ಪ್ರತಿಪಕ್ಷಗಳ ವಿರೋಧದ ನಡುವೆ ಲೋಕಸಭೆಯಲ್ಲಿ ಒಂದು ದೇಶ ಒಂದು ಚುನಾವಣೆ ವಿಧೇಯಕ ಮಂಡನೆ

1

“ನವದೆಹಲಿ: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಕೇಂದ್ರ ಸರ್ಕಾರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ.

“ಒಂದು ದೇಶ, ಒಂದು ಚುನಾವಣೆ” ಮಸೂದೆ ಎಂದು ಉಲ್ಲೇಖಿಸಲ್ಪಡುವ ಸಂವಿಧಾನ(ನೂರಾ ಇಪ್ಪತ್ತೊಂಬತ್ತನೇ ತಿದ್ದುಪಡಿ) ತಿದ್ದುಪಡಿ ಮಸೂದೆ, 2024 ಅನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು ಲೋಕಸಭೆಯಲ್ಲಿ ಮಂಡಿಸಿದರು

. ‘ಒಂದು ರಾಷ್ಟ್ರ, ಒಂದು ಚುನಾವಣೆ’ ಜಾರಿಗೆ ತರುವ ಸಾಂವಿಧಾನಿಕ ತಿದ್ದುಪಡಿ ಸೇರಿದಂತೆ ಎರಡು ಮಸೂದೆಗಳನ್ನು ಅರ್ಜುನ್ ರಾಮ್ ಮೇಘವಾಲ್ ಅವರು ಮಂಡಿಸಿದರು.

ಇದು 2014 ರಲ್ಲಿ ಅಧಿಕಾರಕ್ಕೆ ಬಂದ ನಂತರ ಪ್ರಮುಖ ಚುನಾವಣಾ ಸುಧಾರಣೆಗೆ ಬಿಜೆಪಿ ದಾರಿ ಮಾಡಿಕೊಟ್ಟಿದೆ. ಆದಾಗ್ಯೂ, ಈ ಮಸೂದೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಅಸಂವಿಧಾನಿಕ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತದೆ ಮತ್ತು ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುತ್ತದೆ ಎಂದು ವಾದಿಸುತ್ತಿದ್ದಾರೆ.

ಮಸೂದೆಗೆ ಕಾಂಗ್ರೆಸ್, ಟಿಎಂಸಿ, ಎಸ್ಪಿ ಸೇರಿದಂತೆ ಹಲವು ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಈ ಮಸೂದೆ ತರುವ ಅಗತ್ಯ ಏನಿದೆ ಎಂದು ಸಮಾಜವಾದಿ ಲಕ್ಷದ ಸಂಸದ ಧರ್ಮೇಂದ್ರ ಯಾದವ್ ಅವರು ಪ್ರಶ್ನಿಸಿದ್ದಾರೆ.

ಕಳೆದ ವಾರ ಕೇಂದ್ರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಒಪ್ಪಿಗೆ ನೀಡಲಾಗಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಇದರ ಉದ್ದೇಶವಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಇಸ್ಲಾಂಗೆ ಮತಾಂತರ, ಮದುವೆಗೆ ನಿರಾಕರಣೆ; ಕತ್ತು ಸೀಳಿ ಭಾಗ್ಯಶ್ರೀ ಹತ್ಯೆ ಮಾಡಿದ ಶೇಖ್ ರಯೀಸ್

ಮಧ್ಯಪ್ರದೇಶದಲ್ಲಿ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿಬಂದಿದ್ದು, ಧಾರ್ಮಿಕ ಮತಾಂತರ ಮತ್ತು ಮದುವೆಗೆ ನಿರಾಕರಿಸಿದ್ದಕ್ಕೆ ಮಹಿಳೆಯೊಬ್ಬರನ್ನು...

ವಿಧಾನಸಭೆ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲ್ ನಲ್ಲಿ ರಮ್ಮಿ ಅಡಿ ಕೃಷಿ ಖಾತೆಯನ್ನು ಕಳೆದುಕೊಂಡ ಸಚಿವ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲಿನಲ್ಲಿ ರಮ್ಮಿ ಆಡುತ್ತಿದ್ದ ಮಾಣಿಕ್ರಾವ್ ಕೊಕಾಟೆ ಕೃಷಿ...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ತೀರ್ಪು ವಿಶೇಷ ನ್ಯಾಯಾಲಯದಿಂದ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್...

ಅವಧೇಶಾನಂದ ಮಹಾರಾಜ್ ಕೊಲೆ ಪ್ರಕರಣ: ಆರ್ ಎಸ್ಎಸ್ ಮಾಜಿ ಪ್ರಚಾರಕ ಉತ್ತಮ್ ಗಿರಿಗೆ ಜೀವಾವಧಿ ಶಿಕ್ಷೆ

ಸಿರೋಹಿ: 2018 ರಲ್ಲಿ ಏಕಲ್ ವಿದ್ಯಾಲಯದ ಪೋಷಕ ಅವಧೇಶಾನಂದ ಮಹಾರಾಜ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...