ಒಂದು ರಾಷ್ಟ್ರ ಒಂದು ಚುನಾವಣೆ ವಿರೋಧಿಸಿ ಕರ್ನಾಟಕ ಸರಕಾರ ನಿರ್ಣಯ ಸಾಧ್ಯತೆ ಮುಖ್ಯಮಂತ್ರಿ ಸಿದ್ದರಾಮಯ್ಯ

40

“ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಯನ್ನು ವಿರೋಧಿಸಿ ಕರ್ನಾಟಕ ಸರ್ಕಾರ ನಿರ್ಣಯ ಅಂಗೀಕರಿಸುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಗತ್ಯಬಿದ್ದರೆ ಕೇರಳದಂತೆ ನಿರ್ಣಯ ಕೈಗೊಂಡು ಈ ಪ್ರಜಾಪ್ರಭುತ್ವ ವಿರೋಧಿ ಕ್ರಮದ ವಿರುದ್ಧ ಪ್ರಬಲ ಸಂದೇಶ ರವಾನಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ, ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ’’ ಮಸೂದೆ ಸಂಸದೀಯ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿರುವುದು ಮಾತ್ರವಲ್ಲ,

ಇದರ ಹಿಂದೆ ರಾಜ್ಯಗಳ ಹಕ್ಕುಗಳನ್ನು ಮೊಟಕುಗೊಳಿಸುವ ದುರಾಲೋಚನೆ ಕೂಡಾ ಇದೆ. ಕೇರಳ ಸರ್ಕಾರ ಈಗಾಗಲೇ ‘’ಒಂದು ರಾಷ್ಟ್ರ, ಒಂದು ಚುನಾವಣೆ’’ ಪ್ರಸ್ತಾವವನ್ನು ವಿರೋಧಿಸಿ ಗೊತ್ತುವಳಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳಿಸಿಕೊಟ್ಟಿದೆ.

ಅಗತ್ಯ ಬಿದ್ದರೆ ನಮ್ಮ ಸರ್ಕಾರ ಕೂಡಾ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಜೊತೆ ಸಮಾಲೋಚನೆ ನಡೆಸಿ ‘’ಒಂದು ರಾಷ್ಟ್ರ, ಒಂದು ಚುನಾವಣೆ’’ ಮಸೂದೆ ವಿರುದ್ದ ಬಹುಮತದ ಗೊತ್ತುವಳಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳಿಸಿಕೊಡಲಾಗುವುದು.

ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ’’ ಮಸೂದೆ ಸಂಸದೀಯ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿರುವುದು ಮಾತ್ರವಲ್ಲ, ಇದರ ಹಿಂದೆ ರಾಜ್ಯಗಳ ಹಕ್ಕುಗಳನ್ನು ಮೊಟಕುಗೊಳಿಸುವ ದುರಾಲೋಚನೆ ಕೂಡಾ ಇದೆ.

ಹಲವಾರು ದೋಷಗಳಿಂದ ಕೂಡಿರುವ ಈಗಿನ ಚುನಾವಣಾ ವ್ಯವಸ್ಥೆಯನ್ನು ಸುಧಾರಣೆಗೊಳಪಡಿಸುವ… 2024 ಹಲವಾರು ದೋಷಗಳಿಂದ ಕೂಡಿರುವ ಈಗಿನ ಚುನಾವಣಾ ವ್ಯವಸ್ಥೆಯನ್ನು ಸುಧಾರಣೆಗೊಳಪಡಿಸುವ ತುರ್ತು ಅಗತ್ಯ ಇರುವ ಈ ಸಂದರ್ಭದಲ್ಲಿ ಇಂತಹ ಮಸೂದೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ದುರ್ಬಲಗೊಳಿಸಲಿದೆ.

ಇಂತಹದ್ದೊಂದು ಮುಖ್ಯವಾದ ಮಸೂದೆಗೆ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಪಡೆಯುವ ಮೊದಲು ವಿರೋಧಪಕ್ಷಗಳು ಮತ್ತು ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸಬೇಕಾಗಿತ್ತು.

ಆದರೆ ನರೇಂದ್ರ ಮೋದಿ ಸರ್ಕಾರ ಸರ್ವಾಧಿಕಾರಿ ಧೋರಣೆಯಿಂದ ಈ ಮಸೂದೆಯನ್ನು ದೇಶದ ಮೇಲೆ ಹೇರಲು ಹೊರಟಿದೆ ಎಂದು ಆರೋಪಿಸಿದ್ದಾರೆ.

ಲೋಕಸಭೆ ಇಲ್ಲವೇ ವಿಧಾನಸಭೆಯಲ್ಲಿ ಆಡಳಿತಾರೂಢ ಪಕ್ಷ ವಿಶ್ವಾಸಮತ ಗಳಿಸಲು ಸೋತುಹೋಗುವ ಸಂದರ್ಭದಲ್ಲಿ ಎದುರಾಗುವ ಬಿಕ್ಕಟ್ಟಿಗೆ ಈ ಪ್ರಸ್ತಾವದಲ್ಲಿ ಪರಿಹಾರವೇ ಇಲ್ಲ ಎಂದರು ಇಂತಹ ಸಂದರ್ಭದಲ್ಲಿ ಮಧ್ಯಂತರ ಚುನಾವಣೆಯೊಂದೇ ಯೋಗ್ಯ ಪರಿಹಾರ.

ಇದರ ಬದಲಿಗೆ ಸದನದಲ್ಲಿ ವಿಶ್ವಾಸ ಮತ ಗಳಿಸಲು ವಿಫಲವಾದ ಅಲ್ಪಸಂಖ್ಯಾತ ಪಕ್ಷ ಅಧಿಕಾರದಲ್ಲಿ ಮುಂದುವರಿಯಲು ಅವಕಾಶ ನೀಡಿದರೆ ಅದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಗೆಯುವ ದ್ರೋಹವಾಗುತ್ತದೆ.

ಹೊಸ ಚುನಾವಣಾ ವ್ಯವಸ್ಥೆ ಜಾರಿಗೆ ಬರಬೇಕಾದರೆ ಮೊದಲು ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ಮಾಡಬೇಕಾಗಿದೆ. ಇದರ ಜೊತೆಗೆ ಸಂವಿಧಾನದ ಕನಿಷ್ಠ ಐದು ವಿಧಿಗಳಿಗೆ ತಿದ್ದುಪಡಿ ತರಬೇಕಾಗಿದೆ.

ಇಡೀ ದೇಶದಲ್ಲಿ ಒಂದೇ ಬಾರಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ನಡೆಸುವ ಶಕ್ತಿ-ಸಾಮರ್ಥ್ಯ ನಮ್ಮ ಈಗಿನ ಚುನಾವಣಾ ಆಯೋಗಕ್ಕೆ ಇಲ್ಲ. ನರೇಂದ್ರ ಮೋದಿ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಕೊಳ‍್ಳಲು ಆಗಾಗ ಇಂತಹ ಗಿಮಿಕ್ ಗಳನ್ನು ಪ್ರದರ್ಶಿಸುತ್ತದೆ ಎಂದು ಕಿಡಿಕಾರಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....

ಬೆಂಗಳೂರಿನಲ್ಲಿ 2.50 ಕೋಟಿ ರೂ. ಮೌಲ್ಯದ ಡ್ರಗ್ಸ್, ನಗದು ಜಪ್ತಿ ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಹೊಸ ವರ್ಷಾಚರಣೆಗೂ ಮುನ್ನ, ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು...