thekarnatakatoday.com
Politics

ವಕ್ಫ್ ವಿವಾದ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿಪಕ್ಷ ನಾಯಕ ಆರ್. ಅಶೋಕರಿಂದ ಸ್ಪೀಕರ್ ಗೆ ಮನವಿ

ಪ್ರಶ್ನೋತ್ತರ ಅವಧಿ ಬದಲಿಗೆ ನಿಲುವಳಿ ಸೂಚನೆಯಡಿ ಕೂಡಲೇ ವಕ್ಫ್ ವಿವಾದ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿಪಕ್ಷ ನಾಯಕ ಆರ್. ಅಶೋಕ್ ಸ್ಪೀಕರ್ ಬಳಿ ಮನವಿ ಮಾಡಿದರು.


ಕುಂದಾನಗರಿ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಇಂದು ವಕ್ಪ್ ವಿವಾದ ವಿಧಾನಸಭೆಯಲ್ಲಿ ಪ್ರತಿಧ್ವನಿಸಿ, ಪ್ರತಿಪಕ್ಷ ಬಿಜೆಪಿ ಹಾಗೂ ಆಡಳಿತಾರೂಢ ಕಾಂಗ್ರೆಸ್ ಸದಸ್ಯರ ನಡುವೆ ಮಾತಿನ ಚಕಮಕಿ, ವಾಗ್ಯುದ್ದಕ್ಕೆ ಕಾರಣವಾಯಿತು

. ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರಶ್ನೋತ್ತರ ಅವಧಿ ಬದಿಗೊತ್ತಿ, ವಕ್ಫ್ ವಿವಾದ ಕುರಿತು ನಿಲುವಳಿ ಸೂಚನೆಯಡಿ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಬಿಜೆಪಿ ಒತ್ತಾಯಿಸಿತು

. ಆದಾಗ್ಯೂ, ಇದಕ್ಕೆ ಅವಕಾಶ ನೀಡದ ಸ್ಪೀಕರ್ ಯು. ಟಿ.ಖಾದರ್ ನಿಯಮ ಪ್ರಕಾರವೇ ಕಲಾಪ ನಡೆಯಲು ಅವಕಾಶ ನೀಡುವಂತೆ ಪ್ರತಿಪಕ್ಷದ ಸದಸ್ಯರಿಗೆ ಹೇಳಿದರು.

ಪ್ರಶ್ನೋತ್ತರ ಅವಧಿ ಬದಲಿಗೆ ನಿಲುವಳಿ ಸೂಚನೆಯಡಿ ಕೂಡಲೇ ವಕ್ಫ್ ವಿವಾದ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿಪಕ್ಷ ನಾಯಕ ಆರ್. ಅಶೋಕ್ ಸ್ಪೀಕರ್ ಬಳಿ ಮನವಿ ಮಾಡಿದರು.

ಅಶೋಕ್ ಜೊತೆಗೂಡಿದ ವಿಧಾನಸಭೆ ಉಪ ಪ್ರತಿಪಕ್ಷ ನಾಯಕ ಅರವಿಂದ್ ಬೆಲ್ಲದ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸುನೀಲ್ ಕುಮಾರ್ ವಕ್ಫ್ ವಿವಾದ ಕುರಿತು ಚರ್ಚಿಸಲು ಪ್ರಶ್ನೋತ್ತರ ಅವಧಿ ಬದಿಗೊತ್ತುವಂತೆ ಸಭಾಧ್ಯಕ್ಷರನ್ನು ಒತ್ತಾಯಿಸಿದರು.

ಈ ಮಧ್ಯೆ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದ ಪ್ರತಿಪಕ್ಷ ಶಾಸಕರ ನಡುವೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಟೀಕಿಸಿದರು. ಪ್ರತಿಪಕ್ಷಗಳು ಪ್ರಸ್ತಾಪಿಸುವ ವಿಚಾರಗಳ ಚರ್ಚೆಗೆ ಸರ್ಕಾರ ಸಿದ್ಧವಿದ್ದು, ಸದನದ ನಿಯಮಗಳನ್ನು ಗೌರವಿಸಬೇಕು ಎಂದು ಸ್ಪೀಕರ್ ಮನವಿ ಮಾಡಿದರು


. ಇದರ ಹೊರತಾಗಿಯೂ ತಮ್ಮ ನಿಲುವುಗಳಿಗೆ ಅಂಟಿಕೊಂಡ ಪ್ರತಿಪಕ್ಷ ನಾಯಕರು, ಪದೇ ಪದೇ ನಿಲುವಳಿ ಸೂಚನೆ ಮಂಡನೆಗೆ ಅವಕಾಶ ನೀಡುವಂತೆ ಒತ್ತಾಯಿಸಿದರು.

ಈ ಪರಿಸ್ಥಿತಿ ನಡುವೆ ಬಿಜೆಪಿ ಮತ್ತು ಆರ್ ಎಸ್ಎಸ್ ಬಸವಣ್ಣ ವಿರೋಧಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ್ ನೀಡಿದ ಹೇಳಿಕೆ ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ಶಾಸಕರ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು.

ಈ ಗದ್ದಲದ ನಡುವೆಯೇ ಖಾದರ್ ಎರಡೂ ಕಡೆಯ ಸದಸ್ಯರನ್ನು ಸಮಾಧಾನಪಡಿಸುವಲ್ಲಿ ಯಶಸ್ವಿಯಾದರು.


ಶಾಸಕಾಂಗ ನಿಯಮಗಳ ಪ್ರಕಾರ ಸದನ ಕಾರ್ಯ ನಿರ್ವಹಿಸಲಿದ್ದು, ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿದ ನಂತರ ಮುಂದೂಡಿಕೆ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಘೋಷಿಸಿದರು

Related posts

ಪೊಲೀಸ್ ಕಸ್ಟಡಿಯಲ್ಲಿ  ಸಿಟಿ ರವಿ ತಲೆಗೆ ಗಾಯ ನನಗೆ ತೊಂದರೆ ಆದರೆ ಪೊಲೀಸ್ ಇಲಾಖೆ ಮತ್ತು ಕಾಂಗ್ರೆಸ್ ಸರಕಾರವೇ ಕಾರಣ

The Karnataka Today

ಕಾಂಗ್ರೆಸ್ ನಾಯಕರು ಮತ್ತು ಮುಸ್ಲಿಂರನ್ನು ರಸ್ತೆಯಲ್ಲಿ ಹುಡುಕಿ ಕೊಲ್ಲುವ ಕಾಲ ಬರುತ್ತದೆ ಈಶ್ವರಪ್ಪ ಹೇಳಿಕೆ ಸುಮೋಟೋ ಕೇಸ್ ದಾಖಲು

The Karnataka Today

ಅಮಿತ್ ಶಾ ಅವರಿಗೆ ಹುಚ್ಚು ನಾಯಿ ಕಚ್ಚಿದೆ ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

The Karnataka Today

Leave a Comment