thekarnatakatoday.com
State

ಕ್ರೀಡಾ ಚಟುವಟಿಕೆಯಲ್ಲಿರುವ ಮಕ್ಕಳಿಗೆ ಶೇ25 ರಷ್ಟು ಹಾಜರಾತಿ, 10 ಗ್ರೇಸ್ ಮಾರ್ಕ್ ನೀಡಲು ಸರ್ಕಾರ ಚಿಂತನೆ ::ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಹಾಜರಾತಿ ರಿಯಾಯಿತಿ ಮತ್ತು ಗ್ರೇಸ್ ಮಾರ್ಕ್‌ ನೀಡುವ ಮನವಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕ್ರೀಡೆಯಲ್ಲಿ ತೊಡಗಿಕೊಳ್ಳುವ ಮಕ್ಕಳಿಗೆ ಪ್ರೋತ್ಸಾಹ ನೀಡಲು ನಿರ್ಧರಿಸಿದೆ. ಸಿಎಂ ಸಿದ್ದರಾಮಯ್ಯ


ಬೆಂಗಳೂರು: ಕ್ರೀಡೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳಿಗೆ ಶೇ 25ರಷ್ಟು ಹಾಜರಾತಿ ರಿಯಾಯಿತಿ ಮತ್ತು ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ 10 ಗ್ರೇಸ್ ಅಂಕಗಳನ್ನು ನೀಡುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.

ಭಾನುವಾರ ನಗರದಲ್ಲಿ ನಡೆದ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ (ಕೆಒಎ) ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಸಿಎಂ, ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಹಾಜರಾತಿ ರಿಯಾಯಿತಿ ಮತ್ತು ಗ್ರೇಸ್ ಮಾರ್ಕ್‌ ನೀಡುವ ಮನವಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕ್ರೀಡೆಯಲ್ಲಿ ತೊಡಗಿಕೊಳ್ಳುವ ಮಕ್ಕಳಿಗೆ ಪ್ರೋತ್ಸಾಹ ನೀಡಲು ನಿರ್ಧರಿಸಿದೆ ಎಂದು ಹೇಳಿದರು.

ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಪಟುಗಳು ಭಾಗವಹಿಸಲು ಪ್ರೋತ್ಸಾಹಿಸಲು ಕೆಒಎ ಕಳೆದ 22 ವರ್ಷಗಳಿಂದ ಈ ಪ್ರಶಸ್ತಿಗಳನ್ನು ನೀಡುತ್ತಿದೆ.

ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು-ನೆರವು ನೀಡಲು ನಾನು ಸದಾ ಸಿದ್ಧ. ರಾಜ್ಯ ಬಜೆಟ್ ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ನಿರಂತರ ಅನುದಾನ ನೀಡಿದ್ದೇವೆ.

ರಾಜ್ಯದಿಂದ ಯಾರಾದರೂ ಒಲಂಪಿಕ್ಸ್ ನಲ್ಲಿ ದೇಶಕ್ಕೆ ಒಂದು ಚಿನ್ನ ತನ್ನಿ ಎಂದು ನಾಡಿನ ಕ್ರೀಡಾಳುಗಳಲ್ಲಿ ಮನವಿ ಮಾಡುತ್ತಿದ್ದೇನೆಂದು ತಿಳಿಸಿದರು. ಚಿನ್ನದ ಪದಕ ಪಡೆದವರಿಗೆ ರೂ.6 ಕೋಟಿ ಮೀಸಲಿಟ್ಟಿದ್ದೀವಿ. ಬೆಳ್ಳಿ ಪದಕ ಪಡೆದವರಿಗೆ ರೂ.4 ಕೋಟಿ ಇಟ್ಟಿದ್ದೇವೆ. ಆದರೆ, ಯಾರೂ ಪದಕ ತರ್ತಾನೇ ಇಲ್ಲ.

ದೇಶಕ್ಕೆ ಯಾರಾದರೂ ಚಿನ್ನ ಗೆದ್ದು ತನ್ನಿ. ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಬೇಕು ಎನ್ನುವ ಪ್ರೋತ್ಸಾಹದಾಯಕ ಉದ್ದೇಶದಿಂದ ಕರ್ನಾಟಕ ಒಲಂಪಿಕ್ ಸಂಸ್ಥೆ 22 ವರ್ಷಗಳಿಂದ ಈ ಪ್ರಶಸ್ತಿಗಳನ್ನು ನೀಡುತ್ತಿದೆ.

ಗೋವಿಂದರಾಜು ಅವರು ಒಲಂಪಿಕ್ ಸಂಸ್ಥೆ ಅಧ್ಯಕ್ಷರಾಗಿ ಕ್ರೀಡಾ ಕ್ಷೇತ್ರದ ಬೆಳವಣಿಗೆಗೆ ನಿರಂತರ ಶ್ರಮಿಸುತ್ತಿದ್ದಾರೆ. ನಾನು ಬಜೆಟ್ ರೂಪಿಸುವಾಗ ಚರ್ಚೆಯಲ್ಲಿ ಕುಳಿತು ಕ್ರೀಡಾಕ್ಷೇತ್ರಕ್ಕೆ ಅಗತ್ಯವಾದ ಎಲ್ಲವನ್ನೂ ಸೇರಿಸುತ್ತಾರೆ.

ನಾನು ಕ್ರೀಡಾಪಟು ಅಲ್ಲದಿದ್ದರೂ ಕ್ರೀಡಾಪ್ರೇಮಿ. ನಾನು ಶಾಲಾ, ಕಾಲೇಜಿನಲ್ಲಿ ಎಲ್ಲಾ ಕ್ರೀಡೆಗಳಲ್ಲೂ ಭಾಗವಹಿಸುತ್ತಿದ್ದೆ. ಒಂದೂ ಪ್ರಶಸ್ತಿ ಬರಲಿಲ್ಲ.

ಆದರೆ ಶಾಸಕರ ಕ್ರೀಡಾಕೂಟದಲ್ಲಿ ಸಿಕ್ಕಾಪಟ್ಟೆ ಪ್ರಶಸ್ತಿ ಬಂದಿತ್ತು. ಕ್ರೀಡೆಯಲ್ಲಿ ಸಣ್ಣ ಪುಟ್ಟ ದೇಶಗಳೆಲ್ಲಾ ಬಹಳ‌ ಮುಂದಿವೆ. ಆದರೆ, ಭಾರತದಂತಹ ದೊಡ್ಡ ದೇಶಕ್ಕೆ ಒಲಂಪಿಕ್ ನಲ್ಲಿ ಒಂದೂ ಚಿನ್ನ ಬರಲಿಲ್ಲ ಎನ್ನುವುದು ಬೇಸರದ ಸಂಗತಿ. ಹೀಗಾಗಿ ನಾನು ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಇರುವ ಎಲ್ಲಾ ಅನುಕೂಲ ಕಲ್ಪಿಸಿಕೊಡಲು ಸಿದ್ಧ.

ರಾಜ್ಯದ ಕ್ರೀಡಾಪಟುಗಳು ದೇಶಕ್ಕೆ ಒಲಂಪಿಕ್ಸ್ ನಲ್ಲಿ ಚಿನ್ನ ತರಲಿ ಎಂದು ಆಶಿಸುತ್ತೇನೆ. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಒಲಂಪಿಕ್ ಸಂಸ್ಥೆ ಅಧ್ಯಕ್ಷರಾದ ಗೋವಿಂದರಾಜು ಅವರು ಶಾಲಾ ಮಕ್ಕಳು ಕ್ರೀಡೆಯಲ್ಲಿ ಹೆಚ್ಚೆಚ್ಚು ಪರಿಣಾಮಕಾರಿಯಾಗಿ ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ಕ್ರೀಡಾ ಮಕ್ಕಳಿಗೆ ಶೇ25 ರಷ್ಟು ಹಾಜರಾತಿ ಮತ್ತು 10 ಗ್ರೇಸ್ ಮಾರ್ಕ್ ನೀಡುವಂತೆ ನಿಯಮ ರೂಪಿಸಲು ಮನವಿ ಮಾಡಿದ್ದಾರೆ.

ಈ ಬೇಡಿಕೆಗಳು ನ್ಯಾಯೋಚಿತವಾಗಿವೆ. ಈ ಬಗ್ಗೆ ಗಂಭೀರವಾಗಿ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ, ಫೋಟೊ ಜರ್ನಲಿಸ್ಟ್ ಸೇರಿದಂತೆ 15 ಅತ್ಯುತ್ತಮ ಕ್ರೀಡಾಪಟುಗಳು ಮತ್ತು ಏಳು ಮಂದಿ ಅನುಭವಿಗಳಿಗೆ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ (ಕೆಒಎ) ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ವಿಜೇತರಾದ 15 ಮಂದಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಸ್ಮರಣಿಕೆ ಹಾಗೂ 1 ಲಕ್ಷ ರೂ. ಚೆಕ್ ನೀಡಿದರು. ನಿವೃತ್ತ ಯೋಧರು ಸ್ಮರಣಿಕೆ ಸ್ವೀಕರಿಸಿದರು

Related posts

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಇಲ್ಲ ಸೋಮಶೇಖರ ಮತ್ತು ಹೆಬ್ಬಾರ್ ಉಚ್ಚಾಟನೆಗೆ ಕೋರ್ ಕಮಿಟಿ ಸಭೆಯಲ್ಲಿ ನಿರ್ಣಯ

The Karnataka Today

ಕನ್ನಡ ಸಂಸ್ಕೃತಿ ಇಲಾಖೆಯ ಅಧಿಕಾರಿಗಳ ಎಡವಟ್ಟಿನಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಲಾಗದ ಸಮಾಜ ಸೇವಕ

The Karnataka Today

ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ: ಯಾವುದೇ ಕಾರಣಕ್ಕೂ ಕ್ಷಮಿಸಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್

The Karnataka Today

Leave a Comment