ರಾಜ್ಯದಲ್ಲಿ ಕಳೆದ ಏಪ್ರಿಲ್ ನಿಂದ 327 ಬಾಣಂತಿಯರ ಸಾವು ಬಳ್ಳಾರಿ ಬಿಮ್ಸ್ ನಲ್ಲಿ ಮೃತಪಟ್ಟ ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸರಕಾರ

3

ರಾಜ್ಯ ಬಿಮ್ಸ್ ನಲ್ಲಿ ಬಾಣಂತಿಯರ ಸಾವು ಪ್ರಕರಣ: ಸರ್ಕಾರದಿಂದ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ


ಬಳ್ಳಾರಿ ಬಿಮ್ಸ್ ನಲ್ಲಿ ಐವರು ಬಾಣಂತಿಯರು ಮೃತಪಟ್ಟಿರುವ ಘಟನೆ ದುರದೃಷ್ಟಕರ. ಮೃತ ಬಾಣಂತಿಯರೆಲ್ಲರೂ ಬಡ ಕುಟುಂಬದವರು. ಹೀಗಾಗಿ, ಮೃತ ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡುತ್ತೇವೆ ಎಂದು ಹೇಳಿದರು. ಆಸ್ಪತ್ರೆಗೆ ಇಂದು ಭೇಟಿ ನೀಡಿ ಬಾಣಂತಿಯರ ಆರೋಗ್ಯ ವಿಚಾರಿಸಿದ ಸಚಿವ ದಿನೇಶ್ ಗುಂಡೂರಾವ್

ಬಳ್ಳಾರಿ ಜಿಲ್ಲಾಸ್ಪತ್ರೆ (ಬಿಮ್ಸ್ ನಲ್ಲಿ ಮೃತಪಟ್ಟ ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಭಾನುವಾರ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ನಡೆದ ಅಭಿನಂದನಾ ಸಮಾವೇಶದಲ್ಲಿ ಮಾತನಾಡಿ, ಈಗಾಗಲೇ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಆಗಿದೆ. ಇನ್ನೂ 3 ಲಕ್ಷ ರೂಪಾಯಿ ನೀಡಲಾಗುವುದು ಎಂದು ಹೇಳಿದರು

. ಬಳ್ಳಾರಿ ಬಿಮ್ಸ್ ನಲ್ಲಿ ಐವರು ಬಾಣಂತಿಯರು ಮೃತಪಟ್ಟಿರುವ ಘಟನೆ ದುರದೃಷ್ಟಕರ. ಮೃತ ಬಾಣಂತಿಯರೆಲ್ಲರೂ ಬಡ ಕುಟುಂಬದವರು. ಹೀಗಾಗಿ, ಮೃತ ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡುತ್ತೇವೆ ಎಂದು ಹೇಳಿದರು.

ನಡೆದ ಘಟನೆಯೇನು? ಹೆರಿಗೆಗೆಂದು ಬಿಮ್ಸ್ಗೆ ದಾಖಲಾಗಿದ್ದ ಒಂಬತ್ತು ಮಂದಿ ಗರ್ಭಿಣಿಯರಾದ ನಂದಿನಿ, ಲಲಿತಮ್ಮ, ಸುಮಯಾ, ರೋಜಾ, ಮುಸ್ಕಾನ್, ಅಮೃತಾ, ಮಹಾಲಕ್ಷ್ಮೀ, ರಾಜೇಶ್ವರಿ, ಸುಮಲತಾ ಎಂಬುವರಿಗೆ ನವೆಂಬರ್ 9ರಂದು ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ಇವರಲ್ಲಿ ನಂದಿನಿ, ಲಲಿತಮ್ಮ, ರೋಜಾ, ಮುಸ್ಕಾನ್ ಹಾಗೂ ಸುಮಯಾ ಮೃತಪಟ್ಟಿದ್ದಾರೆ.

ಇನ್ನುಳಿದ ನಾಲ್ವರು ಬಾಣಂತಿಯರು ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ. ಹೆರಿಗೆ ಬಳಿಕ ಬಾಣಂತಿಯರಿಗೆ ಐವಿ ದ್ರಾವಣ ನೀಡಲಾಗಿತ್ತು. ಈ ದ್ರಾವಣ ಹಾಕಿ ಎರಡೇ ಗಂಟೆಯಲ್ಲಿ ಬಾಣಂತಿಯರು ಅಸ್ವಸ್ಥಗೊಂಡಿದ್ದಾರೆ. ಇವರಲ್ಲಿ ಏಳು ಮಂದಿ ಬಾಣಂತಿಯರು ಕಿಡ್ನಿ ಮತ್ತು ಬಹು ಅಂಗಾಂಗ ವೈಫಲ್ಯತೆಯಿಂದ ಬಳಲುತ್ತಿದ್ದರು.

ಕೂಡಲೇ ಇವರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಮ್ಸ್ನಲ್ಲಿ ಪರೀಕ್ಷಿಸಿದಾಗ ಏಳು ಮಂದಿ ಬಾಣಂತಿಯರ ಪೈಕಿ ಮೂವರಲ್ಲಿ ಇಲಿ ಜ್ವರ ಪತ್ತೆಯಾಗಿತ್ತು. ಔಷಧಿ ತಯಾರಿಸಿದ ಕಂಪನಿ ಮೇಲೆ ಕ್ರಮ: ಸಚಿವ ದಿನೇಶ್ ಗುಂಡೂರಾವ್ ಪ್ರಕರಣ ಸಂಬಂಧ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಆಸ್ಪತ್ರೆಯಲ್ಲಿ ಆದ ನ್ಯೂನತೆಗಳ ಬಗ್ಗೆ ತನಿಖೆ ನಡೆಸುತ್ತೇವೆ.

ನಮಗೆ ಗೊತ್ತಾಗದೇ ಇನ್ನೆಷ್ಟು ಬಾಣಂತಿಯರು ಮೃತಪಟ್ಟಿದ್ದಾರೆ ಗೊತ್ತಿಲ್ಲ. ಔಷಧಿ ತಯಾರಿಸಿದ ಕಂಪನಿ ಮೇಲೆ ಕ್ರಮ ಕೈಗೊಳ್ಳುತ್ತಿದ್ದೇವೆ. ಮೃತ ಬಾಣಂತಿಯರ ಕುಟುಂಬಸ್ಥರಿಗೆ ಪರಿಹಾರ ಘೋಷಿಸಿದ್ದೇವೆ. ಇನ್ನು ಮುಂದೆ ಇಂತಹ ಘಟನೆಗಳು ಆಗದಂತೆ ಎಚ್ಚರಿಕೆ ವಹಿಸುತ್ತೇವೆ ಎಂದರು.

ಇಂದು ಆಸ್ಪತ್ರೆಗೆ ಭೇಟಿ ನೀಡಿ ಹೆರಿಗೆಯಾದ ಬಾಣಂತಿಯರ ಆರೋಗ್ಯ ಮತ್ತು ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಚಿಕಿತ್ಸೆ ಬಗ್ಗೆ ಪರಿಶೀಲನೆ ನಡೆಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಐವಿ ದ್ರಾವಣ ನೀಡಿದ್ದರಲ್ಲಿ ವ್ಯತ್ಯಾಸವಾಗಿ ಜ್ವರ ಬಂದು ಈ ರೀತಿ ಪ್ರಾಣ ಹೋಗುವ ಪರಿಸ್ಥಿತಿ ಬಂದಿದೆ ಎಂದು ರಾಜೀವ್ ಗಾಂಧಿ ವಿವಿಗೆ ಕಳುಹಿಸಿದ ವರದಿಯಿಂದ ತಿಳಿದುಬಂದಿದೆ.

ಇದೇ ರೀತಿ ಕಳೆದ ಮಾರ್ಚ್ ತಿಂಗಳಲ್ಲಿ ಮಾಹಿತಿ ಬಂದಾಗ ಇಡೀ ರಾಜ್ಯದಲ್ಲಿ ಐವಿ ದ್ರಾವಣ ನೀಡುವ ಪ್ರಕ್ರಿಯೆಯನ್ನು ನಿಲ್ಲಿಸಿದ್ದೆ ಎಂದರು. 327 ಬಾಣಂತಿಯರ ಸಾವು ರಾಜ್ಯದಲ್ಲಿ ಕಳೆದ ಏಪ್ರಿಲ್ ತಿಂಗಳಿನಿಂದ ಇಲ್ಲಿಯವರೆಗೆ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ 327 ಬಾಣಂತಿಯರ ಸಾವು ಸಂಭವಿಸಿದ್ದು, ಪ್ರತಿಯೊಂದು ಕೂಡ ತಪಾಸಣೆ ಮಾಡಲಿದ್ದೇವೆ.

ಲೆಕ್ಕಪರಿಶೋಧನೆ ವರದಿ ಸಲ್ಲಿಸಲು ಹೇಳಿದ್ದೇವೆ. ಉನ್ನತ ತಜ್ಞರನ್ನು ಕರೆಸಿ ಮತ್ತೊಮ್ಮೆ ತಪಾಸಣೆ ಮಾಡಲು ಹೇಳಿದ್ದೇವೆ. ಏಕೆಂದರೆ ಕೋರ್ಟ್ ಗಳಲ್ಲಿ ಕಾನೂನು ಹೋರಾಟ ಮಾಡಬೇಕಾಗಿದೆ. ಸರಿಯಾದ ಸಾಕ್ಷಿ ಸಂಗ್ರಹಿಸಬೇಕಾಗಿದೆ ಎಂದರು.

Leave a comment

Leave a Reply

Your email address will not be published. Required fields are marked *

Related Articles

ಧರ್ಮಸ್ಥಳ ಪ್ರಕರಣ: ಮೃತದೇಹಗಳ ಅಸ್ತಿಪಂಜರ ಪತ್ತೆ ಕಾರ್ಯಾಚರಣೆಗೆ ಜಿಪಿಆರ್ ಬಳಕೆಗೆ ಆಗ್ರಹ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳ ಪತ್ತೆಗೆ ಜಿಪಿಆರ್ ಬಳಕೆ ಮಾಡುವಂತೆ ಒತ್ತಾಯ ಕೇಳಿಬರುತ್ತಿದೆ....

ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ  ಜೈಲು ಶಿಕ್ಷೆ

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ...

ಧರ್ಮಸ್ಥಳ ಅಪರಿಚಿತ ಸಾವಿನ ಪ್ರಕರಣದ ಯುಡಿಆರ್ ಮಾಹಿತಿ ಡಿಲೀಟ್ ಬೆಳ್ತಂಗಡಿ ಪೊಲೀಸರ ಮೇಲೆ ಸಂಶಯದ ನೆರಳು

“ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ...

ಎಮ್ಮೆ ಕಟ್ಟುತ್ತಿದ್ದ ಶೆಡ್ ದ್ವಂಸ ರೊಚ್ಚಿಗೆದ್ದ ರೈತ ದಂಪತಿ; ಕಾಂಗ್ರೆಸ್ ಶಾಸಕರ ಕಚೇರಿಯಲ್ಲಿ ಎಮ್ಮೆ ಕಟ್ಟಿಹಾಕಿ ಆಕ್ರೋಶ

ತೆಲಂಗಾಣ: ಜಾನುವಾರಗಳ ಶೆಡ್ ಧ್ವಂಸಕ್ಕೆ ಶಾಸಕರೇ ಕಾರಣ ಎಂದು ಆರೋಪಿಸಿದ ರೈತ ದಂಪತಿ, ಕಾಂಗ್ರೆಸ್ ಶಾಸಕ...