ಪತ್ನಿ ಮತ್ತು ಮಕ್ಕಳ ಮೇಲೆ ದೌರ್ಜನ್ಯ ಪೊಲೀಸ್ ಕಾನ್ಸ್‌ಟೇಬಲ್‌ ವಿರುದ್ಧ ಎಫ್ ಐ ಆರ್

2

ಮಕ್ಕಳ ಮೇಲೆ ಪತಿ ದೌರ್ಜನ್ಯ ಎಸಗುತ್ತಿದ್ದು, ಹಲ್ಲೆ ನಡೆಸುತ್ತಿದ್ದಾರೆಂದು ಆರೋಪಿಸಿ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಕಲಬುರಗಿಯ ವಿಶ್ವವಿದ್ಯಾಲಯ ಪೊಲೀಸರು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್‌ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾನ್ಸ್‌ಟೇಬಲ್‌ತಾರಾಸಿಂಗ್‌ ರಾಠೋಡ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.


ಇಬ್ಬರು ಗಂಡು ಮಕ್ಕಳ ಮೇಲೆ ಪತಿ ದೌರ್ಜನ್ಯ ಎಸಗುತ್ತಿದ್ದು, ಲೈಂಗಿಕವಾಗಿ ನಿಂದಿಸುತ್ತಿದ್ದಾರೆ. ನಮ್ಮ ನಡುವೆ ಇರಬೇಕಿದ್ದ ಖಾಸಗಿತನವನ್ನು ಮಕ್ಕಳೂ ನೋಡುವಂತೆ ಒತ್ತಾಯಿಸುತ್ತಾರೆ.

ಮಕ್ಕಳಿಗೆ ಬೆಲ್ಟ್ ನಲ್ಲಿ ಹೊಡೆಯುತ್ತಿದ್ದು, ದೈಹಿಕ ಹಾಗೂ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ. ಮನೆಯಲ್ಲಿ ಅಸುರಕ್ಷಿತ ಹಾಗೂ ಭಯದ ವಾತಾವರಣ ಸೃಷ್ಟಿಸುತ್ತಿದ್ದಾರೆಂದು ದೂರಿನಲ್ಲಿ ಹೇಳಿಕೊಂಡಿದ್ದಾರೆ.

ಪತಿಯ ವರ್ತನೆ ತೀವ್ರ ಆಘಾತವನ್ನುಂಟು ಮಾಡಿದೆ. ಹಿರಿಯ ಪುತ್ರನಿಗೆ ಶಾಲೆಗೆ ಹೋಗಲು ಬಿಡುತ್ತಿಲ್ಲ. ಇದೀಗ ಆತ ಶಿಕ್ಷಣದಿಂದ ವಂಚಿತವಾಗಿದ್ದೇನೆ. ಹೀಗಾಗಿ ಪತಿ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ನನಗೆ ಹಾಗೂ ಮಕ್ಕಳಿಗೆ ರಕ್ಷಣೆ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಧರ್ಮಸ್ಥಳ ಪ್ರಕರಣ: ಮೃತದೇಹಗಳ ಅಸ್ತಿಪಂಜರ ಪತ್ತೆ ಕಾರ್ಯಾಚರಣೆಗೆ ಜಿಪಿಆರ್ ಬಳಕೆಗೆ ಆಗ್ರಹ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳ ಪತ್ತೆಗೆ ಜಿಪಿಆರ್ ಬಳಕೆ ಮಾಡುವಂತೆ ಒತ್ತಾಯ ಕೇಳಿಬರುತ್ತಿದೆ....

ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ  ಜೈಲು ಶಿಕ್ಷೆ

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ...

ಧರ್ಮಸ್ಥಳ ಅಪರಿಚಿತ ಸಾವಿನ ಪ್ರಕರಣದ ಯುಡಿಆರ್ ಮಾಹಿತಿ ಡಿಲೀಟ್ ಬೆಳ್ತಂಗಡಿ ಪೊಲೀಸರ ಮೇಲೆ ಸಂಶಯದ ನೆರಳು

“ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ...

ಎಮ್ಮೆ ಕಟ್ಟುತ್ತಿದ್ದ ಶೆಡ್ ದ್ವಂಸ ರೊಚ್ಚಿಗೆದ್ದ ರೈತ ದಂಪತಿ; ಕಾಂಗ್ರೆಸ್ ಶಾಸಕರ ಕಚೇರಿಯಲ್ಲಿ ಎಮ್ಮೆ ಕಟ್ಟಿಹಾಕಿ ಆಕ್ರೋಶ

ತೆಲಂಗಾಣ: ಜಾನುವಾರಗಳ ಶೆಡ್ ಧ್ವಂಸಕ್ಕೆ ಶಾಸಕರೇ ಕಾರಣ ಎಂದು ಆರೋಪಿಸಿದ ರೈತ ದಂಪತಿ, ಕಾಂಗ್ರೆಸ್ ಶಾಸಕ...