ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್‌ ಲ್ಯಾಕ್ಟೇಟ್ ಸಲ್ಯೂಷನ್ ಗ್ಲುಕೋಸ್ ಬಳಕೆಗೆ ತಡೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

2

“ಬಳ್ಳಾರಿ ಜಿಲ್ಲೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್‌ ಲ್ಯಾಕ್ಟೇಟ್ ಸಲ್ಯೂಷನ್ ಗ್ಲುಕೋಸ್ ಬಳಕೆಗೆ ತಡೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶನಿವಾರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬಾಣಂತಿಯರ ಸಾವಿಗೆ ರಿಂಗರ್‌ ಲ್ಯಾಕ್ಟೇಟ್ ಸಲ್ಯೂಷನ್ ಬಳಕೆ ಕಾರಣವೇ ಎಂಬುದು ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲ.


ಆದರೂ ಅನುಮಾನದಿಂದ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದರು. ರಿಂಗಲ್ ಲ್ಯಾಕ್ಟೇಟ್ ಸಲ್ಯೂಷನ್ ಗ್ಲುಕೋಸ್ ನ್ನು ಈ ಹಿಂದಿನಿಂದಲೂ ಆಸ್ಪತ್ರೆಗಳಲ್ಲಿ ಬಳಕೆ ಮಾಡುತ್ತಾ ಬರಲಾಗುತ್ತಿದೆ. ಈ ಬಾರಿಯೂ ಔಷಧ ಸರಬರಾಜು ನಿಗಮಕ್ಕೆ 192 ಬ್ಯಾಚ್ ಗಳಲ್ಲಿ ಐವಿ ದ್ರಾವಣ ಪೂರೈಕೆಯಾಗಿತ್ತು.

ಇದರ ಬಳಕೆ ಸಂದರ್ಭದಲ್ಲಿ ಎರಡು ಬ್ಯಾಚ್ ಗಳ ಬಗ್ಗೆ ಕೆಲವು ಅನುಮಾನಗಳು ವ್ಯಕ್ತವಾದಾಗ ಮುಂಜಾಗ್ರತೆ ದೃಷ್ಟಿಯಿಂದ ಸಂಪೂರ್ಣವಾಗಿ ಎಲ್ಲ 192 ಬ್ಯಾಚ್ ಗಳ ದ್ರಾವಣವನ್ನು ಆಸ್ಪತ್ರೆಗಳಲ್ಲಿ ಬಳಸದಂತೆ ತಡೆಹಿಡಿಯಲಾಗಿತ್ತು. ಬಳಿಕ ಸೆಂಟ್ರಲ್ ಡ್ರಗ್ ಲ್ಯಾಬೊರೇಟರಿಯಲ್ಲಿ ಪರೀಕ್ಷೆ ನಡೆಸಿದಾಗ ದ್ರಾವಣ ಬಳಸಬಹುದು ಎಂಬ ವರದಿ ಬಂದಿತ್ತು ಎಂದು ತಿಳಿಸಿದರು.

ಕೇಂದ್ರೀಯ ಔಷಧ ಪ್ರಯೋಗಾಲಯದ ವರದಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತಜ್ಞರ ತಾಂತ್ರಿಕ ಸಮಿತಿ ರಚಿಸಿ ಪರೀಕ್ಷೆ ನಡೆಸಿ ಗುಣಮಟ್ಟದ ಕೆಲವು ಬ್ಯಾಚ್ ಗಳ ದ್ರಾವಣ ಬಳಸಲು ಅವಕಾಶ ಮಾಡಿಕೊಡಲಾಗಿತ್ತು.

ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ದ್ರಾವಣದ ಬಳಕೆಯಾಗಿದ್ದು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮಾತ್ರ ಅನುಮಾನಗಳು ವ್ಯಕ್ತವಾಗಿವೆ ಎಂದರು

ಬಳ್ಳಾರಿ ಆಸ್ಪತ್ರೆಗೆ ಪೂರೈಕೆಯಾದ ಬ್ಯಾಚ್ ಗಳನ್ನು ಅನರೋಬಿಕ್ ಟೆಸ್ಟ್ ಗೆ ಕಳುಹಿಸಿದ್ದೇವೆ. ಬಾಣಂತಿಯರ ಸಾವಿಗೆ ಐವಿ ದ್ರಾವಣ ಕಾರಣವೇ ಎಂಬುದಕ್ಕೆ ಪರೀಕ್ಷೆಯಲ್ಲಿ ಸ್ಪಷ್ಟತೆ ಸಿಗಲಿದೆ.

ವಾರದಲ್ಲಿ ಈ ವರದಿ ಬರಲಿದೆ. ತದನಂತರ ಐವಿ ದ್ರಾವಣ ಬಳಕೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಅಲ್ಲಿಯವರೆಗೂ ಮುಂಜಾಗ್ರತೆ ಕ್ರಮವಾಗಿ ಐವಿ ರಿಂಗರ್ ಲ್ಯಾಕ್ವೇಟ್ ಬಳಕೆಯನ್ನು ರಾಜ್ಯಾದ್ಯಂತ ಸ್ಥಗಿತಗೊಳಿಸಲಾಗಿದೆ ಎಂದು ಸಚಿವರು ಹೇಳಿದರು

Leave a comment

Leave a Reply

Your email address will not be published. Required fields are marked *

Related Articles

ಧರ್ಮಸ್ಥಳ ಪ್ರಕರಣ: ಮೃತದೇಹಗಳ ಅಸ್ತಿಪಂಜರ ಪತ್ತೆ ಕಾರ್ಯಾಚರಣೆಗೆ ಜಿಪಿಆರ್ ಬಳಕೆಗೆ ಆಗ್ರಹ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳ ಪತ್ತೆಗೆ ಜಿಪಿಆರ್ ಬಳಕೆ ಮಾಡುವಂತೆ ಒತ್ತಾಯ ಕೇಳಿಬರುತ್ತಿದೆ....

ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ  ಜೈಲು ಶಿಕ್ಷೆ

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ...

ಧರ್ಮಸ್ಥಳ ಅಪರಿಚಿತ ಸಾವಿನ ಪ್ರಕರಣದ ಯುಡಿಆರ್ ಮಾಹಿತಿ ಡಿಲೀಟ್ ಬೆಳ್ತಂಗಡಿ ಪೊಲೀಸರ ಮೇಲೆ ಸಂಶಯದ ನೆರಳು

“ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ...

ಎಮ್ಮೆ ಕಟ್ಟುತ್ತಿದ್ದ ಶೆಡ್ ದ್ವಂಸ ರೊಚ್ಚಿಗೆದ್ದ ರೈತ ದಂಪತಿ; ಕಾಂಗ್ರೆಸ್ ಶಾಸಕರ ಕಚೇರಿಯಲ್ಲಿ ಎಮ್ಮೆ ಕಟ್ಟಿಹಾಕಿ ಆಕ್ರೋಶ

ತೆಲಂಗಾಣ: ಜಾನುವಾರಗಳ ಶೆಡ್ ಧ್ವಂಸಕ್ಕೆ ಶಾಸಕರೇ ಕಾರಣ ಎಂದು ಆರೋಪಿಸಿದ ರೈತ ದಂಪತಿ, ಕಾಂಗ್ರೆಸ್ ಶಾಸಕ...