thekarnatakatoday.com
National

ದೇಶಾದ್ಯಂತ ವಕ್ಫ್ ಕಾಯಿದೆ ತಿದ್ದುಪಡಿ ಹೋರಾಟವಾಗುತ್ತಿದ್ದಂತೆ ವಕ್ಫ್ ಬೋರ್ಡ್ ವಿಸರ್ಜಿಸಿದ ಆಂಧ್ರ ಪ್ರದೇಶ ಸರಕಾರ

ವಕ್ಫ್ ಮಂಡಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರ ರಚಿಸಿದ್ದ  ವಕ್ಫ್ ಮಂಡಳಿಯನ್ನೇ ವಜಾಗೊಳಿಸಿ ಆಂದ್ರಪ್ರದೇಶ ಸರಕಾರ  ಆದೇಶ ಹೊರಡಿಸಿದೆ.

ಹೌದು.. ವಕ್ಫ್ ಮಂಡಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಹಿಂದಿನ ಸಿಎಂ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ಸಿಪಿ ಸರ್ಕಾರ ರಚಿಸಿದ್ದ ವಕ್ಫ್ ಬೋರ್ಡ್ ಅನ್ನು ಆಂಧ್ರ ಪ್ರದೇಶ ಸರ್ಕಾರ ವಿಸರ್ಜಿಸಿದೆ.

ಈ ಕುರಿತು ಶನಿವಾರ ಆದೇಶ ಹೊರಡಿಸಲಾಗಿದೆ ಎಂದು ರಾಜ್ಯ ಕಾನೂನು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಎನ್.ಎಂ.ಡಿ.ಫಾರೂಕ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹೊರಡಿಸಿದ್ದ ಜಿಒ-47 ರದ್ದುಗೊಳಿಸಿ ಹಾಲಿ ಸರ್ಕಾರ ಹೊಸ ಜಿಒ-75 ಹೊರಡಿಸಿದೆ. ಕಳೆದ ವರ್ಷ ಅಕ್ಟೋಬರ್ 21 ರಂದು ಹಿಂದಿನ ಸರ್ಕಾರವು ಮಂಡಳಿಯ ಸದಸ್ಯರ ನಾಮನಿರ್ದೇಶನವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ನಂತರ ವಕ್ಫ್ ಮಂಡಳಿಯ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಹೈಕೋರ್ಟ್ ಮಧ್ಯಂತರ ಆದೇಶಗಳನ್ನು ನೀಡಿದೆ ಎಂದು ಸಚಿವ ಎನ್.ಎಂ.ಡಿ.ಫಾರೂಕ್ ಸ್ಪಷ್ಟಪಡಿಸಿದರು.

ಅಲ್ಲದೆ ಹಿಂದಿನ ಸರ್ಕಾರದ ಕ್ರಮಗಳಿಂದಾಗಿ ವಕ್ಫ್ ಬೋರ್ಡ್ ಎದುರಿಸಿದ ಕಾನೂನು ಮತ್ತು ಆಡಳಿತಾತ್ಮಕ ಸವಾಲುಗಳನ್ನು ಎತ್ತಿ ಹಿಡಿದ ಸಚಿವ ಫಾರೂಕ್, ‘ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ನೇತೃತ್ವದ ಪ್ರಸ್ತುತ ಸಮ್ಮಿಶ್ರ ಸರ್ಕಾರವು ಈ ಸಮಸ್ಯೆಗಳನ್ನು ಪರಿಹರಿಸುವ ಗುರಿಯನ್ನು ಹೊಂದಿದೆ.

ಹೊಸ ಆದೇಶ, GO-75, ವಕ್ಫ್ ಮಂಡಳಿಯಲ್ಲಿನ ಆಡಳಿತ ನಿರ್ವಾತವನ್ನು ಪರಿಹರಿಸುವ ಉದ್ದೇಶವನ್ನು ಹೊಂದಿದೆ. ವಕ್ಫ್ ಆಸ್ತಿಗಳನ್ನು ರಕ್ಷಿಸಲು ಮತ್ತು ಅದರ ಹೊಸ ನಿರ್ದೇಶನಗಳ ಅಡಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣವನ್ನು ಉತ್ತೇಜಿಸಲು ಸರ್ಕಾರವು ಬದ್ಧವಾಗಿದೆ ಎಂದು ಅವರು ಒತ್ತಿ ಹೇಳಿದರು.

Related posts

ರೈತರಿಗೆ ಅಲ್ಪ ಅವಧಿ ಕೃಷಿ ಸಾಲ ಮೊತ್ತವನ್ನು ಹೆಚ್ಚಿಸುವಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಮನವಿ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

The Karnataka Today

ಗಾಂಧಿ ಕುಟುಂಬವನ್ನು ಮೆಚ್ಚಿಸುವ ಸಲುವಾಗಿ ಸಾರ್ವಕರ್ ಅವರನ್ನು ಅವಮಾನಿಸಿದ ಮಣಿಶಂಕರ್ ಅಯ್ಯರ್ ಗೆ ಗಾಂಧಿ ಕುಟುಂಬದಿಂದ ಅವಮಾನ

The Karnataka Today

ದೇಶಾದ್ಯಂತ ಸಂಚಲನ ಮೂಡಿಸಿದ್ದ ಟೆಕ್ಕಿ ಅತುಲ್ ಆತ್ಮಹತ್ಯೆ ಪ್ರಕರಣ ಪತ್ನಿಸಹಿತ ಮೂವರ ಬಂಧನ

The Karnataka Today

Leave a Comment