ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಮನೆ ಮೇಲೆ ರಾಕೆಟ್ ದಾಳಿ

62

“ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವಿನ ಕಾಳಗ ಮತ್ತಷ್ಟು ತಾರಕ್ಕೇರಿದ್ದು ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರ ಮನೆ ಮೇಲೆ ಹಿಜ್ಬುಲ್ಲಾ ಮತ್ತೊಮ್ಮೆ ದಾಳಿ ನಡೆಸಿದೆ.

ಕೈಸ್ರಾದಲ್ಲಿರುವ ನೆತನ್ಯಾಹು ಅವರ ನಿವಾಸದ ಬಳಿ ಎರಡು ರಾಕೆಟ್‌ಗಳು ಬಿದ್ದಿದ್ದು, ದಾಳಿ ಸಮಯದಲ್ಲಿ ನೆತನ್ಯಾಹು ಅಥವಾ ಅವರ ಕುಟುಂಬವು ನಿವಾಸದಲ್ಲಿ ಇರಲಿಲ್ಲ.

ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್‌, ಎಲ್ಲ ಮಿತಿಗಳನ್ನು ಮೀರಿದ ಕೃತ್ಯವಿದು. ಇದನ್ನು ಸಹಿಸಲಾಗದು ಎಂದು ಹೇಳಿದ್ದಾರೆ

. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನಿ ನೆತನ್ಯಾಹು ಅವರ ಹತ್ಯೆಗೆ ಯತ್ನಿಸುತ್ತಿರುವ ಇರಾನ್‌ ಹಾಗೂ ಅದರ ಬೆಂಬಲಿತ ಪಡೆಗಳು ಈ ಕೃತ್ಯವೆಸಗಿರಬಹುದು’ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಇಸ್ರೇಲಿ ಅಧ್ಯಕ್ಷ ಐಸಾಕ್ ಹೆರ್ಜೋಗ್ ಅವರು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಸಾರ್ವಜನಿಕ ವಲಯದಲ್ಲಿ ಹಿಂಸಾಚಾರ ಹೆಚ್ಚಳವಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ, ಇಂತಹ ಕೃತ್ಯ ಮುಂದುವರಿದರೆ ಸುಮ್ಮನಿರೋದಿಲ್ಲ ವಿರುದ್ಧ ವಿರೋಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರುಶಿನ್ ಬೆಟ್‌ನ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದ್ದು, ಘಟನೆಗೆ ಕಾರಣರಾದವರನ್ನು ತ್ವರಿತವಾಗಿ ತನಿಖೆ ಮಾಡುವ ಮತ್ತು ಅದಕ್ಕೆ ತಕ್ಕ ಪಾಠ ಕಲಿಸುವ ತುರ್ತು ಅಗತ್ಯವನ್ನು ವ್ಯಕ್ತಪಡಿಸಿದ್ದೇನೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ ಕಳೆದ ತಿಂಗಳು ಅಕ್ಟೋಬರ್ 19 ರಂದು ನೆತನ್ಯಾಹು ಅವರ ಮನೆಯ ಮೇಲೆ ಮೊದಲ ಬಾರಿಗೆ ದಾಳಿ ನಡೆಸಲಾಗಿತ್ತು, ಹಿಜ್ಬುಲ್ಲಾ ನಡೆಸಿದ ಈ ವಿಫಲ ದಾಳಿ ವಿರುದ್ಧ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ತಕ್ಕ ಉತ್ತರ ಕೊಟ್ಟೇ ಕೊಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು

Leave a comment

Leave a Reply

Your email address will not be published. Required fields are marked *

Related Articles

ಹೊರ್ಮುಜ್ ಜಲಸಂಧಿಯಲ್ಲಿ ಕ್ಷಿಪಣಿ ದಾಳಿ: ಭಾರತೀಯ ನಾವಿಕ ಸಾವು, ಇರಾನ್ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ ಭಾರತ

ನವದೆಹಲಿ: ಹಾರ್ಮುಜ್ ಜಲಸಂಧಿಯಲ್ಲಿ ಯುಎಇಗೆ ಸೇರಿದ ಎರಡು ತೈಲ ಸಾಗಣೆ ಹಡಗುಗಳ ಮೇಲೆ ಇರಾನ್ ನಡೆಸಿದ...

ಭಾರತ ವಿರುದ್ಧ ಯುದ್ಧಕ್ಕೂ ಹಿಂಜರಿಯುವುದಿಲ್ಲ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಉದ್ಧಟತನ

“ಇಸ್ಲಾಮಾಬಾದ್: ಸಿಂಧೂ ಜಲ ಒಪ್ಪಂದದ ವಿವಾದದ ನಡುವೆ ಭಾರತಕ್ಕೆ ಪಾಕಿಸ್ತಾನ ಮತ್ತೊಮ್ಮೆ ಯುದ್ಧದ ಬೆದರಿಕೆ ಹಾಕಿದೆ....

ತನ್ನ ಪ್ರದೇಶಗಳಿಗೆ ಇಸ್ಲಾಮಿ ಹೆಸರುಗಳ ಕೈ ಬಿಟ್ಟು ಹಿಂದೂ ಹೆಸರು ಮರುನಾಮಕರಣ, ಬದಲಾಗುತ್ತಿದೇಯಾ ಪಾಕಿಸ್ತಾನ??

ಲಾಹೋರ್: ಭಾರತದ ಪ್ರಧಾನಿ ಮೋದಿ ಅಖಂಡ ಭಾರತದ ಕುರಿತು ಮಾಡಿದ್ದ ಭಾಷಣ ಹಸಿರಾಗಿರುವಂತೆಯೇ ಅತ್ತ ಪಾಕಿಸ್ತಾನದಲ್ಲಿ...

ದೇಶ ರಕ್ಷಣೆಗೆ 92 ಶತಕೋಟಿ ಡಾಲರ್ ಬಜೆಟ್ ವಿಶ್ವದ 5ನೇ ರಾಷ್ಟ್ರವಾಗಿ ಎಲೈಟ್ ಗ್ರೂಪ್ ಸೇರಿದ ಭಾರತ!

ನವದೆಹಲಿ: ರಕ್ಷಣಾ ವಿಭಾಗದಲ್ಲಿ ಭಾರತ ಐತಿಹಾಸಿಕ ಮೈಲುಗಲ್ಲು ಸಾಧಿಸಿದ್ದು, ದೇಶದ ರಕ್ಷಣಾ ಬಜೆಟ್ 92 ಶತಕೋಟಿ...