ದೆಹಲಿ ಅತಿಶಿ ಸರಕಾರದಿಂದ ಮಹಿಳಾ ಸಮ್ಮಾನ್ ಯೋಜನೆ ಜಾರಿಗೆ ಮಹಿಳೆಯರ ಖಾತೆಗೆ 1000 ರೂಪಾಯಿ ನೀಡಲು ಸಚಿವ ಸಂಪುಟ ಅನುಮೋದನೆ

1
ದೆಹಲಿಯಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿ: ಪ್ರತಿ ತಿಂಗಳು ಮಹಿಳೆಯರ ಖಾತೆಗೆ 1000 ರೂ.: ಚುನಾವಣೆ ಬಳಿಕ 2100 ರೂಪಾಯಿಗೆ ಏರಿಕೆ

2025ರ ದೆಹಲಿ ವಿಧಾನಸಭೆ ಚುನಾವಣೆಗೂ ಮೊದಲು ದೆಹಲಿ ಮುಖ್ಯಮಂತ್ರಿ ಅತಿಶಿ ಸರ್ಕಾರವು ಸಚಿವ ಸಂಪುಟ ಸಭೆಯ ನಂತರ ಅರವಿಂದ್ ಕೇಜ್ರಿವಾಲ್ ಅವರ ಗ್ಯಾರಂಟಿಯನ್ನು ಈಡೇರಿಸುವತ್ತ ಒಂದು ಹೆಜ್ಜೆ ಮುಂದಿಟ್ಟಿದೆ.


: 2025ರ ದೆಹಲಿ ವಿಧಾನಸಭೆ ಚುನಾವಣೆಗೂ ಮೊದಲು ದೆಹಲಿ ಮುಖ್ಯಮಂತ್ರಿ ಅತಿಶಿ ಸರ್ಕಾರವು ಸಚಿವ ಸಂಪುಟ ಸಭೆಯ ನಂತರ ಅರವಿಂದ್ ಕೇಜ್ರಿವಾಲ್ ಅವರ ಗ್ಯಾರಂಟಿಯನ್ನು ಈಡೇರಿಸುವತ್ತ ಒಂದು ಹೆಜ್ಜೆ ಮುಂದಿಟ್ಟಿದೆ.

ದೆಹಲಿ ಕ್ಯಾಬಿನೆಟ್ ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆಗೆ ಅನುಮೋದನೆ ನೀಡಿದ್ದು ಅದರಂತೆ ದೆಹಲಿಯ ಮಹಿಳೆಯರು ಪ್ರತಿ ತಿಂಗಳು 1000 ರೂಪಾಯಿ ಪಡೆಯಲಿದ್ದಾರೆ.

ದೆಹಲಿ ಸಚಿವ ಸಂಪುಟದಿಂದ ಈ ಯೋಜನೆಗೆ ಅನುಮೋದನೆ ಪಡೆದ ನಂತರ, ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಸಿಎಂ ಅತಿಶಿ ಮತ್ತು ಪಕ್ಷದ ಹಿರಿಯ ನಾಯಕರೊಂದಿಗೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು

ಇಂದು ನಾನು ದೆಹಲಿಯ ಜನರಿಗೆ ಎರಡು ದೊಡ್ಡ ಘೋಷಣೆಗಳನ್ನು ಮಾಡಲು ಬಂದಿದ್ದೇನೆ ಎಂದು ಹೇಳಿದರು. ಎರಡೂ ಘೋಷಣೆಗಳು ಮಹಿಳೆಯರಿಗೆ. ಪ್ರತಿ ಮಹಿಳೆಗೆ 1000 ರೂ ನೀಡುವುದಾಗಿ ಭರವಸೆ ನೀಡಿದ್ದೆ.

ಇಂದು ಬೆಳಗ್ಗೆ ಅತಿಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾವನೆಯನ್ನು ಅಂಗೀಕರಿಸಲಾಯಿತು. ಈಗ ಈ ಯೋಜನೆ ದೆಹಲಿಯಲ್ಲಿ ಜಾರಿಯಾಗಿದೆ ಎಂದರು.

ಮಹಿಳಾ ಸಮ್ಮಾನ್ ಯೋಜನೆಗೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರು ಮುಂದಿನ 10-15 ದಿನಗಳಲ್ಲಿ ಚುನಾವಣೆ ದಿನಾಂಕ ಘೋಷಿಸಲಾಗುತ್ತದೆ. ಆದ್ದರಿಂದ ಖಾತೆಗೆ ಹಣವನ್ನು ವರ್ಗಾಯಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಹಣದುಬ್ಬರದಿಂದಾಗಿ 1000 ರೂಪಾಯಿ ಸಾಕಾಗುವುದಿಲ್ಲ ಎಂದು ಕೆಲವು ಮಹಿಳೆಯರು ಹೇಳಿದ್ದಾರೆ. ಹೀಗಾಗಿ ನಾಳೆಯಿಂದ ನೋಂದಣಿ ಆರಂಭವಾಗಲಿದೆ.

ದೆಹಲಿ ವಿಧಾನಸಭಾ ಚುನಾವಣೆಯ ನಂತರ ಪಕ್ಷವು ಸರ್ಕಾರ ರಚಿಸಿದರೆ, ದೆಹಲಿ ಸರ್ಕಾರವು ಮಹಿಳೆಯರಿಗೆ ನೀಡುವ 1000 ರೂ.ಗಳನ್ನು ತಿಂಗಳಿಗೆ 2100 ರೂ.ಗೆ ಹೆಚ್ಚಿಸಲಿದೆ ಎಂದು ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

ದೆಹಲಿ ಸರ್ಕಾರದ ಅನುಮೋದನೆಯ ನಂತರ, ಈಗ ಈ ಯೋಜನೆಗೆ ಲೆಫ್ಟಿನೆಂಟ್ ಗವರ್ನರ್ ಅವರ ಅನುಮೋದನೆಯ ಅಗತ್ಯವಿರುತ್ತದೆ. ಅದರ ನಂತರವೇ ಅದನ್ನು ಕಾರ್ಯಗತಗೊಳಿಸಬಹುದು.

ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ದೆಹಲಿ ಸರ್ಕಾರದ ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆ ಅಡಿಯಲ್ಲಿ, 18 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆಯುತ್ತಾರೆ.

ಈ ಯೋಜನೆಗಾಗಿ ದೆಹಲಿ ಸರ್ಕಾರವು ಹಣಕಾಸು ವರ್ಷಕ್ಕೆ 2000 ಕೋಟಿ ರೂಪಾಯಿಗಳ ಬಜೆಟ್ ಅನ್ನು ನಿಗದಿಪಡಿಸಿದೆ.

ದೆಹಲಿ ಸರ್ಕಾರದ ಈ ಯೋಜನೆಯ ಪ್ರಯೋಜನವು ಸರ್ಕಾರಿ ನೌಕರರಲ್ಲದ ಅಥವಾ ಆದಾಯ ತೆರಿಗೆ ಸ್ಲ್ಯಾಬ್‌ನಲ್ಲಿರುವ ಮಹಿಳೆಯರಿಗೆ ಲಭ್ಯವಿರುತ್ತದೆ.

ಇದಲ್ಲದೇ ಬೇರೆ ಯಾವುದೇ ಪಿಂಚಣಿ ಪಡೆಯದವರಿಗೂ ಈ ಹಣವನ್ನು ನೀಡಲಾಗುವುದು. ಮಹಿಳೆಯರು ಆಧಾರ್ ಕಾರ್ಡ್‌ನಿಂದ ಬ್ಯಾಂಕ್ ಖಾತೆಗೆ ಮಾಹಿತಿ ನೀಡಬೇಕು.

Leave a comment

Leave a Reply

Your email address will not be published. Required fields are marked *

Related Articles

ಇತಿಹಾಸ ಜ್ಞಾನ ಎಳ್ಳಷ್ಟೂ ಇಲ್ಲದ ಸಚಿವ ಮಹದೇವಪ್ಪ ಇತಿಹಾಸ ತಿಳಿದು ಮಾತನಾಡಲಿ ::ಸಂಸದ ಯದುವೀರ್ ಒಡೆಯರ್

“ಕೃಷ್ಣರಾಜ ಸಾಗರ ಜಲಾಶಯಕ್ಕೆ ಟಿಪ್ಪುಸುಲ್ತಾನ್‌ ಮೊದಲ ಅಡಿಗಲ್ಲು ಹಾಕಿದ್ದರು ಎಂಬ ಸಚಿವ ಮಹದೇವಪ್ಪ ಅವರ ಹೇಳಿಕೆ...

ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಾಗಿ 50 ಕೋಟಿ ಅನುದಾನ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

“ಶಾಸಕರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50...

ರಾಜ್ಯ ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಸಂಚಲನ ಮೂಡಿಸಿದ್ದ ಆರೋಪದ ಆಡಿಯೋ ನನ್ನದೇ, ನನ್ನ ಆರೋಪಕ್ಕೆ ನಾನು ಬದ್ಧ; ಕಾಂಗ್ರೆಸ್‌ ಶಾಸಕ ಬಿ.ಆರ್‌. ಪಾಟೀಲ್‌

ಬೆಂಗಳೂರು: ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಕುರಿತು ಸಚಿವ ಜಮೀರ್‌ ಖಾನ್‌ ಅವರ ಆಪ್ತ ಕಾರ್ಯದರ್ಶಿ ಸರ್ಫ‌ರಾಜ್‌...

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮ :: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ದಾವಣಗೆರೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿದೆ. ಸಮಾಜದಲ್ಲಿ ಪುಟಾಣಿ ಮಕ್ಕಳಿಂದ...