ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ: ಯಾವುದೇ ಕಾರಣಕ್ಕೂ ಕ್ಷಮಿಸಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್

2

ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅವರು ವಿಧಾನ ಪರಿಷತ್ ನಲ್ಲಿ ತಮ್ಮ ವಿರುದ್ಧ ಬಳಸಿದ್ದಾರೆ ಎನ್ನಲಾದ ಅಶ್ಲೀಲ ಪದಕ್ಕೆ ಸಂಬಂಧಿಸಿದ ವಿಡಿಯೋವನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೋಮವಾರ ಬಿಡುಗಡೆ ಮಾಡಿದ್ದಾರೆ.

ವಿಡಿಯೋ ಬಿಡುಗಡೆ ಮಾಡಿ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಸಿಟಿ ರವಿ ವಿರುದ್ಧ ಕಾನೂನು ಹೋರಾಟ ಮುಂದುವರಿಸುವುದಾಗಿ ತಿಳಿಸಿದ್ದಾರೆ

. ಈ ಸಂಬಂಧ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶೀಘ್ರ ಕ್ರಮಕೈಗೊಳ್ಳಬೇಕು ಎಂದು ಮನವಿ ಸಲ್ಲಿಸುತ್ತೇನೆ ಎಂದು ಸಚಿವೆ ಹೇಳಿದ್ದಾರೆ.

ಯಾವುದೇ ಕಾರಣಕ್ಕೂ ಸಿಟಿ ರವಿಯನ್ನು ಕ್ಷಮಿಸಲ್ಲ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ. ಅವಕಾಶ ಸಿಕ್ಕರೆ ಪ್ರಧಾನಿಯವರನ್ನು ಭೇಟಿ ಮಾಡಿ ನನಗೆ ಆಗಿರುವ ಅನ್ಯಾಯದ ಬಗ್ಗೆ ಅವರ ಗಮನಕ್ಕೆ ತರುತ್ತೇನೆ ಎಂದರು.

ಡಿ.19ರಂದು ವಿಧಾನ ಪರಿಷತ್ತಿನಲ್ಲಿ ನಡೆದ ವಾಗ್ವಾದದ ವೇಳೆ ಸದನವನ್ನು ಸ್ವಲ್ಪ ಹೊತ್ತು ಮುಂದೂಡಿದಾಗ ರವಿ ಅವರು ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಪದ ಬಳಸಿದ್ದಾರೆ ಎನ್ನಲಾಗಿದೆ. “ನಾನು ಆಘಾತಕ್ಕೊಳಗಾಗಿದ್ದರಿಂದ ಎರಡು ದಿನಗಳಿಂದ ಮೌನವಾಗಿದ್ದೆ.

ನಾನು ಯಾರಿಂದಲೂ ಅಂತಹ ಮಾತುಗಳನ್ನು ಕೇಳಿಲ್ಲ. ನಾನು ಅನ್ಯಾಯದ ವಿರುದ್ಧ ಹೋರಾಡಿ ರಾಜಕೀಯದಲ್ಲಿ ಮುಂದೆ ಬಂದಿದ್ದೇನೆ. ನನ್ನ ವೃತ್ತಿಜೀವನದಲ್ಲಿ ನನಗೆ ರೆಡ್ ಕಾರ್ಪೆಟ್ ಇರಲಿಲ್ಲ. ನಾನು 26 ವರ್ಷಗಳ ನಂತರ ಈ ಮಟ್ಟಕ್ಕೆ ಬಂದಿದ್ದೇನೆ’’ ಎಂದು ಹೆಬ್ಬಾಳ್ಕರ್ ಸುದ್ದಿಗಾರರಿಗೆ ತಿಳಿಸಿದರು.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮತ್ತು ಅವರ ಪಂಚಮಸಾಲಿ ಲಿಂಗಾಯತ ಸಮುದಾಯದ ಕೇಸರಿ ಪಕ್ಷದ ಮುಖಂಡರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಅವರು ಮಹಿಳೆಯನ್ನು ಅವಮಾನಿಸಿದ ವ್ಯಕ್ತಿಯನ್ನು ಬೆಂಬಲಿಸಿದ್ದಕ್ಕಾಗಿ “ಅಸಹ್ಯ”ವಾಗುತ್ತಿದೆ ಎಂದು ಕಿಡಿ ಕಾರಿದರು. ‘

ರಾಜಕೀಯ ಮತ್ತು ತಮ್ಮ ಪಕ್ಷಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ. ರಾಮ, ರಾಮ.. ಎಂದು ಜಪಿಸುತ್ತಿರುವ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು. ನಿಮ್ಮನ್ನು ಮಹಿಳೆಯರು ಕ್ಷಮಿಸಲ್ಲ ಎಂದು ಹೆಬ್ಬಾಳ್ಕರ್ ವಾಗ್ದಾಳಿ ನಡೆಸಿದರು.

ವಿಧಾನಪರಿಷತ್ ಸಭಾಪತಿಗೆ ಮತ್ತೊಮ್ಮೆ ಮನವಿ ಸಲ್ಲಿಸುತ್ತೇನೆ ಎಂದ ಅವರು, ಅವರು ಸದನದಲ್ಲಿ ಧ್ವನಿಮುದ್ರಣ ಆಫ್ ಆಗಿದ್ದರಿಂದ ಯಾವುದೇ ವಿಡಿಯೋ ಅಥವಾ ಆಡಿಯೋ ರೆಕಾರ್ಡಿಂಗ್(ಅವಹೇಳನಕಾರಿ ಪದ ಬಳಕೆ ಬಗ್ಗೆ) ಸಿಕ್ಕಿಲ್ಲ ಎಂದು ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ಮಾಧ್ಯಮಗಳಲ್ಲಿ ಕೆಲವು ರೆಕಾರ್ಡಿಂಗ್‌ಗಳನ್ನು ನೋಡಿದ್ದೇನೆ, ನನ್ನ ಬಳಿಯೂ ಸಾಕ್ಷ್ಯವಿದೆ, ನಾನು ಅದನ್ನು ಬಿಡುಗಡೆ ಮಾಡುತ್ತೇನೆ” ಎಂದು ಹೇಳಿದರು. ರವಿಯನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ.

ನಾನು ಹೋರಾಟ ಮಾಡುತ್ತೇನೆ ಮತ್ತು ಈ ಅವಹೇಳನಕಾರಿ ಪದವನ್ನು ಬಳಸಿ ಮಹಿಳಾ ಸಮುದಾಯವನ್ನು ಅವಮಾನಿಸಿದ ಅವರಿಗೆ ಶಿಕ್ಷೆಯಾಗುವವರೆಗೂ ವಿರಮಿಸುವುದಿಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ಅಂತಿಮ ಸೋಮವಾರ ಘೋಷಣೆ ಸಾಧ್ಯತೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ...

ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಬೆಂಗಾವಲು ವಾಹನ ಅಪಘಾತ ನಾಲ್ವರಿಗೆ ಗಾಯ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಮೈಸೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ ಮುಗಿಸಿ ವಾಪಸ್‌...

ರಾಜ್ಯದಲ್ಲಿ ‘ಪರಮಾಣು ವಿದ್ಯುತ್ ಸ್ಥಾವರ’ ಸ್ಥಾಪನೆಗೆ ತಾತ್ವಿಕ ಒಪ್ಪಿಗೆ   :: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್

ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರವನ್ನು ಸ್ಥಾಪಿಸಲು ತಾತ್ವಿಕ ಅನುಮೋದನೆ ಸಿಕ್ಕಿದೆ. ಜೊತೆಗೆ ರಾಷ್ಟ್ರೀಯ ಉಷ್ಣ ವಿದ್ಯುತ್...