ಪ್ರಯಾಗ್ ರಾಜ್ ನಲ್ಲಿ ನಡೆಯಲಿರುವ ಮಹಾ ಕುಂಭಮೇಳಕ್ಕೆ ಬೇಕಾದ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

58

“ಮಹಾ ಕುಂಭ 2025, ದೇಶದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಗುರುತನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ “ಐಕ್ಯತೆಯ ಮಹಾಯಜ್ಞ” ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

ಇಂದು ನಗರದ ಮೂಲಸೌಕರ್ಯಗಳನ್ನು ಸುಧಾರಿಸಲು ಮತ್ತು ಕುಂಭಮೇಳದ ಸಂದರ್ಭದಲ್ಲಿ ಯಾತ್ರಾರ್ಥಿಗಳಿಗೆ ಉತ್ತಮ ಸೌಕರ್ಯಗಳನ್ನು ಒದಗಿಸಲು ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಸಾಮಾಜಿಕ ಒಗ್ಗಟ್ಟು ಮತ್ತು ಸಮುದಾಯಗಳ ಆರ್ಥಿಕ ಸಬಲೀಕರಣವನ್ನು ಉತ್ತೇಜಿಸುವಲ್ಲಿ ಮಹಾ ಕುಂಭಮೇಳದ ಪಾತ್ರವನ್ನು ಒತ್ತಿ ಹೇಳಿದರು.

5,500 ಕೋಟಿ ರೂಪಾಯಿ ಮೌಲ್ಯದ 167 ಪ್ರಮುಖ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ, ಮಹಾ ಕುಂಭದಲ್ಲಿ ಪಾಲ್ಗೊಳ್ಳುವ ಭಕ್ತರಿಗೆ ಸಂವಹನವನ್ನು ಸುವ್ಯವಸ್ಥಿತಗೊಳಿಸಲು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಮತ್ತು ಕುಂಭ ಸಹಾಯಾಕ್ ಚಾಟ್‌ಬಾಟ್‌ಗಳನ್ನು ಬಳಸಲಾಗುವುದು ಎಂದರು.

ಪ್ರತಿ 12 ವರ್ಷಗಳಿಗೊಮ್ಮೆ ಮಹಾಕುಂಭವನ್ನು ಆಯೋಜಿಸುವ ಪ್ರಯಾಗ್‌ರಾಜ್ ನಗರವು ಕೇವಲ ಭೌಗೋಳಿಕ ಸ್ಥಳವಲ್ಲ, ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಪವಿತ್ರ ಸಂಗಮವಾಗಿದೆ.

ಇದು ಜನರನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಆಧ್ಯಾತ್ಮಿಕ ಅನುಭವದ ಸ್ಥಳವಾಗಿದೆ ಎಂದು ಮೋದಿ ಹೇಳಿದರು. ಮಹಾ ಕುಂಭವು ಏಕತೆಯ ಮಹಾಯಜ್ಞವಾಗಿದೆ. ಇದು ದೇಶದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಗುರುತನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ.

ಇದು ವಿಶ್ವಾದ್ಯಂತ ಚರ್ಚಿಸಲ್ಪಡುವ ಏಕತೆಯ ಮಹಾಯಜ್ಞ(ಭಕ್ತಿಯ ಮಹಾ ಕಾರ್ಯ) ಆಗಲಿದೆ ಎಂದರು. ಭಾರತವು ಪವಿತ್ರ ಸ್ಥಳಗಳು ಮತ್ತು ತೀರ್ಥಯಾತ್ರೆಗಳ ದೇಶವಾಗಿದೆ.

“ಮಹಾ ಕುಂಭವು ಯಾವುದೇ ಬಾಹ್ಯ ವ್ಯವಸ್ಥೆಯ ಬದಲಿಗೆ ಮನುಷ್ಯನ ಆಂತರಿಕ ಪ್ರಜ್ಞೆಯನ್ನು ಪ್ರತಿಬಿಂಬಿಸುತ್ತದೆ. ಇದು ಭಕ್ತಿ, ಧರ್ಮ ಮತ್ತು ಸಂಸ್ಕೃತಿಯ ದೈವಿಕ ಸಹಭಾಗಿತ್ವವನ್ನು ಒದಗಿಸುವ ಘಟನೆಯಾಗಿದೆ ”ಎಂದು ಮೋದಿ ಹೇಳಿದರು.

2025 ರ ಮಹಾ ಕುಂಭಮೇಳವು ಜನವರಿ 13 ರಿಂದ ಫೆಬ್ರವರಿ 26 (ಮಹಾ ಶಿವರಾತ್ರಿ) ವರೆಗೆ ಪ್ರಯಾಗರಾಜ್‌ನಲ್ಲಿ ನಡೆಯಲಿದೆ.

Leave a comment

Leave a Reply

Your email address will not be published. Required fields are marked *

Related Articles

ಕರ್ನಾಟಕ ಹೈಕೋರ್ಟ್ ನಲ್ಲಿ 101 ಹುದ್ದೆಗಳ ಭರ್ತಿಗೆ ಕ್ರಮ ಉದ್ಯೋಗಾಕಾಂಕ್ಷಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನಲ್ಲಿ 101 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದ್ದು ಉದ್ಯೋಗಾಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ....

ಶಬರಿಮಲೆ ಅಯ್ಯಪ್ಪ ಬ್ರಹ್ಮಚಾರಿ; ಅಗತ್ಯ ಧಾರ್ಮಿಕ ನಿರ್ಬಂಧ ಎತ್ತಿ ಹಿಡಿಯಬಹುದು: ಸುಪ್ರೀಂ ಕೋರ್ಟ್ ನಲ್ಲಿ ದೇವಾಲಯದ ಪರ ವಕೀಲರ ವಾದ

“ನವದೆಹಲಿ: ಸುಪ್ರೀಂ ಕೋರ್ಟ್ ಮಂಗಳವಾರ ಶಬರಿಮಲೆ ಅಯ್ಯಪ್ಪ ದೇವಾಲಯದ ಪ್ರಧಾನ ಅರ್ಚಕರನ್ನು, ಜನ್ಮ ಅಥವಾ ಸ್ಥಾನಮಾನದ...

ಎಸ್ ಎಸ್ ಎಲ್ ಸಿ ಪರೀಕ್ಷೆಯ ಅಂಕ 625ಕ್ಕೆ ಬದಲಿಗೆ 525 ಅಂಕಗಳಿಗೆ ಇಳಿಕೆ ಸಚಿವ ಮಧು ಬಂಗಾರಪ್ಪ

“ಬೆಂಗಳೂರು: SSLC ಪರೀಕ್ಷೆಯ ಅಂಕಗಳನ್ನು 625ಕ್ಕೆ ಬದಲಿಗೆ 525 ಅಂಕಗಳಿಗೆ ಇಳಿಕೆ ಮಾಡಲಾಗಿದೆ. ಹಿಂದಿ ಸೇರಿ...

ಶಿವಸೇನೆಯಿಂದ ಮೇಯರ್ ಆದ್ರೆ ಬಾಳಾ ಠಾಕ್ರೆ ಅವರ ಜನ್ಮ ಶತಮಾನೋತ್ಸವ ವರ್ಷದಲ್ಲಿ ಅವರಿಗೆ ನೀಡುವ ಗೌರವ :: ಏಕನಾಥ್ ಶಿಂಧೆ

ಇತ್ತೀಚಿಗೆ ನಡೆದ ಬೃಹನ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಮಹಾಯುತಿಯಲ್ಲಿ ಈಗ...