ಡಿಸೆಂಬರ್ 14ರೊಳಗೆ ಮಹಾರಾಷ್ಟ್ರ ಸಂಪುಟ ವಿಸ್ತರಣೆ; ಸಿಎಂ ಫಡ್ನವಿಸ್ ರಿಂದ ಪ್ರಧಾನಿ ಮೋದಿ ಭೇಟಿ
ಶಿವಸೇನಾ ನಾಯಕ ಮತ್ತು ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ರಾಷ್ಟ್ರ ರಾಜಧಾನಿಗೆ ಪ್ರಯಾಣಿಸುತ್ತಿಲ್ಲ ಎಂದು ಅವರ ಕಚೇರಿ ತಿಳಿಸಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪ ಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಹಾಗೂ ಅಜಿತ್ ಪವಾರ್
ದೇವೇಂದ್ರ ಫಡ್ನವೀಸ್ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಸಂಪುಟ ವಿಸ್ತರಣೆ ಡಿಸೆಂಬರ್ 14 ರೊಳಗೆ ನಡೆಯಲಿದೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಬುಧವಾರ ಹೇಳಿದ್ದಾರೆ.
ಫಡ್ನವಿಸ್ ಅವರು ಬುಧವಾರ ದೆಹಲಿಗೆ ತೆರಳಿದ್ದು, ಇದು ಸೌಜನ್ಯದ ಭೇಟಿಯಾಗಿದೆ. ಫಡ್ನವಿಸ್ ಅವರು ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪಾಧ್ಯಕ್ಷ ಜಗದೀಪ್ ಧಂಖರ್ ಅವರನ್ನು ಭೇಟಿಯಾಗಲಿದ್ದಾರೆ ಎಂದು ಸಿಎಂ ಕಚೇರಿ ತಿಳಿಸಿದೆ.
ಶಿವಸೇನಾ ನಾಯಕ ಮತ್ತು ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ರಾಷ್ಟ್ರ ರಾಜಧಾನಿಗೆ ಪ್ರಯಾಣಿಸುತ್ತಿಲ್ಲ ಎಂದು ಅವರ ಕಚೇರಿ ತಿಳಿಸಿದೆ. ಪಿಟಿಐ ಜೊತೆ ಮಾತನಾಡಿದ ಬಿಜೆಪಿ ನಾಯಕರೊಬ್ಬರು, ಶಿವಸೇನೆಗೆ ಗೃಹ ಖಾತೆ ಸಿಗುವುದಿಲ್ಲ ಮತ್ತು ಕಂದಾಯ ಖಾತೆಯನ್ನು ಹಂಚಿಕೆ ಮಾಡುವ ಸಾಧ್ಯತೆಯೂ ಇಲ್ಲ ಎಂದು ಹೇಳಿದ್ದಾರೆ.
ಮೂರು ಪಕ್ಷಗಳು(ಮಹಾಯುತಿ ಮಿತ್ರಪಕ್ಷಗಳಾದ ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ) ಸರ್ಕಾರದಲ್ಲಿ ಭಾಗಿಯಾಗಿರುವುದರಿಂದ ಮಾತುಕತೆ ವಿಳಂಬವಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
“ಡಿಸೆಂಬರ್ 14 ರೊಳಗೆ ಸಚಿವ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಶಿವಸೇನೆಗೆ ಗೃಹ ಇಲಾಖೆ ಹಂಚಿಕೆ ಮಾಡುವ ಸಾಧ್ಯತೆ ಇಲ್ಲ. ಆದರೆ ಶಿವಸೇನೆಗೆ ನಗರಾಭಿವೃದ್ಧಿ ಸಿಗಬಹುದು” ಎಂದು ಹೆಸರು ಹೇಳಲು ಇಚ್ಛಿಸದ ನಾಯಕರೊಬ್ಬರು ಹೇಳಿದ್ದಾರೆ.
5೫ಬಿಜೆಪಿಯು ಸಿಎಂ ಸ್ಥಾನ ಸೇರಿದಂತೆ 21ರಿಂದ22 ಸ್ಥಾನ ಸಚಿವಸಂಪುಟದಲ್ಲಿ ಉಳಿಸಿಕೊಳ್ಳುವ ನಿರೀಕ್ಷೆಯಿದೆ. ನಾಲ್ಕರಿಂದ ಐದು ಸಚಿವ ಸ್ಥಾನ ಗಳನ್ನ ಖಾಲಿ ಉಳಿಸಿಕೊಳ್ಳ ಬಹುದು ಅವರು ತಿಳಿಸಿದ್ದಾರೆ.