ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣ ದಾಖಲು

71

ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ದೌರ್ಜನ್ಯ ಪ್ರಕರಣ ದಾಖಲು! ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿಕ್ಷಕಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಕಾಂಗ್ರೆಸ್ ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನ ಬಿಜಿಎಸ್ ಬ್ಲೂಮ್‌ಫೀಲ್ಡ್ ಶಾಲೆಯಲ್ಲಿ 75ಕ್ಕೂ ಹೆಚ್ಚು ಮಹಿಳೆಯರು ಕೆಲಸ ಮಾಡುತ್ತಿದ್ದಾರೆ ಎಂದು 38 ವರ್ಷದ ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ಗುರಪ್ಪ ನಾಯ್ಡು ಶಾಲೆಯ ಅಧ್ಯಕ್ಷರಾಗಿದ್ದು 2021ರ ಮಾರ್ಚ್ 1ರಿಂದ 2023ರ ಆಗಸ್ಟ್ 15ರವರೆಗೂ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

ಶಿಕ್ಷಕಿಯ ದೂರಿನ ಮೇರೆಗೆ ಚನ್ನಮ್ಮನಕೆರೆ ಅಚ್ಚುಕಟ್ಟೆ ಠಾಣೆ ಪೊಲೀಸರು ನ.26ರಂದು ಐಪಿಸಿ ಕಲಂ 354, 506, 509 504 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಆರೋಪವನ್ನು ಗುರಪ್ಪ ನಾಯ್ಡು ತಳ್ಳಿಹಾಕಿದ್ದು, ಇದು ಸುಳ್ಳು ಮತ್ತು ನಿರಾಧಾರ ಎಂದು ಹೇಳಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

50 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ದಾಳಿ  ತಹಶೀಲ್ದಾರ್ ಬಂಧನ

ಧಾರವಾಡ: ಕೊಟ್ಯಂತರ ರೂಪಾಯಿ ಬೆಲೆ ಬಾಳುವ ಖರಾಬು ಜಮೀನಿನ ದಾಖಲೆ ತಿದ್ದುಪಡಿ ಮಾಡಿ ಕೊಡಲು 50...

ಜಮ್ಮು ಮತ್ತು ಕಾಶ್ಮೀರ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ಒಬ್ಬ ಉಗ್ರನ ಹತ್ಯೆ

ಬುಡ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಅಶ್ದಾರ್ ಗಲಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಡೆದ...

ಮಹಿಳಾ ಸಬ್ ಇನ್ಸ್ಪೆಕ್ಟರ್ ಗೆ ಕಪಾಳಮೋಕ್ಷ ಪ್ರಕರಣ ಬಿಜೆಪಿ ಶಾಸಕ ಸುರೇಶ್‌ಗೌಡ ಪುತ್ರಿ ಜಾಮೀನು ಅರ್ಜಿ ವಜಾ ಐಶ್ವರ್ಯ ಬಂಧನಕ್ಕಾಗಿ ತೀವ್ರ ಶೋಧ

ಮಂಡ್ಯ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗೆ ಕಪಾಳಮೋಕ್ಷ ಮಾಡಿದ ಆರೋಪ ಎದುರಿಸುತ್ತಿರುವ ಶಾಸಕ ಸುರೇಶ್...

ಅಧಿಕಾರಿ ಸೋಗಿನಲ್ಲಿ ಜನರಿಗೆ ವಂಚನೆ: ಮಂಗಳೂರು ಸಿಸಿಬಿ ಕಾರ್ಯಾಚರಣೆ; ಆರೋಪಿ ಬಂಧನ

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ ಅಧಿಕಾರಿ ಎಂದು ಹೇಳಿಕೊಂಡು ಜನರಿಂದ ಹಣ ವಸೂಲಿ ಮಾಡಿದ್ದ...