ಅಪ್ರಾಪ್ತ ಹಿಂದೂ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನೆಡೆಸಿದ ಹಾಜಿ ಮಲಂಗ ಗಣಿಯಾರ್ ಯಡ್ರಾಮಿಯಲ್ಲಿ ಉದ್ವಿಗ್ನ ಸ್ಥಿತಿ

71

ಹಿಂದೂ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನೆಡೆಸಿದ ಮುಸ್ಲಿಂ ಖಾಸಗಿ ಶಾಲಾ ಮುಖ್ಯಸ್ಥ,ಹನ್ನೊಂದು ವರ್ಷದ ವಿದ್ಯಾರ್ಥಿನಿ ಮೇಲೆಅತ್ಯಾಚಾರಗೈದ ಘಟನೆ ತಾಲೂಕು ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ನಡೆದಿದ್ದು, ಖಾಸಗಿ ಶಾಲಾ ಮುಖ್ಯಸ್ಥ ಹಾಜಿಮಲಂಗ ಗಣಿಯಾರನನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ಖಂಡಿಸಿ, ಉಘ್ರ ಶಿಕ್ಷೆಗೆ ಆಗ್ರಹಿಸಿ ತಾಲೂಕಿನ ವಿವಿಧ ಸಂಘಟನೆಗಳು ಯಡ್ರಾಮಿ ಬಂದ್ ಮಾಡಿ ಮಂಗಳವಾರ ಬೆಳಗ್ಗೆಯಿಂದಲೇ ಪ್ರತಿಭಟನೆ ಆರಂಭಿಸಿದ್ದು, ಪಟ್ಟಣದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

ಶಾಲೆಯೊಂದರಲ್ಲಿ ಸಂತ್ರಸ್ತ ಮಗು ಕಳೆದ ಎರೆಡು- ಮೂರು ವರ್ಷಗಳಿಂದ ಓದುತ್ತಿದ್ದಾಳೆ. ಸದ್ಯ ಮಗು ಐದನೇ ತರಗತಿ ಓದುತ್ತಿದ್ದು, ಶಾಲೆಯ ಮುಖ್ಯಸ್ಥ ಹಾಜಿಮಲಂಗ ಗಣಿಯಾರ ಕಳೆದ ಎರಡು ದಿನದ ಹಿಂದೆ ಶಾಲೆಯಲ್ಲಿ ಅತ್ಯಾಚಾರಗೈದಿದ್ದಾನೆ.

ಇದಲ್ಲದೆ ವಿಷಯವನ್ನು ಮನೆಯಲ್ಲಿ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ. ಹೀಗಾಗಿ ಮಗು ಮನೆಯಲ್ಲಿ ತಿಳಿಸಲು ಹಿಂಜರಿದಿದೆ.

ನಂತರ ಪಕ್ಕದ ಮನೆಯವರ ಮುಂದೆ ಮಗು ವಿಷಯ ತಿಳಿಸಿದ್ದು, ಅವರು ಮಗುವಿನ ತಂದೆ,ತಾಯಿಗೆ ವಿಷಯ ತಿಳಿಸಿದ್ದಾರೆ. ನಂತರ ಸಂತ್ರಸ್ತ ಮಗುವಿನ ಪಾಲಕರು ತಮ್ಮ ಸಮುದಾಯದ ಎಲ್ಲ ಹಿರಿಯರೊಂದಿಗೆ ಚರ್ಚಿಸಿ ಸೋಮವಾರ ಸಾಯಂಕಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣ ದಾಖಲಾಗುತ್ತಿದ್ದಂತೆ ಪಿಎಸ್ಸೆ ವಿಶ್ವನಾಥ ಮುದರೆಡ್ಡಿ ಹಾಗೂ ಅವರ ತಂಡ ಆರೋಪಿಯನ್ನು ಸೋಮವಾರ ರಾತ್ರಿ ಬಂದಿಸಿದ್ದಾರೆ.

ಈ ವಿಷಯ ತಾಲೂಕಿನಾದ್ಯಂತ ಹರಡಿದ್ದು, ಮಂಗಳವಾರ ಬೆಳಿಗ್ಗೆ ಬಂಜಾರಾ ಸಮುದಾಯ ಸೇರದಂತೆ ಪಟ್ಟಣದ ಎಲ್ಲ ಸಮುದಾಯ ಹಾಗೂ ಎಲ್ಲ ಸಂಘಟನೆಗಳು ಸೇರಿಕೊಂಡು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ, ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.

ಪಟ್ಟಣ ಬಿಗುವಿನಿಂದ ಕೂಡಿದ್ದು, ಮುಂಜಾಗ್ರತೆಗಾಗಿ ಬಿಇಓ ವೀರಣ್ಣ ಬೊಮ್ಮನಳ್ಳಿ ಸ್ಥಳಿಯ ಶಾಲೆಗಳಿಗೆ ರಜೆ ನೀಡಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...

ಜೂನ್ 27 ರಂದು ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ :: ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ಬೆಂಗಳೂರು: ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ ಜೂನ್ 27 ರಂದು...