ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ :: ಬಿಜೆಪಿ ಮಹಿಳಾ ಮೋರ್ಚಾ ಆರೋಪ

85

ಮಹಿಳೆಯರಿಗೆ ಸುರಕ್ಷತೆ ಒದಗಿಸುವಲ್ಲಿ ಮತ್ತು ಅವರ ಹಿತ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಶುಕ್ರವಾರ ಆರೋಪಿಸಿದೆ.

ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾತನಾಡಿದ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಕೆ. ಮಂಜುಳಾ, ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗುರುಪ್ಪ ನಾಯ್ಡು ಅವರನ್ನು ಪಕ್ಷದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಗಂಭೀರ ಲೈಂಗಿಕ ಆರೋಪ ಕೇಳಿಬಂದಿರುವ ಗುರಪ್ಪ ನಾಯ್ಡು ವಿರುದ್ಧ ಕ್ರಮ ಕೈಗೊಳ್ಳದ ಕಾಂಗ್ರೆಸ್, ಮುಸ್ಲಿಂ ವಿರುದ್ಧ ಹೇಳಿಕೆ ನೀಡಿರುವ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಸ್ವಾಮೀಜಿ ಅವರನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಗುರಿಯಾಗಿಸಿಕೊಂಡಿದೆ ಎಂದು ಟೀಕಿಸಿದರು.

ಗುರಪ್ಪ ನಾಯ್ಡು ಆಡಿಯೋ ಮತ್ತು ವಿಡಿಯೋ ರೆಕಾರ್ಡ್ ಬಳಸಿಕೊಂಡು ಶಾಲೆಯ ಶಿಕ್ಷಕಿಯರಿಗೆ ಬೆದರಿಕೆ ಹಾಗೂ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಂಜುಳಾ ಆರೋಪಿಸಿದರು.

ಹುಣಸೂರಿನಲ್ಲಿ ಕಿರು ಹಣಕಾಸು ಸಂಸ್ಥೆಯ ಕಿರುಕುಳದಿಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಸರಕಾರ ಮಧ್ಯ ಪ್ರವೇಶಿಸಿ ಸಮಗ್ರ ತನಿಖೆ ನಡೆಸಿ ಅಂತಹ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ 10 ದಿನದಲ್ಲಿ ಏಳು ಬಾಣಂತಿಯರ ಸಾವಿನ ಬಗ್ಗೆ ನೋವು ವ್ಯಕ್ತಪಡಿಸಿದ ಮಂಜುಳಾ, ಆರೋಗ್ಯ ಕ್ಷೇತ್ರದಲ್ಲಿ ಹೊಣೆಗಾರಿಕೆ ಖಾತರಿಪಡಿಸುವಲ್ಲಿ ಸರ್ಕಾರ ವಿಫಲವಾಗಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಬೇಕು, ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಆರೋಪಿಸಿದರು.

Leave a comment

Leave a Reply

Your email address will not be published. Required fields are marked *

Related Articles

ಜಮ್ಮು ಮತ್ತು ಕಾಶ್ಮೀರ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ಒಬ್ಬ ಉಗ್ರನ ಹತ್ಯೆ

ಬುಡ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಅಶ್ದಾರ್ ಗಲಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಡೆದ...

ಮಹಿಳಾ ಸಬ್ ಇನ್ಸ್ಪೆಕ್ಟರ್ ಗೆ ಕಪಾಳಮೋಕ್ಷ ಪ್ರಕರಣ ಬಿಜೆಪಿ ಶಾಸಕ ಸುರೇಶ್‌ಗೌಡ ಪುತ್ರಿ ಜಾಮೀನು ಅರ್ಜಿ ವಜಾ ಐಶ್ವರ್ಯ ಬಂಧನಕ್ಕಾಗಿ ತೀವ್ರ ಶೋಧ

ಮಂಡ್ಯ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗೆ ಕಪಾಳಮೋಕ್ಷ ಮಾಡಿದ ಆರೋಪ ಎದುರಿಸುತ್ತಿರುವ ಶಾಸಕ ಸುರೇಶ್...

ಅಧಿಕಾರಿ ಸೋಗಿನಲ್ಲಿ ಜನರಿಗೆ ವಂಚನೆ: ಮಂಗಳೂರು ಸಿಸಿಬಿ ಕಾರ್ಯಾಚರಣೆ; ಆರೋಪಿ ಬಂಧನ

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ ಅಧಿಕಾರಿ ಎಂದು ಹೇಳಿಕೊಂಡು ಜನರಿಂದ ಹಣ ವಸೂಲಿ ಮಾಡಿದ್ದ...

ಆಂಜನೇಯ ದೇವಸ್ಥಾನ ಅಕ್ರಮ ಪ್ರವೇಶ ದೇವಸ್ಥಾನದ ಆವರಣದಲ್ಲಿ ಮೂತ್ರ ವಿಸರ್ಜನೆ: ಆರೋಪಿ ಮೊಹಮ್ಮದ್ ಜಾಫರ್ ಬಂಧನ

ಹಾವೇರಿ: ದೇವಸ್ಥಾನವೊಂದನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ 31 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಹಾವೇರಿ...