ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಜೋರಾಗಿರುವಂತೆಯೇ ಇತ್ತ ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ದುರಂತವೊಂದು ತಪ್ಪಿದೆ. ಹೌದು.. ಫೆಂಗಲ್ ಚಂಡಮಾರುತ ಅಪ್ಪಳಿಸಿದ್ದರಿಂದ ತಾತ್ಕಾಲಿಕವಾಗಿ ಸ್ಥಗಿತವಾಗಿದ್ದ ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಭಾನುವಾರ ಮುಂಜಾನೆ 4 ಗಂಟೆಯಿಂದ ಸೇವೆ ಪುನಾರಂಭಿಸಿದೆ.
ಭಾರಿ ಮಳೆ ನಡುವೆಯೇ ಚೆನ್ನೈ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಸೇವೆ ಪುನಾರಂಭಗೊಂಡಿದ್ದು, ಈ ನಡುವೆ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಮಾಡುತ್ತಿದ್ದ ಇಂಡಿಗೋ ವಿಮಾನ ಕೂದಲೆಳೆ ಅಂತರದಲ್ಲಿ ಭಾರಿ ಅಪಘಾತದಿಂದ ಪಾರಾಗಿದೆ.
ಇಂಡಿಗೋ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನ (Airbus A320 Neo)ವೊಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ಇಳಿಯಲು ಯತ್ನಿಸಿದಾಗ ರನ್ ವೇ ಮೇಲೆ ವಿಮಾನ ಜಾರಿದ್ದು, ಕೂಡಲೇ ಎಚ್ಚೆತ್ತ ಪೈಲಟ್ ಮತ್ತೆ ವಿಮಾನವನ್ನು ಟೇಕ್ ಆಫ್ ಮಾಡುವ ಮೂಲಕ ಆಗಬಹುದಾಗಿದ್ದ ದೊಡ್ಡ ಅನಾಹುತವನ್ನು ಸ್ವಲ್ಪದರಲ್ಲೇ ತಪ್ಪಿಸಿದ್ದಾರೆ.
ಚಂಡಮಾರುತದ ಪರಿಣಾಮ ತೀವ್ರವಾದ ಗಾಳಿಯಿಂದ ಅಲುಗಾಡುತ್ತಿರುವಂತೆ ಕಂಡುಬಂದ ವಿಮಾನವು ಇಳಿಯಲು ಸಾಧ್ಯವಾಗಲಿಲ್ಲ. ಈ ವೇಳೆ ಪೈಲಟ್ ಅನಿವಾರ್ಯವಾಗಿ ಮತ್ತೆ ವಿಮಾನವನ್ನು ಟೇಕ್ ಆಫ್ ಮಾಡಲಾಯಿತು.
ಈ ಭಯಾನಕ ವಿಡಿಯೋವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಪೈಲಟ್ ನ ಸಮಯ ಪ್ರಜ್ಞೆ ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿವೆ
ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೈಲೆಟ್ ನ ಸಮಯಪ್ರಜ್ಞೆಯಿಂದ ತಪ್ಪಿದ ವಿಮಾನ ದುರಂತ
ಫೆಂಗಲ್ ಚಂಡಮಾರುತ ಅಪ್ಪಳಿಸಿದ್ದರಿಂದ ತಾತ್ಕಾಲಿಕವಾಗಿ ಸ್ಥಗಿತವಾಗಿದ್ದ ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರನ್ ವೇ ಮೇಲೆ ಜಾರಿದ ಇಂಡಿಗೋ ವಿಮಾನ