thekarnatakatoday.com
National

ಕೇಂದ್ರ ಸಚಿವ ಸಂಪುಟದಲ್ಲಿ ಮತ್ತೊಂದು ಬಹು ಮುಖ್ಯ ಮಸೂದೆ ಗೆ ಅನುಮೋದನೆ  ಒಂದು ದೇಶ, ಒಂದು ಚುನಾವಣೆ ಮಸೂದೆ

‘ಒಂದು ದೇಶ, ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.

ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಒಪ್ಪಿಗೆ ನೀಡಿದೆ.

ಪ್ರಸ್ತುತ ನಡೆಯುತ್ತಿರುವ ಸಂಸತ್ ಚಳಿಗಾಲದ ಅಧಿವೇಶನದಲ್ಲೇ ಕೇಂದ್ರ ಸರ್ಕಾರ ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಇದರ ಉದ್ದೇಶವಾಗಿದೆ.

ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ವರದಿ ಸಲ್ಲಿಸಲು ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿತ್ತು.

ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಂಗೀಕರಿಸಿದ ವಾರಗಳ ನಂತರ ಈ ಬೆಳವಣಿಗೆ ನಡೆದಿದೆ.

ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಹಂತಹಂತವಾಗಿ ಏಕಕಾಲಕ್ಕೆ ಚುನಾವಣೆ ನಡೆಸುವಂತೆ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಶಿಫಾರಸು ಮಾಡಿದೆ.

Related posts

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು

The Karnataka Today

ತ್ರಿವಳಿ ತಲಾಖ್ ನೀಡುವಂತಿಲ್ಲ ನಾಲ್ಕು ಪತ್ನಿ ಹೊಂದುವಂತಿಲ್ಲ   ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರ ಹೇಳಿಕೆ ನ್ಯಾಯಾಧೀಶರ ಪದಚ್ಯುತಿಗೆ 36 ಸಂಸದರ ಸಹಿ

The Karnataka Today

ಬಾಂಗ್ಲಾದೇಶ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ವಿರೋಧಿಸಿ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ

The Karnataka Today

Leave a Comment