ಕಲ್ಬುರ್ಗಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಅನಿತಾ ರವರು ಅಧಿಕಾರ ಸ್ವೀಕರಿಸಿದ ದಿನದಿಂದ ಜೈಲಿನಲ್ಲಿ ನಡೆಯುತ್ತಿದ್ದ ಅಕ್ರಮಗಳನ್ನೆಲ್ಲ ನಿಲ್ಲಿಸಿ ಜೈಲ್ನಲ್ಲಿ ಶಿಸ್ತು ಮೂಡಿಸಿದ್ದರು
ಇದರಿಂದಾಗಿ ಜೈಲ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಲಭ್ರಷ್ಟ ಸಿಬ್ಬಂದಿಗಳ ಹಾಗೂ ಕೆಲವು ಕ್ರಿಮಿನಲ್ ಹಿನ್ನಲೆಯುಳ್ಳ ಕೈದಿಗಳೊಂದಿಗೆ ವ್ಯವಹಾರ ನಿಂತು ಹೋಗಿತ್ತು ಇದರಿಂದ ಆಕ್ರೋಶಗೊಂಡ ಕೆಲವರು ದಕ್ಷ ಹಾಗೂ ಪ್ರಾಮಾಣಿಕ ರಾಗಿ ಕಾರ್ಯನಿರ್ವಹಿಸುತ್ತಿದ್ದ ಅನಿತಾ ರವರನ್ನು ಅಲ್ಲಿಯ ಕೆಲ ಖೈದಿಗಳು ಬ್ಲಾಕ್ ಮೆಲ್ ಮಾಡಿ ಅವರ ವಾಹನ ಸ್ಫೋಟ ಮಾಡಿ ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿರುವದನ್ನು ಖಂಡಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು
ಹಾಗೂ ದಕ್ಷ ಪ್ರಾಮಾಣಿಕ ಕೇಂದ್ರ ಕಾರಾಗೃಹ ಅಧೀಕ್ಷಕಿ ಅನಿತಾ ಅವರಿಗೆ ಭ್ರಷ್ಟಾಚಾರ ರಹಿತ ವಾಗಿ ಕಾರ್ಯನಿರ್ವಹಿಸಲು ಬೆಂಬಲ ನೀಡುವ ನಿಟ್ಟಿನಲ್ಲಿ ಹಾಗೂ ಸೂಕ್ತ ರಕ್ಷಣೆ ನೀಡಬೇಕಾಗಿ ಅಗ್ರಹಿಸಿ ಹಿಂದೂ ಜಾಗೃತಿ ಸೇನೆ ಜಿಲ್ಲಾ ಘಟಕ ವತಿಯಿಂದ
ನಾಳೆ ಬೆಳಿಗ್ಗೆ 11:30ಕ್ಕೆ ಸರಿಯಾಗಿ ಕಲ್ಬುರ್ಗಿ ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಯವರ ಮುಖಾಂತರ ರಾಜ್ಯ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ಹಿಂದೂ ಜನ ಜಾಗೃತಿ ಸೇನೆ ಜಿಲ್ಲಾಧ್ಯಕ್ಷ ಲಕ್ಷ್ಮಿಕಾಂತ್ ಸಾದ್ವಿ ಮಾಧ್ಯಮಗಳಿಗೆ ತಿಳಿಸಿದ್ದಾರೆ