ಮಹಾರಾಷ್ಟ್ರ: ಐಪಿಎಸ್ ಅಧಿಕಾರಿ ರಶ್ಮಿ ಶುಕ್ಲಾ ಡಿಜಿಪಿಯಾಗಿ ಮರು ನೇಮಕ

79
ವಿವಾದಿತ ಐಪಿಎಸ್ ಅಧಿಕಾರಿ ರಶ್ಮಿ ಶುಕ್ಲಾ ಡಿಜಿಪಿಯಾಗಿ ಮರು ನೇಮಕ ಚುನಾವಣೆಗೆ ಮುನ್ನ ಭಾರತೀಯ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಶುಕ್ಲಾ ಅವರನ್ನು ಡಿಜಿಪಿ ಹುದ್ದೆಯಿಂದ ವಜಾಗೊಳಿಸಿದ ನಂತರ ಸಂಜಯ್ ಕುಮಾರ್ ವರ್ಮಾ ಅವರು ಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಐಪಿಎಸ್ ಅಧಿಕಾರಿ ರಶ್ಮಿ ಶುಕ್ಲಾ


ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಮುಗಿದ ನಂತರ ವಿವಾದಿತ ಐಪಿಎಸ್ ಅಧಿಕಾರಿ ರಶ್ಮಿ ಶುಕ್ಲಾ ಅವರನ್ನು ಪೊಲೀಸ್ ಮಹಾನಿರ್ದೇಶಕರಾಗಿ  ಮರುನೇಮಕಗೊಳಿಸಿ ರಾಜ್ಯ ಗೃಹ ಇಲಾಖೆ ಸೋಮವಾರ ಸಂಜೆ ಆದೇಶ ಹೊರಡಿಸಿದೆ.

ಚುನಾವಣೆಗೆ ಮುನ್ನ ಭಾರತೀಯ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಶುಕ್ಲಾ ಅವರನ್ನು ಡಿಜಿಪಿ ಹುದ್ದೆಯಿಂದ ವಜಾಗೊಳಿಸಿದ ನಂತರ ಸಂಜಯ್ ಕುಮಾರ್ ವರ್ಮಾ ಅವರು ಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಶುಕ್ಲಾ ಅವರನ್ನು ಚುನಾವಣೆಯಿಂದ ದೂರವಿಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿತ್ತು.  ಭಾರತೀಯ ಪೊಲೀಸ್ ಸೇವೆಯ ಹಿರಿಯ ಅಧಿಕಾರಿಯಾಗಿರುವ ವರ್ಮಾ ಅವರು ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೆ ಡಿಜಿಪಿಯಾಗಿ ಇರಬೇಕಿತ್ತು. ಆದರೆ ಚುನಾವಣೆ ವೇಳೆ ಶುಕ್ಲಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿತ್ತು.

ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡು ಚುನಾವಣಾ ಫಲಿತಾಂಶ ಪ್ರಕಟವಾದ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಸೋಮವಾರದಿಂದ ಸ್ಥಗಿತಗೊಂಡಿದೆ ಎಂದು ಗೃಹ ಇಲಾಖೆ ಆದೇಶದಲ್ಲಿ ತಿಳಿಸಲಾಗಿದೆ. ನೀತಿ ಸಂಹಿತೆ ಸ್ಥಗಿತ ಹಿನ್ನೆಲೆಯಲ್ಲಿ ಸರ್ಕಾರ ಶುಕ್ಲಾ ಅವರ ಕಡ್ಡಾಯ ರಜೆ ಅವಧಿಯನ್ನು ಕೊನೆಗೊಳಿಸಿದ್ದು, ಡಿಜಿಪಿಯಾಗಿ ಮುಂದುವರೆಯಲು ಅವರಿಗೆ ಸೂಚಿಸಲಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟವು ಭರ್ಜರಿ ಬಹುಮತದೊಂದಿಗೆ ಅಧಿಕಾರವನ್ನು ಉಳಿಸಿಕೊಂಡಿದೆ.

Leave a comment

Leave a Reply

Your email address will not be published. Required fields are marked *

Related Articles

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ಡೂಮ್ಸ್ ಡೇ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್

ನವದೆಹಲಿ: ಬ್ರಿಕ್ಸ್ ಶೃಂಗಸಭೆಗೆ ರಾಷ್ಟ್ರ ರಾಜಧಾನಿ ಸಜ್ಜಾಗಿದೆ. ನಾಳೆಯಿಂದ ಭಾರತ ಮಂಟಪದಲ್ಲಿ ಎರಡು ದಿನ ಭಾರತದ...

ವಿಮಾನದಲ್ಲಿ ಬಾಂಬ್ ಬೆದರಿಕೆ ತುರ್ತುಭೂ ಸ್ಪರ್ಶ ಮಾಡಿದ ಇಂಡಿಗೋ ವಿಮಾನ

“ಅಹಮದಾಬಾದ್: ಲಕ್ನೋದಿಂದ ಸೌದಿ ಅರೇಬಿಯಾದ ದಮ್ಮಾಮ್‌ಗೆ  ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ...

370ನೇ ವಿಧಿಯನ್ನು ರದ್ದುಗೊಳಿಸಿದ ನಂತರಬದಲಾದ ಜಮ್ಮು ಮತ್ತು ಕಾಶ್ಮೀರ ವಂದೇ ಮಾತರಂ’ ಸಂಪೂರ್ಣ ರಾಷ್ಟ್ರಗೀತೆ ಗಾಯನ,

ಶ್ರೀನಗರ: 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಬದಲಾಗಿದೆ. ಮುಸ್ಲಿಂ ಬಹುಸಂಖ್ಯಾತ...

ಡ್ರಗ್ಸ್ ಸೇವನೆ ದೃಢಪಟ್ಟ ಹಿನ್ನೆಲೆ ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ

ನವದೆಹಲಿ: ಕಳೆದ ತಿಂಗಳು ಫುಕೆಟ್ ನಿಂದ ದೆಹಲಿಗೆ ಆಗಮಿಸುತ್ತಿದ್ದಾಗ ಏಕಾಏಕಿ ಎತ್ತರವನ್ನು ಕಳೆದುಕೊಂಡು ಪ್ರಯಾಣಿಕರಿಗೆ ಜೀವಭೀತಿ...