ಬಸವನಗೌಡ ಯತ್ನಾಳ್ ಹೊರಗಿನವರಲ್ಲ ಅವರ ಅಸಮಾಧಾನ ಪಕ್ಷದ ಆಂತರಿಕ ವಿಷಯ ಒಟ್ಟಿಗೆ ಕುಳಿತು ಬಗೆಹರಿಸಿಕೊಳ್ಳುತೇವೆ ::ಯಡಿಯೂರಪ್ಪ

1

“ಬಿಜಾಪುರ ಶಾಸಕ ಮತ್ತು ಸದಾ ತಮ್ಮನ್ನು ಟೀಕಿಸುವ ಬಸನಗೌಡ ಪಾಟೀಲ್ ಯತ್ನಾಳ್ ಅವರು “ಹೊರಗಿನವರಲ್ಲ” ಎಂದು ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.

ಇಂದು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಿಜೆಪಿಯ ಎಲ್ಲಾ ಆಂತರಿಕ ಸಮಸ್ಯೆಗಳನ್ನು ಚರ್ಚೆಯ ಮೂಲಕ ಇತ್ಯರ್ಥಪಡಿಸುವ ವಿಶ್ವಾಸ ವ್ಯಕ್ತಪಡಿಸಿದರು ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥರಾಗಿರುವ ತಮ್ಮ ಪುತ್ರ ಬಿ ವೈ ವಿಜಯೇಂದ್ರ ಅವರು ಪಕ್ಷವನ್ನು ಬಲಪಡಿಸುವಲ್ಲಿ ನಿಟ್ಟಿನಲ್ಲಿ ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗಬೇಕೆಂದು ಸಲಹೆ ನೀಡಿದರು.

ಯತ್ನಾಳ್ ಅವರು ಹೊರಗಿನವರಲ್ಲ, ಕೆಲವು ಕಾರಣಗಳಿಂದ ಅವರು ಆಕ್ರೋಶಗೊಂಡಿರಬಹುದು. ಮಾತನಾಡೋಣ. ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗಬೇಕು ಎಂಬುದು ನನ್ನ ನಿರೀಕ್ಷೆ. ಇದು ವಿಜಯೇಂದ್ರ ಅವರ ನಿರೀಕ್ಷೆಯೂ ಹೌದು.. ಎಂದು ಮಾಜಿ ಮುಖ್ಯಮಂತ್ರಿ ಒಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಯಾವುದೇ ಲೋಪದೋಷಗಳಿದ್ದರೆ ಎದುರುಬದುರು ಕುಳಿತು ಚರ್ಚಿಸಿ, ಇತ್ಯರ್ಥಪಡಿಸಿ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬೇಕು. ಇದು ನನ್ನ ಅಭಿಪ್ರಾಯ. ಇದಕ್ಕೆ ಎಲ್ಲರೂ ಸಹಕರಿಸುತ್ತಾರೆ ಎಂದು ಆಶಿಸುತ್ತೇನೆ ಎಂದರು.

ಯತ್ನಾಳ್ ಅವರು ತಮ್ಮ ಮತ್ತು ತಮ್ಮ ಕುಟುಂಬದ ವಿರುದ್ಧ ಸಾರ್ವಜನಿಕವಾಗಿ ಹೇಳಿಕೆ ನೀಡುತ್ತಿರುವುದರಿಂದ ಪಕ್ಷಕ್ಕೆ ಹಾನಿಯಾಗುತ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, “ಅವರು ಮಾತನಾಡಲಿ, ಆದರೆ ನಾವು ಎಲ್ಲವನ್ನೂ ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ” ಎಂದು ಹೇಳಿದರು.

ವಿಜಯೇಂದ್ರ ಅವರು ಆಡಳಿತಾರೂಢ ಕಾಂಗ್ರೆಸ್‌ನೊಂದಿಗೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಹಿರಂಗವಾಗಿಯೇ ಟೀಕಿಸಿದ್ದ ಯತ್ನಾಳ್ ಅವರು, ವಿಜಯೇಂದ್ರ ಮತ್ತು ಯಡಿಯೂರಪ್ಪ ಅವರು ಪಕ್ಷವನ್ನು ತಮ್ಮ ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

Leave a comment

Leave a Reply

Your email address will not be published. Required fields are marked *

Related Articles

ಇತಿಹಾಸ ಜ್ಞಾನ ಎಳ್ಳಷ್ಟೂ ಇಲ್ಲದ ಸಚಿವ ಮಹದೇವಪ್ಪ ಇತಿಹಾಸ ತಿಳಿದು ಮಾತನಾಡಲಿ ::ಸಂಸದ ಯದುವೀರ್ ಒಡೆಯರ್

“ಕೃಷ್ಣರಾಜ ಸಾಗರ ಜಲಾಶಯಕ್ಕೆ ಟಿಪ್ಪುಸುಲ್ತಾನ್‌ ಮೊದಲ ಅಡಿಗಲ್ಲು ಹಾಕಿದ್ದರು ಎಂಬ ಸಚಿವ ಮಹದೇವಪ್ಪ ಅವರ ಹೇಳಿಕೆ...

ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಾಗಿ 50 ಕೋಟಿ ಅನುದಾನ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

“ಶಾಸಕರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50...

ರಾಜ್ಯ ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಸಂಚಲನ ಮೂಡಿಸಿದ್ದ ಆರೋಪದ ಆಡಿಯೋ ನನ್ನದೇ, ನನ್ನ ಆರೋಪಕ್ಕೆ ನಾನು ಬದ್ಧ; ಕಾಂಗ್ರೆಸ್‌ ಶಾಸಕ ಬಿ.ಆರ್‌. ಪಾಟೀಲ್‌

ಬೆಂಗಳೂರು: ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಕುರಿತು ಸಚಿವ ಜಮೀರ್‌ ಖಾನ್‌ ಅವರ ಆಪ್ತ ಕಾರ್ಯದರ್ಶಿ ಸರ್ಫ‌ರಾಜ್‌...

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮ :: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ದಾವಣಗೆರೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿದೆ. ಸಮಾಜದಲ್ಲಿ ಪುಟಾಣಿ ಮಕ್ಕಳಿಂದ...