ಸಿಟಿ ರವಿ ಆಕ್ಷೇಪಾರ್ಹಪದ ಬಳಸಿದ್ದಾರೆ ಅನ್ನೋದು ರೆಕಾರ್ಡ್ ಆಗಿಲ್ಲ ಆದರೆ ನಾಲ್ಕು ಜನ ಸಾಕ್ಷಿ ನುಡಿದಿದ್ದಾರೆ :: ವಿಧಾನ ಪರಿಷತ್ ಸಭಾಧ್ಯಕ್ಷ ಬಸವರಾಜ್ ಹೊರಟ್ಟಿ

59

“ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಅವರು ಮಾತನಾಡಿದ್ದ ಬಗ್ಗೆ ಯಾವುದೇ ರೆಕಾರ್ಡ್ ಇಲ್ಲ. ಆದರೆ, ಅಶ್ಲೀಲ ಪದ ಬಳಸಿದ್ದಾರೆ ಎಂದು ನಾಲ್ವರು ಸಾಕ್ಷಿ ಹೇಳಿದ್ದಾರೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಸಿ ಟಿ ರವಿಯವರು ಮಾತನಾಡಿದ್ದು ಆಡಿಯೋ ರೆಕಾರ್ಡ್ ಆಗಿಲ್ಲ ಸಾಕ್ಷಿಗಳು ಮಾತ್ರ ಇವೆ. ರೆಕಾರ್ಡ್ ಹುಡುಕಿದ್ದೇನೆ ನಮಗೆ ಆಡಿಯೋ ಸಿಕ್ಕಿಲ್ಲ. ನಾಲ್ಕು ಜನರು ಸಾಕ್ಷಿ ಹೇಳಿದ್ದಾರೆ. ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಇಬ್ಬರ ದೂರನ್ನೂ ಪಡೆದಿದ್ದೇವೆ ಎಂದು ತಿಳಿಸಿದರು.

ಸದನದಲ್ಲಿ ಪ್ರಶ್ನೋತ್ತರ ವೇಳೆ ಮುಗಿದ ಬಳಿಕ, ಕಾಂಗ್ರೆಸ್ನವರು ಕೇಂದ್ರ ಸಚಿವ ಅಮಿತ್ ಶಾ ಅವರ ವಿರುದ್ದ ಪ್ರತಿಭಟನೆಗೆ ಮುಂದಾದರು. ಈ ವೇಳೆ ಗಲಾಟೆ ಆಯ್ತು, ಗಲಾಟೆ ಹಿನ್ನೆಲೆ ಕಲಾಪ ಮುಂದೂಡಿದ್ವಿ. ಅವಾಗ ಇದೆಲ್ಲ ಗಲಾಟೆ ಆಗಿದೆ. ಸಂಜೆ 6 ಗಂಟೆಗೆ ಸಿಟಿ ರವಿ ಬಂಧನವಾಗಿರುವ ಬಗ್ಗೆ ಮಾಹಿತಿ ಬಂತು ಎಂದರು.

ನಾನು ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿಟಿ ರವಿ ಅವರನ್ನು ಕರೆದು ಮಾತನಾಡಿದೆ‌. ಇದನ್ನು ಇಲ್ಲಿಗೆ ಮುಗಿಸೋಣ ಅಂತ ಸಲಹೆ ನೀಡಿದೆ. ಈ ರೀತಿ ಆಗಿರುವುದು ಮೊದಲ ಸಲ. 45 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಇಂತಹ ಘಟನೆ ಆಗಿರಲಿಲ್ಲ. ಒಂದೊಂದು ಸಲ ಯಾಕಾದರೂ ಅಲ್ಲಿ ಕೂತಿದ್ದೇನೆ ಅನ್ಸತ್ತೆ ಎಂದು ಬಸವರಾಜ ಹೊರಟ್ಟಿ ಬೇಸರ ಹೊರಹಾಕಿದರು. ನಾನು ಯಾರ ಪರವೂ ಇಲ್ಲ, ಎರಡು ಕಡೆ ಯೋಚನೆ ಮಾಡಿದ್ದೇನೆ.

ಇದು ಕಡ್ಡಿ ಹೋಗಿ ಗುಡ್ಡ ಆಯ್ತು. ಬೇಲಿಯೇ ಎದ್ದು ಹೊಲ ಮೇಯ್ದರೆ ಏನಾಗತ್ತೆ. ಜನ‌ ನಮ್ಮನ್ನು ನೋಡುತ್ತಾರೆ. ಶಾಸಕರು ನಡವಳಿಕೆ ತಿದ್ದುಕೊಳ್ಳಬೇಕು ಎಂದು ಸೂಚನೆ ನೀಡಿದರು. ನಿನ್ನೆ ಬೆಳಗಾವಿ ಸುವರ್ಣಸೌಧದಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನದ ಕೊನೆಯ ದಿನ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ ಬಗ್ಗೆ ಆಕ್ಷೇಪಾರ್ಹ ಪದ ಬಳಸಿದ್ದಾರೆಂದು ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಇದೆಲ್ಲದಕ್ಕೂ ಮೂಲ ಕಾರಣವಾಯಿತು.

ಕಾಂಗ್ರೆಸ್ ನಡೆಸುತ್ತಿದ್ದ ಪ್ರತಿಭಟನೆಗೆ ಕೌಂಟರ್ ಆಗಿ ಬಿಜೆಪಿ ಕೂಡಾ ಪ್ರತಿಭಟನೆಗೆ ಇಳಿದಿದ್ದರಿಂದ, ಎರಡು ಪಕ್ಷಗಳ ನಡುವೆ ತೀವ್ರ ವಾಗ್ಯುದ್ದಕ್ಕೆ ಕಾರಣವಾಯಿತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಿ.ಟಿ.ರವಿ ನಡುವೆ, ಮಾತಿನ ಚಕಮಕಿ ನಡೆದು ಆಕ್ಷೇಪಾರ್ಹ ಪದವನ್ನು ರವಿ ಬಳಸಿದರು ಎನ್ನುವುದು ಕಾಂಗ್ರೆಸ್ ಆರೋಪ.

Leave a comment

Leave a Reply

Your email address will not be published. Required fields are marked *

Related Articles

ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಬಸನಗೌಡ ಪಾಟೀಲ್ ಯತ್ನಾಳ್

“ಬೆಂಗಳೂರು: ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಎಂದು ನನಗನ್ನಿಸುತ್ತದೆ ಎಂದು ಬಸನಗೌಡ...

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...