ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ ನಾಳೆ ರಾಜ್ಯಾದ್ಯಂತ ಸರಕಾರಿ ರಜೆ ಘೋಷಣೆ

3

” ರಾಜ್ಯ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ 3 ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದ್ದು,

ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ

  ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ (92) ಅವರು ಇಂದು ವಿಧಿವಶರಾಗಿದ್ದಾರೆ.

ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುತ್ತಿದ್ದು, ಅಂತಿಮ ವಿಧಿವಿಧಾನಗಳನ್ನು ಕೃಷ್ಣ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ನೆರವೇರಿಸಲಾಗುತ್ತಿದೆ.


ನಾಳೆ ಬೆಳಗ್ಗೆಯೇ ಬೆಂಗಳೂರಿನಿಂದ ಪಾರ್ಥಿವ ಶರೀರವನ್ನು ಸೋಮನಹಳ್ಳಿಗೆ ಸ್ಥಳಾಂತರಿಸಲಾಗುತ್ತಿದ್ದು. ಬಳಿಕ ಶಾಲೆಯಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಟ್ಟು, ಮಧ್ಯಾಹ್ನದ ನಂತರ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ

Leave a comment

Leave a Reply

Your email address will not be published. Required fields are marked *

Related Articles

ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ಅಂತಿಮ ಸೋಮವಾರ ಘೋಷಣೆ ಸಾಧ್ಯತೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ...

ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಬೆಂಗಾವಲು ವಾಹನ ಅಪಘಾತ ನಾಲ್ವರಿಗೆ ಗಾಯ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಮೈಸೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ ಮುಗಿಸಿ ವಾಪಸ್‌...

ರಾಜ್ಯದಲ್ಲಿ ‘ಪರಮಾಣು ವಿದ್ಯುತ್ ಸ್ಥಾವರ’ ಸ್ಥಾಪನೆಗೆ ತಾತ್ವಿಕ ಒಪ್ಪಿಗೆ   :: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್

ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರವನ್ನು ಸ್ಥಾಪಿಸಲು ತಾತ್ವಿಕ ಅನುಮೋದನೆ ಸಿಕ್ಕಿದೆ. ಜೊತೆಗೆ ರಾಷ್ಟ್ರೀಯ ಉಷ್ಣ ವಿದ್ಯುತ್...