ರಾಜ್ಯ ವಿಧಾನಸಭಾ ಉಪಚುನಾವಣೆ ಮೂರು ಕ್ಷೇತ್ರಗಳಲ್ಲಿ ಜಯಗಳಿಸಿದ ಕಾಂಗ್ರೆಸ್ ಬಿಜೆಪಿಗೆ ಮುಖಭಂಗ

72

ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದ್ದ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಈಗ ಪ್ರಕಟವಾಗಿದೆ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ವಿಜಯಶಾಲಿಯಾಗಿದೆ.

ಮೊದಲಿಂದಲೂ ಕಾರ್ಯಕರ್ತರ ಪಕ್ಷ ಅಂತ ಹೇಳಿಕೊಂಡು ಬರುತ್ತಿದ್ದ ಬಿಜೆಪಿ ಇತ್ತೀಚಿನ ದಿನಗಳಲ್ಲಿ ಬಿಜೆಪಿಯ ಕೆಲವು ನಾಯಕರು ತಮ್ಮ ಮಕ್ಕಳನ್ನು ಬೆಳೆಸುವ ಉದ್ದೇಶದಿಂದ

ಪಕ್ಷದಲ್ಲಿ ಬಣ ರಾಜಕೀಯ ಮಾಡಿಕೊಂಡು ಕಾರ್ಯಕರ್ತರನ್ನು ಮೂಲೆಗುಂಪು ಮಾಡಿರುವುದು ಮತ್ತು ವಿರೋಧ ಪಕ್ಷವಾಗಿ ಸರಕಾರದ ತಪ್ಪು ನಡೆ ಮತ್ತು ಅಕ್ರಮಗಳ ವಿರುದ್ಧವಾಗಿ ಹೋರಾಡುವುದರಲ್ಲಿ ವಿಫಲವಾಗಿರುವುದು,

ಈ ಚುನಾವಣೆಯಲ್ಲಿ ಸೋಲಿಗೆ ಕಾರಣವಾಗಿದೆ ಎಂದು ಕಾರ್ಯಕರ್ತರ ವಾದವಾಗಿದೆ

ಬಿಜೆಪಿಗೆ ಬಾರಿ ಮುಖಭಂಗವಾಗಿದೆ ಇಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದ ಮಾಜಿ ಮುಖ್ಯಮಂತ್ರಿಗಳ ಪುತ್ರರಿಗೆ ಸೋಲಾಗಿದೆ.

ಸಿದ್ಧಾಂತದ ಬಗ್ಗೆ ಮಾತನಾಡುವ ಬಿಜೆಪಿ ಹಾಗೂ ಜೆಡಿಎಸ್ ನ ವಂಶಪಾರಂಪರ್ಯ ರಾಜಕೀಯಕ್ಕೆ ಸರಿಯಾದ ಉತ್ತರ ಮತದಾರರು ಕೊಟ್ಟಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಯವರನ್ನು ಸೋಲಿಸಿ ಸಿಪಿ ಯೋಗೇಶ್ವರ್ ವಿಜಯಶಾಲಿಯಾಗಿದ್ದಾರೆ

.ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇ ಅನ್ನಪೂರ್ಣ ಅವರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ ಜಯಗಳಿಸಿದ್ದಾರೆ
ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ‌ ಅಹಮದ್ ಖಾನ್ ಪಠಾಣ್ ಅವರು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ವಿರುದ್ಧ ಗೆಲುವು ಸಾಧಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಕಾಂಗ್ರೆಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಕೆಲಸ ಮಾಡುತ್ತಿದೆ ಜನರ ತೀರ್ಪು ಗೌರವಿಸಿ 2 ವರ್ಷ ಶಾಸಕರಾಗಿ ಕೆಲಸ ಮಾಡಲು ಜೀವರಾಜ್ ಅವರಿಗೆ ಅವಕಾಶ ನೀಡಬೇಕು’: ಬಿ ವೈ ವಿಜಯೇಂದ್ರ

ಬೆಂಗಳೂರು: 2023ರಲ್ಲಿ ಪರಾಭವಗೊಂಡಾಗಲೇ ಡಿ ಎನ್ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ವರೆಗೆ...

ಪಂಚ ರಾಜ್ಯ ಚುನಾವಣೋತ್ತರ ಸಮೀಕ್ಷೆ: ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಬಹುಮತ ತಮಿಳುನಾಡು ಡಿ ಎಂ ಕೆ ಕೇರಳ ಯುಡಿಎಫ್ ಮೈತ್ರಿಕೂಟ ಅಧಿಕಾರಕ್ಕೆ??

ನವದೆಹಲಿ: ಬುಧವಾರ ನಡೆದ ಹಲವಾರು ಚುನಾವಣೋತ್ತರ ಸಮೀಕ್ಷೆಗಳು ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಮತ್ತು ಪಶ್ಚಿಮ...

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...