ಈಜುಕೊಳದಲ್ಲಿ ಮೂವರು ಯುವತಿಯರು ಮೃತಪಟ್ಟ ಪ್ರಕರಣ ಇಬ್ಬರ ಬಂಧನ

69

“ಈಜುಕೊಳದಲ್ಲಿ ಮೂವರು ಯುವತಿಯರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್‌ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ರೆಸಾರ್ಟ್ ಮಾಲೀಕ ಮನೋಹರ್ ವಿ.ಪುತ್ರನ್ ಮತ್ತು ವ್ಯವಸ್ಥಾಪಕ ಭರತ್ ಬಂಧನಕ್ಕೊಳಗಾದವರಾಗಿದ್ದಾರೆ.

ಮಂಗಳೂರು ಹೊರವಲಯ ಉಚ್ಚಿಲ ಬೀಚ್ ಬಳಿಯ ರೆಸಾರ್ಟ್ ನಲ್ಲಿ ಈಜುಕೊಳದಲ್ಲಿ ಈಜಾಡುವಾಗ ನಿಶಿತ ಎಂ.ಡಿ. (21), ಪಾರ್ವತಿ ಎಸ್ (20), ಕೀರ್ತನ ಎನ್(21) ಉಸಿರುಗಟ್ಟಿ ಸಾವನ್ನಪ್ಪಿದ್ದರು.

ಮೈಸೂರಿನ ಜಿಎಸ್ ಎಸ್ ಎಸ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಅ್ಯಂಡ್‌ ಕಮ್ಯುನಿಕೇಷನ್ ವಿಭಾಗದ ವಿದ್ಯಾರ್ಥಿನಿಯರಾಗಿದ್ದ ಇವರು, ಕಳೆದ ಶನಿವಾರ ರೆಸಾರ್ಟ್ ನಲ್ಲಿ ರೂಮನ್ನು ಬಾಡಿಗೆಗೆ ಪಡೆದುಕೊಂಡಿದ್ದರು.

ಭಾನುವಾರ ಬೆಳಿಗ್ಗೆ ವಿಡಿಯೊ ಮಾಡುವುದಕ್ಕಾಗಿ ಮೊಬೈಲ್ ಫೋನ್‌ನಲ್ಲಿ ಕ್ಯಾಮೆರಾ ಆನ್ ಮಾಡಿಟ್ಟು ನೀರಿಗಿಳಿದಿದ್ದರು. ಈ ವೇಳೆ ಆಳವಿರುವ ಕಡೆ ತೆರಳಿರುವ ಯುವತಿಯರು, ಈಜು ಬಾರದೆ ಮುಳುಗಿ ಮೃತಪಟ್ಟಿದ್ದಾರೆಂದು ವರದಿಗಳು ತಿಳಿಸಿವೆ.

ಘಟನೆ ಬೆನ್ನಲ್ಲೇ ರೆಸಾರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ಸಿಬ್ಬಂದಿಯನ್ನು ನಿಯೋಜಿಸದೆ ಮತ್ತು ನೀರಿನ ಆಳದ ಬಗ್ಗೆ ಮಾಹಿತಿ ಫಲಕ ಅಳವಡಿಸದೆ ಸುರಕ್ಷತಾ ಲೋಪ ಎಸಗಿರುವುದು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ರೆಸಾರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

21 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮದ್ಯ, ಹುಕ್ಕಾ ಸೇವನೆಗೆ ಅವಕಾಶ ಪೊಲೀಸರಿಂದ ಮಣಿಪಾಲ್ ಪಬ್ ಗಳ ಮೇಲೆ ದಾಳಿ

ಉಡುಪಿ: ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 21 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮದ್ಯ ಪೂರೈಸಿದ ಆರೋಪದ ಮೇಲೆ...

ಪಡುಬಿದ್ರಿ  ಕಡಲು ಕೊರೆತದಿಂದ ರಕ್ಷಣೆಗೆ  ತಡೆಗೋಡೆ ನಿರ್ಮಾಣಕ್ಕೆ ಸಚಿವ ಯು.ಟಿ. ಖಾದರ್ ಅವರಿಗೆ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ವಿಶ್ವಾಸ ವಿ ಅಮೀನ್ ಮನವಿ

ಪಡುಬಿದ್ರಿ, ಜು. 4:** ಉಡುಪಿ ಜಿಲ್ಲೆಯ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ಟಣ ಪ್ರದೇಶದಲ್ಲಿ ತೀವ್ರಗೊಳ್ಳುತ್ತಿರುವ...

ಕಾರ್ಕಳ ಟೈಗರ್ಸ್ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ರಕ್ತದೊತ್ತಡ–ಮಧುಮೇಹ ತಪಾಸಣೆ ಶಿಬಿರ

ಕಾರ್ಕಳ ಟೈಗರ್ಸ್ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹತ್...

ಶ್ರೀ ಧೂಮಾವತಿ ಯುವಕ ಮಂಡಲ ನಿಟ್ಟೂರು ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿಷ್ಣುಮೂರ್ತಿ ನಗರ ನಿಟ್ಟೂರು, ಶ್ರೀಹರಿ ನೇತ್ರಾಲಯ, ಕಾರ್ತಿಕ್ ಎಸ್ಟೇಟ್ ಅಂಬಲಪಾಡಿ...