thekarnatakatoday.com
Crime

ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರನ ಕಲ್ಟ್ ಚಲನಚಿತ್ರಕ್ಕೆ ಆರಂಭದಲ್ಲಿ ಕಂಟಕ ಚಿತ್ರದ ಟೆಕ್ನಿಷಿಯನ್ ಆತ್ಮಹತ್ಯೆ ಯತ್ನ

ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನ: ಸಚಿವ ಜಮೀರ್ ಅಹ್ಮದ್ ಖಾನ್  ಪುತ್ರ ಜೈದ್ ಖಾನ್ ಗೆ ಸಂಕಷ್ಟ! ಪುನೀತ್ ಕೆರೆಹಳ್ಳಿ ಆಕ್ರೋಶ ‘ಕಲ್ಟ್’ ಸಿನಿಮಾದಲ್ಲಿ ಸಂತೋಷ್ ಎಂಬುವವರು ಡ್ರೋನ್ ಉಸ್ತುವಾರಿ ವಹಿಸಿಕೊಂಡಿದ್ದರು.

ಚಿತ್ರ ತಂಡದವರು ಮಾಡಿದ ತಪ್ಪಿಗೆ ಡ್ರೋನ್ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕಲ್ಟ್ ಚಿತ್ರ ಹಾಗೂ ಸಿನಿಮಾ ಟೆಕ್ನಿಷಿಯನ್ ಸಂತೋಷ್


ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಜೈದ್ ಖಾನ್ ಅಭಿನಯದ ‘ಕಲ್ಟ್’ ಚಿತ್ರ ವಿವಾದಕ್ಕೆ ಸಿಲುಕಿದ್ದು, ಸಿನಿಮಾ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನಿಸಿ ಚಿತ್ರತಂಡ ಇದೀಗ ಸಂಕಷ್ಟಕ್ಕೆ ಸಿಲುಕಿದೆ. ಹೌದು.. ಕಲ್ಟ್ ಚಿತ್ರ ತಂಡದವರು ಮಾಡಿದ ತಪ್ಪಿಗೆ ಡ್ರೋನ್ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಈ ಸಂಬಂಧ ಇದೀಗ ನಟ ಜೈದ್ ಖಾನ್ ಸೇರಿದಂತೆ ಚಿತ್ರತಂಡದ ವಿರುದ್ಧ ದೂರು ದಾಖಲಾಗಿದೆ.

ಮೂಲಗಳ ಪ್ರಕಾರ ‘ಕಲ್ಟ್’ ಸಿನಿಮಾದಲ್ಲಿ ಸಂತೋಷ್ ಎಂಬುವವರು ಡ್ರೋನ್ ಉಸ್ತುವಾರಿ ವಹಿಸಿಕೊಂಡಿದ್ದರು. ಚಿತ್ರತಂಡದವರು ಮಾಡಿದ ತಪ್ಪಿಗೆ ಡ್ರೋನ್ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನಿಸಿದರು ಎಂದು ಹೇಳಲಾಗಿದೆ.

‘ಕಲ್ಟ್’ ಸಿನಿಮಾದಲ್ಲಿ ಸಂತೋಷ್ ಎಂಬುವವರು ಡ್ರೋನ್ ಉಸ್ತುವಾರಿ ವಹಿಸಿಕೊಂಡಿದ್ದರು. ನ.25ರಂದು ಚಿತ್ರದುರ್ಗದಲ್ಲಿ ಶೂಟಿಂಗ್ ನಡೆಯುತ್ತಿತ್ತು.

ಒಂದು ದಿನಕ್ಕೆ 25 ಸಾವಿರ ರೂಪಾಯಿ ನಿಗದಿ ಮಾಡಿ ಅವರು ಶೂಟ್ ಮಾಡುತ್ತಿದ್ದರು. ಶೂಟಿಂಗ್ ವೇಳೆ ವಿಂಡ್ ಫ್ಯಾನ್ಗೆ ಟಚ್ ಆಗಿ ಡ್ರೋನ್ ತುಂಡಾಗಿತ್ತು. ಇದಾದ ಬಳಿಕ ಸಂತೋಷ್ಗೆ ಚಿತ್ರತಂಡ ಕೊಂಚವೂ ನಷ್ಟ ತುಂಬಿ ಕೊಟ್ಟಿರಲಿಲ್ಲ.

ಈ ಬಗ್ಗೆ ಅವರು ಚಿತ್ರ ತಂಡದ ಬಳಿ ಕೇಳಿಕೊಂಡಿದ್ದರು. ಈ ವೇಳೆ ನಷ್ಟ ಪರಿಹಾರ ಮಾಡದೆ ಒಂದೂವರೆ ಲಕ್ಷ ರೂಪಾಯಿ ಬೆಲೆಯ ಮೆಮೊರಿ ಕಾರ್ಡ್ ಕಿತ್ತುಕೊಂಡಿರುವ ಆರೋಪವನ್ನು ಸಂತೋಷ್ ಮಾಡಿದ್ದಾರೆ.

ಇದರಿಂದ ಮನನೊಂದು ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಸದ್ಯ ಮಾಗಡಿ ರೋಡ್ ಠಾಣೆಗೆ ಸಂತೋಷ್ ಸಹೋದರಿ ದೂರು ನೀಡಿದ್ದಾರೆ.

ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮಂಗಳವಾರ (ಡಿಸೆಂಬರ್ 3) ವಿಚಾರಣೆಗೆ ಬರುವಂತೆ ಚಿತ್ರತಂಡಕ್ಕೆ ಪೊಲೀಸರು ಸೂಚನೆ ನೀಡಿದ್ದು, ವಿಚಾರಣೆಯ ಬಳಿಕ ಪೊಲೀಸರು ಮುಂದಿನ ಕ್ರಮದ ಬಗ್ಗೆ ನಿರ್ಧಾರ ಮಾಡಲಿದ್ದಾರೆ.

ಅಂದಹಾಗೆ ಈ ಮೊದಲು ‘ಮಾರ್ಟಿನ್’, ‘ಯುವ’ ಸಿನಿಮಾಗಳಲ್ಲಿ ಕೆಲಸ ಮಾಡಿದ ಅನುಭವ ಸಂತೋಷ್ಗೆ ಇದೆ. ಜೈದ್ ಖಾನ್ ಅವರು ಮೊದಲು ನಟಿಸಿದ ಸಿನಿಮಾ ‘ಬನಾರಸ್’. ಟೈಮ್ ಟ್ರಾವೆಲ್ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿತ್ತು.

ಈ ಚಿತ್ರಕ್ಕೆ ಸೋನಲ್ ಮೊಂಥೆರೋ ನಾಯಕಿಯಾಗಿದ್ದರು. ಪುನೀತ್ ಕೆರೆಹಳ್ಳಿ ಆಕ್ರೋಶ ಇನ್ನು ಪ್ರಕರಣ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದ್ದಂತೆಯೇ ಹಿಂದೂಪರ ಹೋರಾಟಗಾರ ಪುನೀತ್ ಕೆರೆಹಳ್ಳಿ ಆಸ್ಪತ್ರೆಯಲ್ಲಿ ಸಂತೋಷ್ ಅವರನ್ನು ಭೇಟಿ ಮಾಡಿ ಧೈರ್ಯ ಹೇಳಿದ್ದಾರೆ. ಅಲ್ಲದೆ ಸಂತೋಷ್ ಅವರಿಗೆ ಹೋರಾಟದ ಮೂಲಕ ನ್ಯಾಯ ಕೊಡಿಸುವ ಭರವಸೆ ನೀಡಿದ್ದು, ಚಿತ್ರತಂಡದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಸಹಕಾರಿ ಕ್ಷೇತದ ಧುರೀಣ ಬೆಳಪು ಕಾಂಗ್ರೆಸ್ ಮುಖಂಡ ಪುತ್ರನ ಹುಚ್ಚಾಟಕ್ಕೆಅಮಾಯಕ ಯುವಕನ ಬಲಿ

The Karnataka Today

ಮಲೆನಾಡಿನಲ್ಲಿ 13 ವರ್ಷಗಳ ನಂತರ ಮತ್ತೆ ಕಾಣಿಸಿಕೊಂಡ ನಕ್ಸಲ್ ಹೆಜ್ಜೆ ಗುರುತು ತನಿಖೆ ಚುರುಕು

The Karnataka Today

ಚಳಕಾಪುರಗ್ರಾಮ ಹನುಮ ಜಾತ್ರೆಯಲ್ಲಿ ಗುಂಪು ಘರ್ಷಣೆ ಶಾಂತಿ ಸ್ಥಾಪನೆಗೆ ಮನವಿ

The Karnataka Today

Leave a Comment