ಜಾರ್ಖಂಡ್ ನೂತನ ಮುಖ್ಯಮಂತ್ರಿ ಯಾಗಿ ಹೇಮಂತ್ ಸೊರೆನ್ ನ್ ನವೆಂಬರ್ 28ಕ್ಕೆ ಪ್ರಮಾಣವಚನ ಸ್ವೀಕಾರ

73

“ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೆನ್ ಅವರು ನವೆಂಬರ್ 28 ರಂದು ಜಾರ್ಖಂಡ್ ನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಅದ್ದೂರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಸೇರಿದಂತೆ ವಿರೋಧ ಪಕ್ಷದ ಪ್ರಮುಖ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.

ಇಂದು ಸಂಜೆ ರಾಜಭವನದಲ್ಲಿ ರಾಜ್ಯಪಾಲ ಸಂತೋಷ್ ಗಂಗ್ವಾರ್ ಅವರನ್ನು ಭೇಟಿ ಮಾಡಿ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಹೇಮಂತ್ ಸೊರೆನ್, ನೂತನ ಸರ್ಕಾರ ರಚನೆಯ ಹಕ್ಕು ಮಂಡಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ರಚನೆ ಪ್ರಕ್ರಿಯೆ ಆರಂಭವಾಗಿದ್ದು, ನವೆಂಬರ್ 28 ರಂದು ಪದ ಗ್ರಹಣ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು

ಇದಕ್ಕೂ ಮುನ್ನಾ ಪಕ್ಷದ ಕಚೇರಿಯಲ್ಲಿ ನಡೆದ ಜೆ ಎಮ್ ಎಮ್  ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಹೇಮಂತ್ ಸೊರೆನ್ ಅವರನ್ನು ನೂತನ ಶಾಸಕರ ಸರ್ವಾನುಮತದಿಂದ ಆಯ್ಕೆ ಮಾಡಿದರು.

ಇತ್ತೀಚಿಗೆ ನಡೆದ ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಹೇಮಂತ್ ಸೊರೆನ್ ಅವರ ಪಕ್ಷ 34, ಕಾಂಗ್ರೆಸ್ 16, ಆರ್ ಜೆಡಿ 4 ಮತ್ತು ಸಿಪಿಐ- ಎಂಎಲ್ 2 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಎರಡನೇ ಅವಧಿಯಲ್ಲೂ ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಸರ್ಕಾರ ರಚಿಸುವಲ್ಲಿ ಹಾದಿ ಸುಗಮವಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ಡೂಮ್ಸ್ ಡೇ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್

ನವದೆಹಲಿ: ಬ್ರಿಕ್ಸ್ ಶೃಂಗಸಭೆಗೆ ರಾಷ್ಟ್ರ ರಾಜಧಾನಿ ಸಜ್ಜಾಗಿದೆ. ನಾಳೆಯಿಂದ ಭಾರತ ಮಂಟಪದಲ್ಲಿ ಎರಡು ದಿನ ಭಾರತದ...

ವಿಮಾನದಲ್ಲಿ ಬಾಂಬ್ ಬೆದರಿಕೆ ತುರ್ತುಭೂ ಸ್ಪರ್ಶ ಮಾಡಿದ ಇಂಡಿಗೋ ವಿಮಾನ

“ಅಹಮದಾಬಾದ್: ಲಕ್ನೋದಿಂದ ಸೌದಿ ಅರೇಬಿಯಾದ ದಮ್ಮಾಮ್‌ಗೆ  ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ...

370ನೇ ವಿಧಿಯನ್ನು ರದ್ದುಗೊಳಿಸಿದ ನಂತರಬದಲಾದ ಜಮ್ಮು ಮತ್ತು ಕಾಶ್ಮೀರ ವಂದೇ ಮಾತರಂ’ ಸಂಪೂರ್ಣ ರಾಷ್ಟ್ರಗೀತೆ ಗಾಯನ,

ಶ್ರೀನಗರ: 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಬದಲಾಗಿದೆ. ಮುಸ್ಲಿಂ ಬಹುಸಂಖ್ಯಾತ...

ಡ್ರಗ್ಸ್ ಸೇವನೆ ದೃಢಪಟ್ಟ ಹಿನ್ನೆಲೆ ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ

ನವದೆಹಲಿ: ಕಳೆದ ತಿಂಗಳು ಫುಕೆಟ್ ನಿಂದ ದೆಹಲಿಗೆ ಆಗಮಿಸುತ್ತಿದ್ದಾಗ ಏಕಾಏಕಿ ಎತ್ತರವನ್ನು ಕಳೆದುಕೊಂಡು ಪ್ರಯಾಣಿಕರಿಗೆ ಜೀವಭೀತಿ...