ಬಿಪಿಎಲ್ ಕಾರ್ಡ್ ರದ್ದು ಜನಾಕ್ರೋಶಕ್ಕೆ ಮಣಿದ ಸರಕಾರ ಬಡಕುಟುಂಬಗಳ ಕಾರ್ಡು ರದ್ದುಗೊಳಿಸಿದರೆ ಆಹಾರಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಸಿಎಂ ಎಚ್ಚರಿಕೆ

83

“ರಾಜ್ಯದಲ್ಲಿ ಅನರ್ಹರ ಬಿಪಿಎಲ್ ಕಾರ್ಡ್ ಪರಿಷ್ಕರಿಸುವ ವಿಚಾರದಲ್ಲಿ ಎದುರಾದ ಜನಾಕ್ರೋಶದ ಪರಿಣಾಮ ಸರ್ಕಾರ ಎಚ್ಚೆತ್ತುಕೊಂಡಿದೆ.

ಸಾರ್ವಜನಿಕರು ತಮ್ಮ ಬಿಪಿಎಲ್ ಕಾರ್ಡ್ ರದ್ದುಗೊಳಿಸಿದ್ದಕ್ಕೆ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಪರಿಣಾಮ ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಬಿಪಿಎಲ್ ಕಾರ್ಡ್ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಸಿಎಂ ಕಚೇರಿ ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಸಿಎಂ, ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡಬಾರದೆಂದು ಹೇಳಿದೆ.

ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಸಿಎಂ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ಒಂದು ವೇಳೆ ಬಡ ಕುಟುಂಗಳವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಸಿಎಂ ಇದೇ ವೇಳೆ ಎಚ್ಚರಿಕೆ ನೀಡಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

50 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ದಾಳಿ  ತಹಶೀಲ್ದಾರ್ ಬಂಧನ

ಧಾರವಾಡ: ಕೊಟ್ಯಂತರ ರೂಪಾಯಿ ಬೆಲೆ ಬಾಳುವ ಖರಾಬು ಜಮೀನಿನ ದಾಖಲೆ ತಿದ್ದುಪಡಿ ಮಾಡಿ ಕೊಡಲು 50...

ಜಮ್ಮು ಮತ್ತು ಕಾಶ್ಮೀರ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ಒಬ್ಬ ಉಗ್ರನ ಹತ್ಯೆ

ಬುಡ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಅಶ್ದಾರ್ ಗಲಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಡೆದ...

ಮಹಿಳಾ ಸಬ್ ಇನ್ಸ್ಪೆಕ್ಟರ್ ಗೆ ಕಪಾಳಮೋಕ್ಷ ಪ್ರಕರಣ ಬಿಜೆಪಿ ಶಾಸಕ ಸುರೇಶ್‌ಗೌಡ ಪುತ್ರಿ ಜಾಮೀನು ಅರ್ಜಿ ವಜಾ ಐಶ್ವರ್ಯ ಬಂಧನಕ್ಕಾಗಿ ತೀವ್ರ ಶೋಧ

ಮಂಡ್ಯ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗೆ ಕಪಾಳಮೋಕ್ಷ ಮಾಡಿದ ಆರೋಪ ಎದುರಿಸುತ್ತಿರುವ ಶಾಸಕ ಸುರೇಶ್...

ಅಧಿಕಾರಿ ಸೋಗಿನಲ್ಲಿ ಜನರಿಗೆ ವಂಚನೆ: ಮಂಗಳೂರು ಸಿಸಿಬಿ ಕಾರ್ಯಾಚರಣೆ; ಆರೋಪಿ ಬಂಧನ

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ ಅಧಿಕಾರಿ ಎಂದು ಹೇಳಿಕೊಂಡು ಜನರಿಂದ ಹಣ ವಸೂಲಿ ಮಾಡಿದ್ದ...