ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಎಫ್ ಐ ಆರ್ ರದ್ದುಗೊಳಿಸಿದ ಹೈಕೋರ್ಟ್

46
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧದ ಎಫ್ ಐಆರ್ ರದ್ದುಗೊಳಿಸಿದ ಹೈಕೋರ್ಟ್

ನಗರದ ಸಾಮಾಜಿಕ ಹೋರಾಟಗಾರ ಆದರ್ಶ ಆರ್ ಅಯ್ಯರ್ ಎಂಬುವರು ದಾಖಲಿಸಿದ್ದ ದೂರಿನ ಆಧಾರದ ಮೇಲೆ ಬೆಂಗಳೂರು ಪೊಲೀಸರು ಸೆಪ್ಟೆಂಬರ್ ನಲ್ಲಿ ಎಫ್ ಐಆರ್ ದಾಖಲಿಸಿದ್ದರು


ಚುನಾವಣಾ ಬಾಂಡ್ ಗಳ ನೆಪದಲ್ಲಿ ಹಣ ಸುಲಿಗೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ನ್ನು ಹೈಕೋರ್ಟ್ ಮಂಗಳವಾರ ರದ್ದುಗೊಳಿಸಿದೆ.

ನಗರದ ಸಾಮಾಜಿಕ ಹೋರಾಟಗಾರ ಆದರ್ಶ ಆರ್ ಅಯ್ಯರ್ ಎಂಬುವರು ದಾಖಲಿಸಿದ್ದ ದೂರಿನ ಆಧಾರದ ಮೇಲೆ ಬೆಂಗಳೂರು ಪೊಲೀಸರು ಸೆಪ್ಟೆಂಬರ್ ನಲ್ಲಿ ಎಫ್ ಐಆರ್ ದಾಖಲಿಸಿದ್ದರು.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಇಡಿ ಅಧಿಕಾರಿಗಳು ಹಾಗೂ ಬಿಜೆಪಿ ರಾಷ್ಟ್ರ ರಾಜ್ಯ ಮಟ್ಟದ ಪದಾಧಿಕಾರಿಗಳ ವಿರುದ್ದವೂ ಎಫ್ ಐಆರ್ ದಾಖಲಾಗಿತ್ತು.


  ಆ ಸಂದರ್ಭದಲ್ಲಿ ವಿಜಯೇಂದ್ರ ಬಿಜೆಪಿ ಉಪಾಧ್ಯಕ್ಷರಾಗಿದ್ದರೆ ಮತ್ತೋರ್ವ ಆರೋಪಿ ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದರು. ಕಟೀಲ್ ವಿರುದ್ಧದ ಪ್ರಕರಣವನ್ನು ಕೋರ್ಟ್ ಡಿಸೆಂಬರ್ 3 ರಂದು ರದ್ದುಗೊಳಿಸಿತ್ತು.

ಚುನಾವಣಾ ಬಾಂಡ್‌ಗಳ ನೆಪದಲ್ಲಿ ಸಂಪೂರ್ಣ ಸುಲಿಗೆ ದಂಧೆಯಲ್ಲಿ ವಿವಿಧ ಹಂತದ ಬಿಜೆಪಿ ನಾಯಕರು ಕೈ ಜೋಡಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದರು.

ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 384 (ಸುಲಿಗೆ), 120 ಬಿ (ಅಪರಾಧದ ಪಿತೂರಿ) ಮತ್ತು 34 ಸಾಮಾನ್ಯ ಉದ್ದೇಶದಡಿ ಪ್ರಕರಣ ದಾಖಲಿಸಲಾಗಿತ್ತು.

Leave a comment

Leave a Reply

Your email address will not be published. Required fields are marked *

Related Articles

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....

ಬೆಂಗಳೂರಿನಲ್ಲಿ 2.50 ಕೋಟಿ ರೂ. ಮೌಲ್ಯದ ಡ್ರಗ್ಸ್, ನಗದು ಜಪ್ತಿ ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಹೊಸ ವರ್ಷಾಚರಣೆಗೂ ಮುನ್ನ, ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು...