thekarnatakatoday.com
National

ನಟ ಅಲ್ಲು ಅರ್ಜುನ್ ಗೆ ಮಧ್ಯಂತರ ಜಾಮೀನು ಮಂಜೂರು ನೀಡಿದ ತೆಲಂಗಾಣ ಹೈ ಕೋರ್ಟ್

“ಪುಷ್ಪ-2: ದಿ ರೂಲ್’ ಚಿತ್ರದ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ತೆಲುಗು ಸೂಪರ್‌ಸ್ಟಾರ್ ಅಲ್ಲು ಅರ್ಜುನ್ಗೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಡಿಸೆಂಬರ್ 4ರಂದು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಪುಷ್ಪ 2 ಚಿತ್ರದ ಪ್ರದರ್ಶನದ ವೇಳೆ ಕಾಲ್ತುಳಿತ ಉಂಟಾಗಿ ಮಹಿಳೆಯೊಬ್ಬರು ಮೃತಪಟ್ಟು, ಆಕೆಯ ಮಗ ಗಂಭೀರವಾಗಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈದರಾಬಾದ್ ಪೊಲೀಸರು ನಟ ಅಲ್ಲು ಅರ್ಜುನ್‌ ಅವರನ್ನು ಬಂಧಿಸಿದ್ದರು.

ಬಳಿಕ ನಾಂಪಲ್ಲಿ ನ್ಯಾಯಾಲಯ ಅಲ್ಲು ಅರ್ಜುನ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಇದೀಗ ಹೈಕೋರ್ಟ್ ಮಧ್ಯಂತರ ಜಾಮೀನ ನೀಡಿದೆ.

ಇದರಿಂದ ಅಲ್ಲು ಅರ್ಜುನ್ 14 ದಿನಗಳ ಜೈಲು ವಾಸದಿಂದ ತಪ್ಪಿಸಿಕೊಂಡಂತಾಗಿದೆ. ಆದರೆ ಒಂದು ದಿನ ಅಥವಾ ಸೋಮವಾರದವರೆಗೆಯಾದರೂ ಜೈಲು ವಾಸ ಅನುಭವಿಸುವ ಸಾಧ್ಯತೆ ಇದೆ.

ಎಫ್ಐಆರ್ ರದ್ದು ಕೋರಿ ಅಲ್ಲು ಅರ್ಜುನ್ ಪರ ವಕೀಲರು ತೆಲಂಗಾಣ ಹೈಕೋರ್ಟ್ನಲ್ಲಿ ಅರ್ಜಿ ಹಾಕಿದ್ದರು.

ಶಾರುಖ್ ಖಾನ್ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳ ಉಲ್ಲೇಖ ಮಾಡಿ ಅಲ್ಲು ಅರ್ಜುನ್ ಪರ ವಕೀಲರು ವಾದ ಮಂಡಿಸಿದರು. ಆದರೆ ಹೈಕೋರ್ಟ್ ಎಫ್ಐಆರ್ ರದ್ದುಗೊಳಿಸಲು ನಿರಾಕರಿಸಿದೆ. ವಾದ ಮುಂದುವರೆಸಿದ ಅಲ್ಲು ಅರ್ಜುನ್ ಪರ ವಕೀಲರು ಮಧ್ಯಂತರ ಜಾಮೀನಿಗೆ ಮನವಿ ಮಾಡಿದರು.

ಅಲ್ಲು ಅರ್ಜುನ ರೇವತಿ ಸಾವಿಗೆ ನೇರ ಸಂಬಂಧವೇ ಇಲ್ಲ. ಇದು ಅಚಾನಕ್ಕಾಗಿ ನಡೆದಿರುವ ಘಟನೆ. ಇಂಥಹಾ ಅಪಘಾತಗಳು ಸಾಕಷ್ಟು ನಡೆಯುತ್ತಲೇ ಇರುತ್ತವೆ. ಈ ರೀತಿಯ ಘಟನೆಗಳಿಗೆ ನಟರನ್ನು, ರಾಜಕಾರಣಿಗಳನ್ನು ಕೊಲೆಗಾರರು ಎನ್ನಲಾಗದು ಎಂದು ವಾದಿಸಿದರು.

ಹಲವು ಇತರೆ ಪ್ರಕರಣಗಳ ಉಲ್ಲೇಖಗಳನ್ನು ಸಹ ವಕೀಲರು ನ್ಯಾಯಾಲಯದಲ್ಲಿ ಮಾಡಿದರು. ವಾದ ಆಲಿಸಿದ ನ್ಯಾಯಮೂರ್ತಿಗಳು ಅಲ್ಲು ಅರ್ಜುನ ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ.

ಇದಕ್ಕೂ ಮುನ್ನ ಮೃತ ಮಹಿಳೆ ರೇವತಿಯ ಪತಿ ಭಾಸ್ಕರ್ ಮಾತನಾಡಿ, ಆಕೆಯ ಸಾವಿಗೆ ನಟ ಅಲ್ಲು ಅರ್ಜುನ್ ಕಾರಣವಲ್ಲ. ಅವರ ತಪ್ಪಿಲ್ಲ. ಅಗತ್ಯವಿದ್ದರೆ ಪ್ರಕರಣವನ್ನು ಹಿಂಪಡೆಯಲು ಸಿದ್ಧ ಎಂದು ಹೇಳಿದರು. ಅಲ್ಲದೆ ಅಲ್ಲು ಅರ್ಜುನ್ ಬಂಧನದ ಬಗ್ಗೆ ತನಗೆ ಮಾಹಿತಿ ಇಲ್ಲ ಎಂದು ಅವರು ಹೇಳಿದ್ದಾರೆ.

Related posts

ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಪಡ್ನವೀಸ್ ಪ್ರಮಾಣ ವಚನ ಸ್ವೀಕಾರ

The Karnataka Today

ಕೇವಲ ಮಾಧ್ಯಮದ ಮುಂದೆ ತನಿಖೆ ಎದುರಿಸಲು ಸಿದ್ಧ ಎಂದ ಶಾಸಕ ಯಶ್ ಪಾಲ್ ಸುವರ್ಣ ಕೋರ್ಟ್ ನಿಂದ ತಡೆಯಾಜ್ಞೆ ತರುವುದು ಯಾಕೆ??

The Karnataka Today

ಶ್ರೀರಂಗಪಟ್ಟಣ ಸುರಕ್ಷಿತ ಸ್ಮಾರಕ ಜಾಮ ಮಸೀದಿಯಲ್ಲಿ ಅಕ್ರಮ ಮದರಸಾ ತೆರವಿಗೆ ರಾಜ್ಯ ಸರಕಾರಕ್ಕೆ ನಿರ್ದೇಶಿಸುವಂತೆ ಹೈಕೋರ್ಟಿಗೆ ಮನವಿ ಸಲ್ಲಿಸಿದ ಕೇಂದ್ರ ಸರ್ಕಾರ

The Karnataka Today

Leave a Comment