ರಾಮಾಯಣ ಮಹಾಭಾರತ ಅರೇಬಿಕ್ ಭಾಷೆಗೆ ಅನುವಾದಿಸಿದ ಲೇಖಕರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

38

“ಎರಡು ದಿನಗಳ ಕಾಲ ಕುವೈತ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ದಿನವಾದ ಶನಿವಾರ ಭಾರತದ ಎರಡು ಅಪ್ರತಿಮ ಮಹಾಕಾವ್ಯಗಳಾದ ಮಹಾಭಾರತ ಮತ್ತು ರಾಮಾಯಣವನ್ನು ಅರೇಬಿಕ್ ಭಾಷೆಗೆ ಅನುವಾದಿಸಿ ಪ್ರಕಟಿಸಿದ ಇಬ್ಬರು ಕುವೈತ್ ಪ್ರಜೆಗಳನ್ನು ಭೇಟಿಯಾದರು.

ಇಂದು ಲೇಖಕರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ ಎರಡು ಮಹಾಕಾವ್ಯಗಳ ಅರೇಬಿಕ್ ಆವೃತ್ತಿಗಳಿಗೆ ಸಹಿ ಹಾಕಿದರು. “ರಾಮಾಯಣ ಮತ್ತು ಮಹಾಭಾರತದ ಅರೇಬಿಕ್ ಭಾಷಾಂತರಗಳನ್ನು ನೋಡಲು ನನಗೆ ಸಂತೋಷವಾಗುತ್ತಿದೆ.

ನಾನು ಅಬ್ದುಲ್ಲಾ ಅಲ್-ಬರೂನ್ ಮತ್ತು ಅಬ್ದುಲ್ ಲತೀಫ್ ಅಲ್-ನೆಸೆಫ್ ಅವರ ಅನುವಾದ ಮತ್ತು ಪ್ರಕಟಣೆಯಲ್ಲಿ ಅವರ ಪ್ರಯತ್ನಗಳಿಗಾಗಿ ಅಭಿನಂದಿಸುತ್ತೇನೆ

. ಅವರ ಈ ಕ್ರಮವು ಜಾಗತಿಕವಾಗಿ ಭಾರತೀಯ ಸಂಸ್ಕೃತಿಯ ಜನಪ್ರಿಯತೆಯನ್ನು ಎತ್ತಿ ತೋರಿಸುತ್ತದೆ ಎಂದು ಪ್ರಧಾನಿ ಮೋದಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕೋಟ್ಯಂತರ ಹಿಂದೂಗಳ ನಂಬಿಕೆಯ ಪ್ರತೀಕವಾಗಿರುವ ‘ರಾಮಾಯಣ’ ಮತ್ತು ‘ಮಹಾಭಾರತ’ದ ಪುಸ್ತಕವನ್ನು ಕುವೈತ್‌ನಲ್ಲಿ ಪ್ರಧಾನಿ ಮೋದಿ ಹಿಡಿದುಕೊಂಡಿರುವ ಫೋಟೋ ಭಾರೀ ವೈರಲ್‌ ಆಗುತ್ತಿದೆ.

ಕುವೈತ್‌ನ ಅಮೀರ್, ಶೇಖ್‌ ಮಿಶಾಲ್‌ ಅಲ್‌ ಅಹ್ಮದ್‌ ಅಲ್‌ ಜಬೇರ್‌ ಅಲ್‌ ಸಬ್ಹಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಕುವೈತ್‌ಗೆ ತೆರಳಿದ್ದಾರೆ. ಇದು 43 ವರ್ಷಗಳ ನಂತರ ಗಲ್ಫ್ ರಾಷ್ಟ್ರಕ್ಕೆ ಭಾರತದ ಪ್ರಧಾನಿಯೊಬ್ಬರು ಮೊದಲ ಬಾರಿ ಭೇಟಿ ನೀಡುತ್ತಿದ್ದಾರೆ.

ಭೇಟಿ ವೇಳೆ ಮೋದಿಯವರು ಅಲ್ಲಿನ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ ಜೊತೆಗೆ ಕುವೈತ್‌ನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರೊಂದಿಗೆ ಸಂವಾದ ನಡೆಸಲಿದ್ದಾರೆ.

ಈ ಭೇಟಿಯು ಭಾರತ ಮತ್ತು ಕುವೈತ್‌ ನಡುವಿನ ಬಹುಮುಖಿ ಸಂಬಂಧವನ್ನು ಬಲಪಡಿಸಲು ನೆರವಾಗಲಿದೆ ಎಂದು ಸಚಿವಾಲಯ ತಿಳಿಸಿದೆ.

Leave a comment

Leave a Reply

Your email address will not be published. Required fields are marked *

Related Articles

ಜೆರುಸಲೇಂ ಅಲ್-ಅಕ್ಸಾ ಮಸೀದಿ  ಮೇಲೆ ಇರಾನ್ ಕ್ಷಿಪಣಿ ದಾಳಿ

ಈದ್ ಅಲ್-ಫಿತರ್‌ ದಿನವೇ ಜೆರುಸಲೇಂ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಅಲ್-ಅಕ್ಸಾ ಮಸೀದಿಯಿಂದ ಕೇವಲ...

ಇಂಧನ ಮೂಲಸೌಕರ್ಯದ ಮೇಲೆ ದಾಳಿಗೆ ಇರಾನ್ ತೀವ್ರ ಆಕ್ರೋಶ ಅನಿಯಂತ್ರಿತ ಪ್ರತಿದಾಳಿ” ಇರಾನ್ ಸ್ಪಷ್ಟ ಎಚ್ಚರಿಕೆ

“ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಇಂಧನ ಮೂಲಸೌಕರ್ಯದ ಮೇಲೆ ನಡೆದ ದಾಳಿಗೆ ಇರಾನ್ ತೀವ್ರ...

ಹಾರ್ಮುಜ್ ಜಲಸಂಧಿಯ ಬಳಿ ಸಮುದ್ರ ಸಂಚಾರಕ್ಕೆ ಅಡ್ಡಿ ಭಾರತೀಯ ಯುದ್ಧನೌಕೆ    ಭದ್ರತೆಯಲ್ಲಿ ಹಾರ್ಮುಜ್ ಜಲಸಂಧಿ ದಾಟಿದ ಭಾರತದ ಎಲ್ ಪಿಜಿ ಟ್ಯಾಂಕರ್

ನವದೆಹಲಿ: ಇರಾನ್ ಸಂಘರ್ಷದ ನಡುವೆಯೇ ಶನಿವಾರವೂ ಕೂಡ ಭಾರತ ಮೂಲದ  ಎಲ್ ಪಿಜಿ  ಟ್ಯಾಂಕರ್ ವೊಂದು...

ಇರಾನ್‌ನ ಪ್ರಮುಖ ತೈಲ ಶುದ್ಧೀಕರಣ ಘಟಕ ಮೇಲೆ ಇಸ್ರೇಲ್ ದಾಳಿ ನೆರೆ ರಾಷ್ಟ್ರ ಗಳ ಕ್ಷಮೆ ಕೇಳಿದ ಇರಾನ್

ಅಮೆರಿಕಾ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ಎರಡನೇ ವಾರಕ್ಕೆ ಕಾಲಿಟ್ಟಿದ್ದು, ಇರಾನ್ ಹಾಗೂ ಮಧ್ಯಪ್ರಾಚ್ಯದ...