ಉದಯಕುಮಾರ್ ಶೆಟ್ಟಿ ಅವರು ಸಲ್ಲಿಸಿದ ಹೈಕೋರ್ಟ್...

ಧರ್ಮಸ್ಥಳ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ಪ್ರಕರಣದ...

ಧರ್ಮಸ್ಥಳ ಆಗೆದ ಸ್ಥಳದಲ್ಲಿ ಸಿಗದ ಅವಶೇಷಗಳು ಕಾರ್ಯಾಚರಣೆ ನಾಳೆಗೆ ಮುಂದೂಡಿದ ಎಸ್ಐಟಿ

“ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು...