ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಗಾಗಿ ದೋಸ್ತಿಗಳ ಕಸರತ್ತು ಇಂದು ಮುಖ್ಯಮಂತ್ರಿ ಆಯ್ಕೆ ಸಾಧ್ಯತೆ

1

“ಮಹಾರಾಷ್ಟ್ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ನಂತರ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಸಿದ್ಧತೆ ಆರಂಭಿಸಿದೆ.

ಇಂದು ಮಹಾರಾಷ್ಟ್ರ ರಾಜ್ಯದ ಮುಖ್ಯಮಂತ್ರಿ ಆಯ್ಕೆ ಆಗುವ ಸಾಧ್ಯತೆ ಇದ್ದು, ಮಂಗಳವಾರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆಗಳಿವೆ.

ನವೆಂಬರ್ 26 ಪ್ರಸಕ್ತ ವಿಧಾನಸಭೆ ಅವಧಿಯ ಕೊನೆಯ ದಿನವಾಗಿರುವುದರಿಂದ ಮಂಗಳವಾರ ಸಂಜೆಯೇ ಮಹಾಯುತಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆ ಇದೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ಸಮಾರಂಭ ಒಂದು ದಿನ ತಡವಾದರೆ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಲಿದೆ ಎಂದು ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ

. ಶಿವಸೇನೆ ನಾಯಕ ದೀಪಕ್ ಕೇಸರ್ಕರ್ ಅವರು ಸೋಮವಾರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಹೇಳಿದ್ದಾರೆ, ಆದರೆ ಬಿಜೆಪಿ ಮೂಲಗಳು ಅದನ್ನು ನಿರಾಕರಿಸಿವೆ.

ಬಿಜೆಪಿ ಮತ್ತು ಮಿತ್ರಪಕ್ಷಗಳು ಸೋಮವಾರ ಸಭೆ ಸೇರಿ ಸಿಎಂ ಆಯ್ಕೆಯ ಬಗ್ಗೆ ತಮ್ಮ ನಿರ್ಧಾರವನ್ನು ಅಂತಿಮಗೊಳಿಸಲಿವೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಈ ನಡುವೆ ಮೈತ್ರಿಕೂಟದ ಮೂರು ಪಕ್ಷಗಳ ನಾಯಕರು ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಜಾತಿ ಸಮೀಕರಣ, ಮರಾಠ, ಒಬಿಸಿ ಸಮುದಾಯಗಳನ್ನು ಗಮನದಲ್ಲಿ ಇಟ್ಟುಕೊಂಡ ಹೊಸ ನಾಯಕನ ಅಯ್ಕೆಗೆ ಬಿಜೆಪಿ ಚಿಂತನೆ ನಡೆಸಿದೆ.

ರಾಜ್ಯದಲ್ಲಿ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿರುವ ದೇವೇಂದ್ರ ಫಡ್ನವಿಸ್‌ ರೇಸ್‌ನಲ್ಲಿ ಮುಂದಿದ್ದಾರೆ. ಹಾಲಿ ಸಿಎಂ ಏಕನಾಥ್‌ ಶಿಂಧೆ, ಎನ್‌ಸಿಪಿಯ ಅಜಿತ್‌ ಪವಾರ್‌ ಸಹ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.

ಮೈತ್ರಿಕೂಟದಲ್ಲಿ ಅತ್ಯಧಿಕ 133 ಸ್ಥಾನ ಗಳಿಸಿರುವ ಬಿಜೆಪಿ ನಾಯಕರೇ ಮುಖ್ಯಮಂತ್ರಿ ಆಗಬೇಕು ಎಂಬುದು ಪಕ್ಷದ ನಾಯಕರಾದಿಯಾಗಿ ಸಂಘ ಪರಿವಾರದ ಆಶಯವಾಗಿದೆ. ದೇವೇಂದ್ರ ಫಡ್ನವಿಸ್‌ ಅವರೇ ಸಿಎಂ ಆಗಲಿ ಎಂಬುದು ಬೆಂಬಲಿಗರ ವಾದವೂ ಆಗಿದೆ.

ಮೈತ್ರಿ ಧರ್ಮ, ಜಾತಿ ಸಮೀಕರಣದ ಸಂಕಟಗಳು ಫಡ್ನವಿಸ್‌ಗೆ ಅಡ್ಡಿಯಾಗಬಹುದು ಎಂದು ಹೇಳಲಾಗುತ್ತಿದೆ. ಮರಾಠ ಸಮುದಾಯದ ಬೆಂಬಲ ಹಿಡಿದಿಟ್ಟುಕೊಳ್ಳಲು ಶಿಂಧೆಯನ್ನೇ ಮುಂದುವರಿಸಲು ಬಿಜೆಪಿ ಹೈಕಮಾಂಡ್‌ ನಿರ್ಧರಿಸಿದಲ್ಲಿ, ಫಡ್ನವಿಸ್‌ ಮತ್ತೆ ಡಿಸಿಎಂ ಸ್ಥಾನಕ್ಕೆ ತೃಪ್ತಿ ಪಡಬೇಕಾಗಬಹುದು ಎಂಬುದು ರಾಜಕೀಯ ಪಂಡಿತರ ಲೆಕ್ಕಾಚಾರವಾಗಿದೆ.

ಮತ್ತೊಂದೆಡೆ, ಚುನಾವಣಾ ಆಯೋಗದಿಂದ ನೂತನ ಶಾಸಕರ ಪಟ್ಟಿ ರಾಜ್ಯಪಾಲರಿಗೆ ಸಲ್ಲಿಕೆಯಾಗಿದೆ. ಒಂದು ವೇಳೆ ಹೊಸ ಸರ್ಕಾರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರನ್ನು ಆಯ್ಕೆ ಮಾಡಿದ್ದೇ ಆದರೆ, ಗೃಹ ಇಲಾಖೆಯನ್ನು ಏಕನಾಥ್ ಶಿಂಧೆಗೆ ನೀಡಬಹುದು ಎಂದು ಮೂಲಗಳು ತಿಳಿಸಿವೆ.

ನವೆಂಬರ್ 26 ಮಂಗಳವಾರ, ಸಂವಿಧಾನ ದಿನ ನಿಮಿತ್ತ ಸಂಸತ್ತಿನಲ್ಲಿ ಜಂಟಿ ಅಧಿವೇಶನವಿದೆ. ನಂತರ ಪ್ರಧಾನಿ ಮೋದಿ ಮತ್ತು ಇತರ ಹಿರಿಯರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಮುಂಬೈಗೆ ತೆರಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಮಂಗಳವಾರವೇ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಲಿದ್ದು, ಪ್ರತಿ ಪಕ್ಷಕ್ಕೆ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿದ ನಂತರ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಪ್ರಮಾಣ ವಚನ ಸ್ವೀಕಾರದ ಸ್ಥಳವನ್ನು ನಿರ್ಧರಿಸಲಾಗಿಲ್ಲ. ಆದರೆ, ವಾಂಖೆಡೆ ಸ್ಟೇಡಿಯಂ ಅಥವಾ ಶಿವಾಜಿ ಪಾರ್ಕ್ ನಲ್ಲಿ ನಡೆಯಬಹುದು ಎಂದು ಮೂಲಗಳು ಮಾಹಿತಿ ನೀಡಿವೆ.

Leave a comment

Leave a Reply

Your email address will not be published. Required fields are marked *

Related Articles

ಇತಿಹಾಸ ಜ್ಞಾನ ಎಳ್ಳಷ್ಟೂ ಇಲ್ಲದ ಸಚಿವ ಮಹದೇವಪ್ಪ ಇತಿಹಾಸ ತಿಳಿದು ಮಾತನಾಡಲಿ ::ಸಂಸದ ಯದುವೀರ್ ಒಡೆಯರ್

“ಕೃಷ್ಣರಾಜ ಸಾಗರ ಜಲಾಶಯಕ್ಕೆ ಟಿಪ್ಪುಸುಲ್ತಾನ್‌ ಮೊದಲ ಅಡಿಗಲ್ಲು ಹಾಕಿದ್ದರು ಎಂಬ ಸಚಿವ ಮಹದೇವಪ್ಪ ಅವರ ಹೇಳಿಕೆ...

ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಾಗಿ 50 ಕೋಟಿ ಅನುದಾನ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

“ಶಾಸಕರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50...

ರಾಜ್ಯ ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಸಂಚಲನ ಮೂಡಿಸಿದ್ದ ಆರೋಪದ ಆಡಿಯೋ ನನ್ನದೇ, ನನ್ನ ಆರೋಪಕ್ಕೆ ನಾನು ಬದ್ಧ; ಕಾಂಗ್ರೆಸ್‌ ಶಾಸಕ ಬಿ.ಆರ್‌. ಪಾಟೀಲ್‌

ಬೆಂಗಳೂರು: ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಕುರಿತು ಸಚಿವ ಜಮೀರ್‌ ಖಾನ್‌ ಅವರ ಆಪ್ತ ಕಾರ್ಯದರ್ಶಿ ಸರ್ಫ‌ರಾಜ್‌...

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮ :: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ದಾವಣಗೆರೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿದೆ. ಸಮಾಜದಲ್ಲಿ ಪುಟಾಣಿ ಮಕ್ಕಳಿಂದ...