ಶಿಸ್ತು ಸಮಿತಿ ಹೆಸರಿನಲ್ಲಿ ವಿಜಯೇಂದ್ರ ನಕಲಿ ನೋಟೀಸ್ ನೀಡಿದ್ದಾನೆ ಅಸಲಿ ನೋಟೀಸ್ ಬರಲಿ ಉತ್ತರಿಸುತ್ತೇನೆ::ಬಸವನಗೌಡ ಯತ್ನಾಳ್

3

” ಸ್ವಪಕ್ಷೀಯರ ವಿರುದ್ಧವೇ ನಿರಂತರವಾಗಿ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮಗೆ ಶಿಸ್ತು ಸಮಿತಿ ನೊಟೀಸ್ ಬಂದಿರುವ ಬಗ್ಗೆ ಹೊಸ ವರಸೆ ತೆಗೆದಿರುವ ಯತ್ನಾಳ್, ವಿಜಯೇಂದ್ರನೇ ನಕಲಿ ನೊಟೀಸ್ ಮಾಡಿಸಿದ್ದಾನೆ ಎಂದು ಆರೋಪಿಸಿದ್ದಾರೆ. “


ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಯತ್ನಾಳ್, ನನಗೆ ಈ ವರೆಗೂ ಅಧಿಕೃತವಾಗಿ ಪಕ್ಷದ ಕೇಂದ್ರ ಸಮಿತಿಯಿಂದ ನೊಟೀಸ್ ಬಂದಿಲ್ಲ, ವಾಟ್ಸ್ ಆಪ್ ನಲ್ಲಿ ನೊಟೀಸ್ ಬಂದಿದೆ.

ವಾಟ್ಸ್ ಆಪ್ ನಲ್ಲಿ ಬಂದಿರುವುದನ್ನು ಹೇಗೆ ನಂಬಲಿ? ವಿಜಯೇಂದ್ರನೇ ನಕಲಿ ನೊಟೀಸ್ ಮಾಡಿಸಿದ್ದಾನೆ ಎನಿಸುತ್ತಿದೆ. ಅಧಿಕೃತವಾಗಿ ನೊಟೀಸ್ ಬಂದ ಬಳಿಕ ಸರಿಯಾದ ಉತ್ತರ ನೀಡುತ್ತೇನೆ” ಎಂದು ಹೇಳಿದ್ದಾರೆ.

ಆರೋಪಗಳಿಗೆ ದಾಖಲೆಗಳಿದ್ದರೆ ಬಿಡುಗಡೆ ಮಾಡಿ: ಯತ್ನಾಳ್’ಗೆ ವಿಜಯೇಂದ್ರ ಸವಾಲು ಇದೇ ವೇಳೆ ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಯತ್ನಾಳ್, ನಾನು ಸ್ವಂತ ಸಾಮರ್ಥ್ಯದ ಮೇಲೆ ನಾಯಕನಾಗಿದ್ದೀನಿ. ಯಡಿಯೂರಪ್ಪ ಭಯದಿಂದ ವಿಜಯೇಂದ್ರನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿದ್ದಾರೆ

ವಿಜಯೇಂದ್ರ ಇನ್ನೂ ಸಣ್ಣ ಹುಡುಗ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ. ನೊಟೀಸ್ ಸಂಬಂಧ ನಾನು ಯಾವುದೇ ಹೈಕಮಾಂಡ್ ನಾಯಕರನ್ನೂ ಭೇಟಿ ಮಾಡುವುದಿಲ್ಲ ಎಂದು ಯತ್ನಾಳ್ ಸ್ಪಷ್ಟನೆ ನೀಡಿದ್ದಾರೆ. ನನಗೆ ಬಂದಿರುವ ನೊಟೀಸ್ ನಕಲಿ ಎಂದೆನಿಸುತ್ತಿದೆ.

ವಿಜಯೇಂದ್ರ ಅವರಪ್ಪನ ಸಹಿ ಮಾಡಿ ಕಡತಗಳನ್ನು ರವಾನಿಸಿರುವ ಉದಾಹರಣೆಗಳಿವೆ. ಈ ಬಗ್ಗೆ ಹರಿಪ್ರಸಾದ್ ಆರೋಪ ಮಾಡಿದ್ದರು ಎಂದು ಯತ್ನಾಳ್ ಹೊಸ ಆರೋಪ ಮಾಡಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಇತಿಹಾಸ ಜ್ಞಾನ ಎಳ್ಳಷ್ಟೂ ಇಲ್ಲದ ಸಚಿವ ಮಹದೇವಪ್ಪ ಇತಿಹಾಸ ತಿಳಿದು ಮಾತನಾಡಲಿ ::ಸಂಸದ ಯದುವೀರ್ ಒಡೆಯರ್

“ಕೃಷ್ಣರಾಜ ಸಾಗರ ಜಲಾಶಯಕ್ಕೆ ಟಿಪ್ಪುಸುಲ್ತಾನ್‌ ಮೊದಲ ಅಡಿಗಲ್ಲು ಹಾಕಿದ್ದರು ಎಂಬ ಸಚಿವ ಮಹದೇವಪ್ಪ ಅವರ ಹೇಳಿಕೆ...

ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಾಗಿ 50 ಕೋಟಿ ಅನುದಾನ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

“ಶಾಸಕರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50...

ರಾಜ್ಯ ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಸಂಚಲನ ಮೂಡಿಸಿದ್ದ ಆರೋಪದ ಆಡಿಯೋ ನನ್ನದೇ, ನನ್ನ ಆರೋಪಕ್ಕೆ ನಾನು ಬದ್ಧ; ಕಾಂಗ್ರೆಸ್‌ ಶಾಸಕ ಬಿ.ಆರ್‌. ಪಾಟೀಲ್‌

ಬೆಂಗಳೂರು: ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಕುರಿತು ಸಚಿವ ಜಮೀರ್‌ ಖಾನ್‌ ಅವರ ಆಪ್ತ ಕಾರ್ಯದರ್ಶಿ ಸರ್ಫ‌ರಾಜ್‌...

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮ :: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ದಾವಣಗೆರೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿದೆ. ಸಮಾಜದಲ್ಲಿ ಪುಟಾಣಿ ಮಕ್ಕಳಿಂದ...