“ರಾಜ್ಯಸಭೆಯ ಉಪಚುನಾವಣೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮತ್ತು ಬಿಜೆಪಿ ನಾಯಕಿ ರೇಖಾ ಶರ್ಮಾ ಅವರು ಹರಿಯಾಣದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಶುಕ್ರವಾರ ಘೋಷಿಸಲಾಗಿದೆ.
ರೇಖಾ ಶರ್ಮಾ ಅವರು ಮಂಗಳವಾರ ಹರಿಯಾಣದಿಂದ ರಾಜ್ಯಸಭೆ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನವಾಗಿತ್ತು. ಹೀಗಾಗಿ 3 ಗಂಟೆಯ ನಂತರ ಕಣದಲ್ಲಿದ್ದ ಏಕೈಕ ಅಭ್ಯರ್ಥಿ ರೇಖಾ ಶರ್ಮಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಗಿದೆ.
ಶರ್ಮಾ ಅವರು ಅವಿರೋಧವಾಗಿ ಆಯ್ಕೆಯಾದ ನಂತರ ಚುನಾವಣಾಧಿಕಾರಿ ಪ್ರಮಾಣಪತ್ರವನ್ನು ನೀಡಿದರು. ಈ ವೇಳೆ ಹರಿಯಾಣ ಸಚಿವ ಮಹಿಪಾಲ್ ಧಂಡಾ ಮತ್ತು ಹರಿಯಾಣ ವಿಧಾನಸಭೆಯ ಮಾಜಿ ಸ್ಪೀಕರ್ ಗಿಯಾನ್ ಚಂದ್ ಗುಪ್ತಾ ಅವರು ಇದ್ದರು
ಡಿಸೆಂಬರ್ 20 ರಂದು ನಡೆಯಲಿರುವ ರಾಜ್ಯಸಭಾ ಉಪಚುನಾವಣೆಗೆ ಶರ್ಮಾ ಅವರ ಹೆಸರನ್ನು ಬಿಜೆಪಿ ಸೋಮವಾರ ಪ್ರಕಟಿಸಿತ್ತು. ಆದರೆ ಪ್ರತಿಪಕ್ಷಗಳು ಉಪಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ