ವಿರೋಧ ಪಕ್ಷಗಳ ಎಲ್ಲಾ ಆರೋಪಗಳನ್ನು ಎದುರಿಸಿ ಜನತಾ ನ್ಯಾಯಾಲಯ ದಲ್ಲಿ ಕಾಂಗ್ರೆಸ್ ಗೆದ್ದಿದೆ ಮುಖ್ಯ ಮಂತ್ರಿ ಸಿದ್ದರಾಮಯ್ಯ

66

“ರಾಜ್ಯದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಕ್ಲೀನ್ ಸ್ವೀಪ್ ಮಾಡಿದ್ದು, ಜನತಾ ನ್ಯಾಯಾಲಯದಲ್ಲಿ ಗೆದ್ದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಸಂಡೂರು, ಶಿಗ್ಗಾಂವಿ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿನ ಗೆಲುವಿನ ಕ್ರೆಡಿಟ್ ನ್ನು ಗ್ಯಾರಂಟಿ ಯೋಜನೆಗಳಿಗೆ ನೀಡಿದರು.

ನ್ಯಾಯಾಲಯಗಳಿಗಿಂತ ಜನತಾ ನ್ಯಾಯಾಲಯವೇ ಮೇಲು ಅಂತಾ ಮಹಾತ್ಮ ಗಾಂಧಿ ಹೇಳಿದ್ದರು. ಈಗ ಜನತಾ ನ್ಯಾಯಾಲಯ ತೀರ್ಪು ನೀಡಿದೆ.

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರಿಂದ ಈ ಗೆಲುವು ಕಾಂಗ್ರೆಸ್‌ಗೆ ಮಹತ್ವದ್ದಾಗಿದೆ. ನಾವು ಕಲ್ಯಾಣ ಕರ್ನಾಟಕ (ಸಂಡೂರು), ಕಿತ್ತೂರು ಕರ್ನಾಟಕ ಪ್ರದೇಶ (ಶಿಗ್ಗಾಂವಿ) ಮತ್ತು ಹಳೆಯ ಮೈಸೂರು (ಚನ್ನಪಟ್ಟಣ) ಕ್ಷೇತ್ರದಿಂದ ಗೆದ್ದಿದ್ದೇವೆ ಎಂದು ಅವರು ತಿಳಿಸಿದರು.

ಎಲ್ಲ ಕ್ಷೇತ್ರಗಳಲ್ಲೂ ನಾವು ಗೆದ್ದಿದ್ದೇವೆ. ಆದ್ದರಿಂದ, ಇದು ಬಹಳ ಮಹತ್ವದ್ದಾಗಿದೆ. ಸುಮಾರು ಒಂದೂವರೆ ವರ್ಷಗಳ ಹಿಂದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ನನ್ನ ಮತ್ತು ನನ್ನ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡಿತು. ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆಯೂ ಸುಳ್ಳು ಪ್ರಚಾರ ಮಾಡಿದ್ದರು

. ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮಾಡಿಲ್ಲ ಎಂದಿದ್ದರು. ಆದರೆ, ನಮ್ಮ ಗೆಲುವಿನಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ ಎಂದರು.

ಚುನಾವಣಾ ಪ್ರಚಾರದ ವೇಳೆಯಲ್ಲಿ ಜನರ ಎದುರು ದೇವೇಗೌಡ ಹಾಗೂ ಅವರ ಮಗ, ಮೊಮ್ಮಗ ಎಲ್ಲರೂ ಅಳುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ.

ಆದರೆ, ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಅನೇಕ ಮಹಿಳೆಯರು ಅಳುವಾಗ ಅವರ ಹೃದಯ ಕರಗಲಿಲ್ಲವೇ? ಎಂದು ದಳಪತಿಗಳ ಕಣ್ಣೀರಿನ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು

Leave a comment

Leave a Reply

Your email address will not be published. Required fields are marked *

Related Articles

ಸಚಿವ ಸ್ಥಾನಗಳಿಗಾಗಿ ಲಾಬಿ ಮಾಡುವವರನ್ನು ಪಕ್ಷ ಸಹಿಸುವುದಿಲ್ಲ. ಲಾಬಿಗಳಿಗೆ ಮಣಿಯಬೇಡಿ- ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಸೂಚನೆ

ಬೆಂಗಳೂರು: ಜುಲೈ ಮೊದಲ ವಾರದಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಸಮಯದಲ್ಲಿ ಸಂಪುಟಕ್ಕೆ ಸೇರ್ಪಡೆಗೊಳ್ಳಲು...

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ರಾಮನಗರ ಜಿಲ್ಲೆ ಕುಮಾರ ಸ್ವಾಮಿ ಹಾಗೂ ಜೆಡಿಎಸ್ ಪ್ರಾಬಲ್ಯ  ಮುರಿದ ಡಿಕೆ ಶಿವಕುಮಾರ್

ರಾಮನಗರದಲ್ಲಿ ಜೆಡಿಎಸ್ ಯುಗಾಂತ್ಯ: ಜಿಲ್ಲೆಯಲ್ಲಿ ‘ಡಿ.ಕೆ ಬ್ರದರ್ಸ್’ ಪ್ರಾಬಲ್ಯ:ಎಚ್ ಡಿ ಕೆ ಬಳಿಯಿಂದ ಶಿವಕುಮಾರ್ ಕಸಿದುಕೊಂಡ್ರಾ...