thekarnatakatoday.com
National

ದೇಶಾದ್ಯಂತ ಸಂಚಲನ ಮೂಡಿಸಿದ್ದ ಟೆಕ್ಕಿ ಅತುಲ್ ಆತ್ಮಹತ್ಯೆ ಪ್ರಕರಣ ಪತ್ನಿಸಹಿತ ಮೂವರ ಬಂಧನ

ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ: ಪತ್ನಿ, ಭಾಮೈದ ಸೇರಿ ಮೂವರ ಬಂಧನ ಹರಿಯಾಣದ ಗುರುಗ್ರಾಮದಲ್ಲಿ ಅತುಲ್ ಪತ್ನಿ ನಿಖಿತಾಳನ್ನು ಬಂಧಿಸಲಾಗಿದ್ದು, ಉತ್ತರ ಪ್ರದೇಶದ ಅಲಹಾಬಾದ್ನಲ್ಲಿ ನಿಶಾ ಹಾಗೂ ಅನುರಾಗ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ಅತುಲ್ ಪತ್ನಿ, ಎ1 ಆರೋಪಿ ನಿಖಿತಾ ಸಿಂಘಾನಿಯ, ಅತ್ತೆ ಎ2 ಆರೋಪಿ ನಿಶಾ ಸಿಂಘಾನಿಯಾ, ಭಾಮೈದ ಎ3 ಆರೋಪಿ ಅನುರಾಗ ನನ್ನು ಪೊಲೀಸರು ಬಂಧಿಸಿ ತಡರಾತ್ರಿ ಬೆಂಗಳೂರಿಗೆ ಕರೆತಂದಿದ್ದಾರೆ.

ಹರಿಯಾಣದ ಗುರುಗ್ರಾಮದಲ್ಲಿ ಅತುಲ್ ಪತ್ನಿ ನಿಖಿತಾಳನ್ನು ಬಂಧಿಸಲಾಗಿದ್ದು, ಉತ್ತರ ಪ್ರದೇಶದ ಅಲಹಾಬಾದ್ನಲ್ಲಿ ನಿಶಾ ಹಾಗೂ ಅನುರಾಗ್ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.


ಮೂವರು ಆರೋಪಿಗಳನ್ನೂ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಎಲ್ಲರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪತ್ನಿ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಅತುಲ್ ಸುಭಾಷ (34 ವರ್ಷ) ಡೆತ್ನೋಟ್ ಬರೆದಿಟ್ಟು ಡಿಸೆಂಬರ್ 9ರಂದು ಬೆಂಗಳೂರಿನ ಮಂಜುನಾಥ ಲೇಔಟ್ನ ಪ್ಲಾಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ತನಗೆ ಪತ್ನಿ ಮತ್ತು ಆಕೆಯ ಸಂಬಂಧಿಕರು ನೀಡಿರುವ ಕಿರುಕುಳದ ಬಗ್ಗೆ 90 ನಿಮಿಷಗಳ ವಿಡಿಯೋ ಮಾಡಿ, ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಹರಿಬಿಟ್ಟಿದ್ದರು. ಈ ಸಂಬಂಧ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Related posts

ಪ್ರತಿಪಕ್ಷಗಳ ವಿರೋಧದ ನಡುವೆ ಲೋಕಸಭೆಯಲ್ಲಿ ಒಂದು ದೇಶ ಒಂದು ಚುನಾವಣೆ ವಿಧೇಯಕ ಮಂಡನೆ

The Karnataka Today

ಮಂಗಳೂರಿನಲ್ಲಿ ಆರ್‌ಎಸ್‌ಎಸ್ ನೂತನ ಕಚೇರಿ ಉದ್ಘಾಟಿಸಿದ ಸರಸಂಘ ಚಾಲಕ ಡಾ ಮೋಹನ್ ಭಾಗವತ್

The Karnataka Today

ಅಂಬೇಡ್ಕರ್ ತತ್ವ ಪರಂಪರೆಯನ್ನು ಕಾಂಗ್ರೆಸ್ ಹಾಳು ಮಾಡುತ್ತಿದೆ: ಬಿ.ಎಲ್.ಸಂತೋಷ್

The Karnataka Today

Leave a Comment