ಪುಷ್ಪ 2 ಸಿನಿಮಾ ನಟ ಅಲ್ಲು ಅರ್ಜುನ್ ವಿರುದ್ಧ ಎಫ್ ಐ ಆರ್ ದಾಖಲಿಸಿದ ಹೈದರಾಬಾದ್ ಪೊಲೀಸ್

54

“ಪುಷ್ಪ 2 ಸಿನಿಮಾ ನಟ ಅಲ್ಲು ಅರ್ಜುನ್ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಹೈದರಾಬಾದ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸಿನಿಮಾದ ಪ್ರೀಮಿಯರ್ ಶೋ ವೇಳೆಯಲ್ಲಿ ಯಾವುದೇ ಮಾಹಿತಿ ನೀಡದೇ ಹೈದರಾಬಾದ್ ನ ಥಿಯೇಟರ್ ಒಂದಕ್ಕೆ ಅಲ್ಲು ಅರ್ಜುನ್ ಭೇಟಿ ನೀಡಿದ್ದರು.

ನೆಚ್ಚಿನ ನಟನನ್ನು ನೋಡಲು ಅಲ್ಲಿ ನೆರೆದಿದ್ದ ಜನರು ಮುಗಿಬಿದ್ದ ಪರಿಣಾಮ ಕಾಲ್ತುಳಿತ ಉಂಟಾಗಿತ್ತು. ಘಟನೆಯಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದರು.


ಥಿಯೇಟರ್ ನಲ್ಲಿ ಸಾವಿಗೀಡಾದ ಮಹಿಳಾ ಕುಟುಂಬಕ್ಕೆ  ನೆರವು ಘೋಷಣೆ ಘಟನೆಯ ಸಂಬಂಧ ಅಲ್ಲು ಅರ್ಜುನ್ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಹೈದರಾಬಾದ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನಟ ಅಲ್ಲು ಅರ್ಜುನ್ ಅಷ್ಟೇ ಅಲ್ಲದೇ ಹೆಚ್ಚುವರಿ ಭದ್ರತೆಗೆ ವ್ಯವಸ್ಥೆ ಮಾಡದ, ಜನದಟ್ಟನೆ ನಿರ್ವಹಣೆಗೆ ಕ್ರಮ ಕೈಗೊಳ್ಳದ ಸಂಧ್ಯಾ ಥಿಯೇಟರ್ ನ ಆಡಳಿತ ಮಂಡಳಿಯ ವಿರುದ್ಧವೂ ಪ್ರಕರಣ ದಾಖಲಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ಹೇಳಿಕೆ ನೀಡಿದ್ದು, “ಥಿಯೇಟರ್‌ಗೆ ಭೇಟಿ ನೀಡುವ ಕುರಿತು ಥಿಯೇಟರ್ ಆಡಳಿತ ಅಥವಾ ನಟರ ತಂಡದಿಂದ ಯಾವುದೇ ಸೂಚನೆ ಬಂದಿಲ್ಲ” ಎಂದು ತಿಳಿಸಿದ್ದಾರೆ.

ಥಿಯೇಟರ್ ಆಡಳಿತಕ್ಕೆ ಅವರ ಆಗಮನದ ಬಗ್ಗೆ ತಿಳಿದಿದ್ದರೂ ಸಹ ನಟ ಮತ್ತು ಅವರ ತಂಡಕ್ಕೆ ಪ್ರತ್ಯೇಕ ಪ್ರವೇಶ ಅಥವಾ ನಿರ್ಗಮನವಿಲ್ಲ ಎಂದು ಉನ್ನತ ಪೋಲೀಸ್ ಹೇಳಿದರು.

Leave a comment

Leave a Reply

Your email address will not be published. Required fields are marked *

Related Articles

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ ಕೇಂದ್ರ ಸರಕಾರ

“ನವದೆಹಲಿ: ಕೇಂದ್ರ ಸರ್ಕಾರ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸದ್ಯ...

ಕಾಶಿ ಗಂಜ್ ಶಹೀದಾ ಮಸೀದಿ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ ರೈಲ್ವೇ ಇಲಾಖೆ

ವಾರಣಾಸಿ: ವಾರಣಾಸಿಯ ಕಾಶಿ ರೈಲು ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಗಂಜ್ ಶಹೀದಾ ಮಸೀದಿಯನ್ನು ತೆರವುಗೊಳಿಸುವಂತೆ...

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ

“ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್...

ವಿಭಜನೆಯತ್ತ ತೃಣಮೂಲ ಕಾಂಗ್ರೆಸ್  ಬಂಡಾಯ ಸಂಸದರ ಸಂಖ್ಯೆ 20ರ ಮ್ಯಾಜಿಕ್

“ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಬಹುಕಾಲದಿಂದ ನಡೆಯುತ್ತಿದ್ದ ಅಂತರ್ಯುದ್ಧ ಈಗ ನಿಜವಾಗಿದೆ. ತೃಣಮೂಲ ಕಾಂಗ್ರೆಸ್  ಸ್ಥಾಪಕಿ ಮಮತಾ...