ಕಾಂಗ್ರೆಸ್ ಬೆಳಗಾವಿ ಅಧಿವೇಶನಕ್ಕೆ ಶತಮಾನೋತ್ಸವ ಸಂಭ್ರಮ ಬೆಳಗಾವಿಯಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ

55

“ಮಹಾತ್ಮ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಡಿ.26 ಮತ್ತು 27ರಂದು ಬೆಳಗಾವಿಯಲ್ಲಿ ಶತಮಾನೋತ್ವ ಕಾರ್ಯಕ್ರಮ ಆಯೋಜಿಸಲಾಗಿದ್ದು,

ಕಾರ್ಯಕ್ರಮದಲ್ಲಿ 150 ಜನ ಸಂಸದರು ಪಾಲ್ಗೊಳ್ಳಲಿದ್ದಾರೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿಯವರು ಶನಿವಾರ ಹೇಳಿದರು.

ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು, ಸ್ವಾತಂತ್ರ್ಯ ಪೂರ್ವ 1924ರಲ್ಲಿ ಮಹಾತ್ಮಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷತೆವಹಿಸಿ, ದೇಶದ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ್ದು, ಅವಿಸ್ಮರಣೀಯ ಕ್ಷಣ

. ಈ ಘಟನೆಯ ಮೆಲುಕು ಹಾಕಲು ಡಿ.26 ರಂದು ಗಾಂಧಿ ಬಾವಿ ಬಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಪಕ್ಷದ ಕಾರ್ಯಕಾರಿ ಸಭೆ ಕರೆಯಲಾಗಿದೆ. ಡಿ.27ರಂದು ಸಾರ್ವಜನಿಕ ಸಭೆ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಪಾಲ್ಗೊಳ್ಳಲಿದ್ದಾರೆ.

ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಎಲ್ಲಾ ಕಾಂಗ್ರೆಸ್ಸಿಗರು ಭಾಗವಹಿಸಲಿದ್ದಾರೆಂದು ಹೇಳಿದರು. ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಶತಮಾನೋತ್ಸವ ಸಭೆ: ಪಕ್ಷದಿಂದ ಭರದ ಸಿದ್ಧತೆ

ಕಾರ್ಯಕ್ರಮ ಯಶಸ್ವಿಗಾಗಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಕೇಂದ್ರದ ಮಾಜಿ ಸಚಿವ ವೀರಪ್ಪ ಮೊಯ್ಲಿ, ಹಿರಿಯ ಮುಖಂಡರು ಸೇರಿದಂತೆ 60 ಜನರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ.

ಈ ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, 150 ಸಂಸದರು ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ.

ವಿಧಾನಸೌಧ ಆವರಣದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಉದ್ಘಾಟನೆ ನಡೆಯಲಿದ್ದು, ನಂತರ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ. ಎಲ್ಲಾ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅಗತ್ಯ ಕ್ರಮ ಕೈಗೊಂಡಿದ್ದಾರೆ.

ಶತಮಾನೋತ್ಸವ ಕಾರ್ಯಕ್ರಮ ಹಿನ್ನೆಲೆಯಲ್ಲಿ ಈಗಾಗಲೇ ಬೆಳಗಾವಿ ನಗರದಲ್ಲಿ ಲೈಟಿಂಗ್ ಅಳವಡಿಸಿದ್ದು, ಸಾರ್ವಜನಿಕರು ಲೈಟಿಂಗ್ ವೀಕ್ಷಿಸುತ್ತಿದ್ದಾರೆ.

ಇನ್ನು ಕಾರ್ಯಕ್ರಮದಲ್ಲಿ ಪಕ್ಷ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳಲಿದೆ ಎಂದು ಇದೇ ವೇಳೆ ತಿಳಿಸಿದರು.

Leave a comment

Leave a Reply

Your email address will not be published. Required fields are marked *

Related Articles

ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಬಸನಗೌಡ ಪಾಟೀಲ್ ಯತ್ನಾಳ್

“ಬೆಂಗಳೂರು: ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಎಂದು ನನಗನ್ನಿಸುತ್ತದೆ ಎಂದು ಬಸನಗೌಡ...

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...