thekarnatakatoday.com
News

ಮೂವತ್ತು ಸಾವಿರಕ್ಕೂ ಅಧಿಕ ಗಿಡಗಳನ್ನು ನೆಟ್ಟು ಬೆಳೆಸಿದ ಪದ್ಮಶ್ರೀ ಪುರಸ್ಕೃತೆ ಪರಿಸರ ಪ್ರೇಮಿ ತುಳಸಿ ಗೌಡ ನಿಧನ

ಉತ್ತರ ಕನ್ನಡ ಜಿಲ್ಲೆಯ ಪರಿಸರ ಪ್ರೇಮಿ,ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.

ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.


ತುಳಸಿಗೌಡ ಅವರು ವರ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸಿ ಪರಿಸರ ಪ್ರೇಮಿ ಎಂದು ಹೆಸರಾಗಿದ್ದರು.

ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದರು. ತುಳಸಿಗೌಡ ಅವರ ಮನೆಯಲ್ಲಿ ತೀರಾ ಬಡತನವಿದ್ದರೂ ಹಸಿರು ಕ್ರಾಂತಿ ಮಾಡಿ ಇಡೀ ದೇಶದ ಗಮನ ಸೆಳೆದಿದ್ದರು.

ತುಳಸಿಗೌಡ ಅವರ ಪರಿಸರ ಪ್ರೇಮವನ್ನ ಮೆಚ್ಚಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ .2020ರಲ್ಲಿ ಅಂದಿನ ರಾಷ್ಟ್ರಪತಿ ರಮಾನಾಥ ಕೋವಿಂದ ಅವರಿಂದ ತುಳಸಿಗೌಡ ಅವರು ಪದ್ಮಶ್ರೀ ಪ್ರಶಸ್ತಿ ಸ್ವಿಕರಿಸಿದ್ದರು. ತುಳಸಿಗೌಡ ಅವರು ಸುಬ್ರಾಯ ಮತ್ತು ಸೋನಿ ಎಂಬ ಇಬ್ಬರು ಮಕ್ಕಳನ್ನು ಅಗಲಿದ್ದಾರೆ

. ಬರಿಗಾಲಲ್ಲಿ ಹೋಗಿ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಹರೇಕಳ ಹಾಜಬ್ಬ, ತುಳಸಿಗೌಡ: ಸರಳತೆ, ದೃಢ ಸಂಕಲ್ಪಕ್ಕೆ ಮೆಚ್ಚುಗೆಯ ಮಹಾಪೂರ ತುಳಸಿಗೌಡ ಅವರ ನಿಧನಕ್ಕೆ ಮಾಜಿ ಸಂಸದ ಡಿಕೆ ಸುರೇಶ್ ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಸಂತಾಪ ಸೂಚಿಸಿದ್ದಾರೆ.


Related posts

ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೈಲೆಟ್ ನ ಸಮಯಪ್ರಜ್ಞೆಯಿಂದ ತಪ್ಪಿದ ವಿಮಾನ ದುರಂತ

The Karnataka Today

ಪತ್ನಿ ಮತ್ತು ಮಕ್ಕಳ ಮೇಲೆ ದೌರ್ಜನ್ಯ ಪೊಲೀಸ್ ಕಾನ್ಸ್‌ಟೇಬಲ್‌ ವಿರುದ್ಧ ಎಫ್ ಐ ಆರ್

The Karnataka Today

ರಾಜ್ಯ ಸರ್ಕಾರದ ಬೇಜವಾಬ್ದಾರಿ ವೈದ್ಯರ ನಿರ್ಲಕ್ಷಕ್ಕೆ ಮುಂದುವರಿದ ಬಾಣಂತಿಯರು ಸರಣಿ ಸಾವು ಸಾರ್ವಜನಿಕ ವಲಯದಲ್ಲಿ ಆಕ್ರೋಶ

The Karnataka Today

Leave a Comment